ಉದ್ಯೋಗ ನೀಡುವ ಶಿಕ್ಷಣ ನೀತಿ ಜಾರಿಯಾಗಲಿ
Team Udayavani, Feb 1, 2019, 10:07 AM IST
ಚಿಕ್ಕಮಗಳೂರು: ಯುವ ಸಮುದಾಯದ ಉದ್ಯೋಗಕ್ಕೆ ಅನುಕೂಲವಾಗುವಂತಹ ಶಿಕ್ಷಣ ನೀತಿ ಜಾರಿಗೆ ತರುವ ಅಗತ್ಯವಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಕೌಶಲ್ಯಾಭಿವೃದ್ಧಿ ಕಚೇರಿಗಳ ಸಹಯೋಗದೊಂದಿಗೆ ಗುರುವಾರ ನಗರದ ಮಿನಿ ಉದ್ಯೋಗ ಮೇಳ
ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಬ್ರಿಟಿಷರು ತಮಗೆ ಅಗತ್ಯವಾಗಿದ್ದ ಗುಮಾಸ್ತ ಹುದ್ದೆಗೆ ಬೇಕಾದಂತಹ ಶಿಕ್ಷಣ ನೀತಿ ರೂಪಿಸಿದ್ದರು. ಸ್ವಾತಂತ್ರ್ಯ ನಂತರ ಸರಿಯಾದ ಶಿಕ್ಷಣ ನೀತಿ ರೂಪಿಸುವಲ್ಲಿ ವಿಫಲವಾಗಿದ್ದರಿಂದಲೇ ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ ಎಂದರು.
ಹಿಂದೆ ದೇಶದಲ್ಲಿ ಪ್ರತಿಯೊಬ್ಬರೂ ಉದ್ಯೋಗವಂತರಾಗಿದ್ದರು. ಪಾರಂಪರಿಕವಾಗಿ ಬಂದಿದ್ದ ಉದ್ಯೋಗವನ್ನು ಪ್ರತಿಯೊಬ್ಬರೂ ಮಾಡುತ್ತಿದ್ದರು. ಪಾರಂಪರಿಕ ಉದ್ಯೋಗಕ್ಕೆ ಆಧುನಿಕ ಸ್ಪರ್ಶ ಕೊಟ್ಟು, ಮೇಲು-ಕೀಳು ಎಂಬ ಭಾವನೆ ತೆಗೆದು ಹಾಕಿದ್ದರೆ ಪ್ರತಿಯೊಂದು ಉದ್ಯೋಗಕ್ಕೆ ಆರ್ಥಿಕ ಬಲವನ್ನು ಶಾಸನದ ಮೂಲಕ ಕೊಟ್ಟಿದ್ದರೆ, ಬಸವಣ್ಣನವರ ಕಾಯಕವೇ ಕೆೃಲಾಸ ಎಂಬ ತತ್ವಕ್ಕೆ ಸಾಮಾಜಿಕ ಬಲ ತುಂಬಿದ್ದರೆ ದೇಶದಲ್ಲಿ ನಿರುದ್ಯೋಗಿಗಳು ಯಾರೂ ಇರುತ್ತಿರಲಿಲ್ಲ ಎಂದು ಹೇಳಿದರು. ಇಡೀ ವಿಶ್ವದಲ್ಲಿಯೇ ಅತೀ ಹೆಚ್ಚು ಯುವಜನತೆ ಹೊಂದಿರುವ ದೇಶ ನಮ್ಮದಾಗಿದೆ. ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ, ಉದ್ಯೋಗಶೀಲರನ್ನಾಗಿಸಿದರೆ ದೇಶದ ಅಭಿವೃದ್ಧಿಯ ವೇಗ 10 ಪಟ್ಟು ಹೆಚ್ಚಾಗುತ್ತದೆ. ಇದನ್ನು ಮನಗಂಡು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಆ ನಿಟ್ಟಿನಲ್ಲಿ ದಾಪುಗಾಲು ಇಟ್ಟಿದ್ದಾರೆ ಎಂದರು.
ಯುವಜನತೆಯಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸುವ ಉದ್ದೇಶದಿಂದ ದೇಶದಲ್ಲಿ 4800ಕ್ಕೂ ಹೆಚ್ಚು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ತೆರೆಯಲಾಗಿದೆ. ಯುವಜನತೆಯಲ್ಲಿರುವ ಕೌಶಲ್ಯ ಗುರುತಿಸಿ ಅವರು ಇಚ್ಛಿಸಿದ ರೀತಿಯಲ್ಲಿ ತರಬೇತಿ ಕೊಡಲಾಗುತ್ತಿದೆ ಎಂದು ಹೇಳಿದರು.
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರನ್ನು ಎದುರು ಬದುರಾಗಿಸುವ ಉದ್ದೇಶದಿಂದ ಉದ್ಯೋಗ ಮೇಳ ನಡೆಸಲಾಗುತ್ತಿದೆ. ಇಲ್ಲಿ ಎಲ್ಲರಿಗೂ ಉದ್ಯೋಗ ದೊರೆಯಲು ಸಾಧ್ಯವಾಗುವುದಿಲ್ಲ. ಇಲ್ಲಿ ಉದ್ಯೋಗ ದೊರೆಯದಿದ್ದವರಿಗೆ ಕೌಶಲ್ಯಾಧಾರಿತ ತರಬೇತಿ ಕೊಡಿಸಲಾಗುವುದು. ತರಬೇತಿ ಪಡೆದುಕೊಂಡವರಲ್ಲಿ ಶೇ.70 ರಷ್ಟು ಜನರಿಗೆ ಉದ್ಯೋಗ ಕೊಡಲಾಗುವುದು. ಉಳಿದವರಿಗೆ ಸ್ವ ಉದ್ಯೋಗ ಸ್ಥಾಪಿಸಲು ಸರ್ಕಾರದಿಂದ ಆರ್ಥಿಕ ಸಹಾಯ ನೀಡಲಾಗುವುದು ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಮಾತನಾಡಿ, ಸರ್ಕಾರವು ಯುವ ಸಮುದಾಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಈ ಯೋಜನೆಗಳ ಮಾಹಿತಿ ಗ್ರಾಮೀಣ ಪ್ರದೇಶದವರಿಗೆ ತಿಳಿಯದೆ ಅವರು ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ ಎಂದರು.
ಅತೀ ಕಡಿಮೆ ಸಮಯದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದರಿಂದ ಹೆಚ್ಚಿನ ಪ್ರಚಾರ ದೊರೆಯದೆ ಮೇಳದಲ್ಲಿ ಭಾಗವಹಿಸಿರುವ ಯುವಜನತೆಯ ಸಂಖ್ಯೆ ಕಡಿಮೆ ಇದೆ. ಫೆಬ್ರವರಿ ಅಂತ್ಯದಲ್ಲಿ ಮತ್ತೂಂದು ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಮಾರಂಭದಲ್ಲಿ ನಗರಸಭಾ ಅಧ್ಯಕ್ಷೆ ಶಿಲ್ಪಾ ರಾಜಶೇಖರ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೆ.ಡಿ. ಮಂಜುನಾಥ್, ಕೌಶಲ್ಯಾಭಿವೃದ್ಧಿ ಕೇಂದ್ರದ ಸಹಾಯಕ ನಿರ್ದೇಶಕ ಬಿ.ಕೆ. ರವೀಂದ್ರ ನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.