ಆದಾಯ ತೆರಿಗೆ ಪಾವತಿದಾರರಿಗೆ ರಿಲೀಫ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ
Team Udayavani, Feb 1, 2019, 6:50 AM IST
ನವದೆಹಲಿ: 2018-19ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಭರ್ಜರಿ ಕೊಡುಗೆಗಳನ್ನು ಘೋಷಿಸಲಾಗಿದೆ. ಆದಾಯ ತೆರಿಗೆ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷದವರೆಗೆ ತೆರಿಗೆ ವಿನಾಯ್ತಿ ಘೋಷಿಸಿದೆ. ಅಷ್ಟೇ ಅಲ್ಲ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ. ಇದರಿಂದಾಗಿ ಒಟ್ಟು 6.5 ಲಕ್ಷದವರೆಗೆ ತೆರಿಗೆ ಪಾವತಿಸಬೇಕಾಗಿಲ್ಲ.
ಈ ಹಿಂದಿನ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ವೈಯಕ್ತಿಕ ಆದಾರ ತೆರಿಗೆ ಮಿತಿಯನ್ನು ಹೆಚ್ಳ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಈ ಬಾರಿಯ ಮಧ್ಯಂತರ ಬಜೆಟ್ ನಲ್ಲಿಯೂ ಕೂಡಾ ವೈಯಕ್ತಿಕ ಆದಾಯ ತೆರಿಗೆ ಮಿತಿ 5 ಲಕ್ಷಕ್ಕೆ ಏರಿಕೆ ಮಾಡುತ್ತಾರೆಂಬ ನಿರೀಕ್ಷೆ ಈ ಬಾರಿ ಈಡೇರಿದೆ.
ಈ ಬಾರಿಯೂ ತೆರಿಗೆ ಮಿತಿಯಲ್ಲಿ ಹೆಚ್ಚಳ ಇಲ್ಲ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ತೆರಿಗೆ ಮಿತಿಯನ್ನು 2.5ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಳ ಮಾಡಿರುವುದಾಗಿ ಘೋಷಿಸಿದಾಗ ಕಲಾಪದಲ್ಲಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.
ಅಷ್ಟೇ ಅಲ್ಲ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ. ಗೃಹ ಸಾಲ 2 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಸ್ಟ್ಯಾಂಡರ್ಡ್ ಡಿಡಕ್ಷನ್ 40 ಸಾವಿರದಿಂದ 50 ಸಾವಿರಕ್ಕೆ ಏರಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.