ಕಡಬ: ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಭೇಟಿ, ಸಮಾಲೋಚನೆ


Team Udayavani, Feb 1, 2019, 10:18 AM IST

february-15.jpg

ಕಡಬ: ಮುಂದಿನ ಶೈಕ್ಷಣಿಕ ವರ್ಷದಿಂದ ಕಡಬದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ಹಾಗೂ ಲಭ್ಯ ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸುವ ಸಲುವಾಗಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ| ಅಪ್ಪಾಜಿ ಗೌಡ ಗುರುವಾರ ಕಡಬಕ್ಕೆ ಭೇಟಿ ನೀಡಿದರು.

ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಮಾಲೋಚನ ಸಭೆ ನಡೆಸಿದ ಅವರು, ಕಡಬದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸಲು ಸರಕಾರದಿಂದ ಸೂಚನೆ ಇದೆ. ಆದರೆ ಹೊಸದಾಗಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಸೂಕ್ತ ಸ್ಥಳ, ಕೋರ್ಸ್‌ಗಳು, ಪರಿಸರದ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ, ಸ್ಥಳೀಯವಾಗಿ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿ ಕಾಲೇಜು ಶಿಕ್ಷಣ ಆಯುಕ್ತರಿಗೆ ವರದಿ ಸಲ್ಲಿಸಬೇಕಿದೆ ಎಂದು ಹೇಳಿದರು.

ಶೈಕ್ಷಣಿಕ ಸಮನ್ವಯಾಧಿಕಾರಿ ಡಾ| ಶ್ರೀನಿವಾಸಯ್ಯ ಮಾತನಾಡಿ, ಪದವಿ ಕಾಲೇಜು ಸ್ಥಾಪನೆಗೆ ನಿಯಾನುಸಾರ 6 ಎಕ್ರೆ ಜಮೀನು, ಪ್ರಥಮ ವರ್ಷಕ್ಕೆ 5 ಕೊಠಡಿಗಳು, ಪೀಠೊಪಕರಣ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಗಳು ಬೇಕಾಗುತ್ತವೆ. ಈ ಎಲ್ಲ ಸೌಕರ್ಯಗಳಿರುವ ಬೇರೆ ಕಟ್ಟಡದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಲಾಗುವುದು.

ಭವಿಷ್ಯದಲ್ಲಿ ಅನುದಾನ ಪಡೆದು ಸ್ವಂತ ಕಟ್ಟಡ ನಿರ್ಮಿಸಿ ಅಲ್ಲಿಗೆ ಕಾಲೇಜುನ್ನು ಸ್ಥಳಾಂತರಿಸಬಹುದು. ಮಂಗಳೂರು ವಿಶ್ವವಿದ್ಯಾಲ ಯದಲ್ಲಿ ನೀಡಲಾಗುವ ಎಲ್ಲ ವಿಷಯ ಗಳನ್ನು ಹೊಸ ಕಾಲೇಜಿನಲ್ಲಿ ಬೋಧಿಸಲು ಅವಕಾಶವಿರುತ್ತದೆ ಎಂದರು.

ತಾತ್ಕಾಲಿಕವಾಗಿ ಕಾಲೇಜು ಪ್ರಾರಂಭಿಸಲು ಕಡಬ ಮಾ.ಹಿ.ಪ್ರಾ. ಶಾಲೆಯಲ್ಲಿ ಕೊಠಡಿ ವ್ಯವಸ್ಥೆ ಇದೆ. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಒಪ್ಪಿಗೆ ಪಡೆಯುವ, ಕಾಲೇಜಿಗೆ ಅನುಮತಿ ಸಿಕ್ಕಿದ ಕೂಡಲೇ ಕಡಬ ಸ.ಪ.ಪೂ. ಕಾಲೇಜು ಸಮೀಪ ಪದವಿ ಕಾಲೇಜಿಗೆ ನಿಗದಿಗೊಳಿಸಿದ 5 ಎಕ್ರೆ ಜಮೀನಿನಲ್ಲಿ ಕಟ್ಟಡ ನಿರ್ಮಿಸಲು ಪ್ರಯತ್ನಿಸೋಣ ಎಂದು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ಹೇಳಿದರು. ಕಡಬ ಪ.ಪೂ. ಕಾಲೇಜಿನ ಉಪನ್ಯಾಸಕ ವಾಸುದೇವ ಗೌಡ ಕೋಲ್ಪೆ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ ಸಲಹೆ ಸೂಚನೆ ನೀಡಿದರು.

ತಾಲೂಕು ಪಂಚಾಯತ್‌ ಸದಸ್ಯರಾದ ಫಝಲ್‌ ಕೋಡಿಂಬಾಳ, ಗಣೇಶ್‌ ಕೈಕುರೆ, ಎಪಿಎಂಸಿ ಮಾಜಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ನಿವೃತ್ತ ಶಿಕ್ಷಕರಾದ ತಮ್ಮಯ್ಯ ಗೌಡ ಸುಳ್ಯ, ಜನಾರ್ದನ ಗೌಡ ಪಣೆಮಜಲು, ಸ್ಕರಿಯ ಕಳಾರ, ವಿ.ಎಂ. ಕುರಿಯನ್‌, ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ಸದಸ್ಯರಾದ ಸಿ.ಜೆ. ಸೈಮನ್‌, ಹನೀಫ್‌ ಕೆ.ಎಂ., ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ನಾಯ್ಕ, ಶರೀಫ್‌ ಎ.ಎಸ್‌., ಜಯಂತಿ ಗಣಪಯ್ಯ, ನೀಲಾವತಿ ಶಿವರಾಮ, ರೇವತಿ, ಶಾಲಿನಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಉಂಡಿಲ, ಶಿಕ್ಷಕರಾದ ವಿಜಯಕುಮಾರ್‌ ಅಬ್ದುಲ್‌ ಖಾದರ್‌, ಪ್ರಮುಖರಾದ ಸ್ಟೀಫನ್‌ ಕುತ್ಯಾಡಿ, ಥಾಮಸ್‌ ಇಡೆಯಾಳ ಉಪಸ್ಥಿತರಿದ್ದರು.

ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್‌ ರೈ ಕರ್ಮಾಯಿ ಸ್ವಾಗತಿಸಿದರು. ಪದವಿಪೂರ್ವ ಕಾಲೇಜು ಉಪನ್ಯಾಸಕ ಸಲಿನ್‌ ಕೆ.ಪಿ. ನಿರೂಪಿಸಿ, ವಂದಿಸಿದರು.

ವಿಜ್ಞಾನ ತರಗತಿ ಆರಂಭಿಸಲು ಮನವಿ
ಹೊಸ ಪದವಿ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ಕಲಾ ವಿಷಯಗಳ ಜತೆಗೆ ವಿಜ್ಞಾನ ವಿಭಾಗವನ್ನೂ ಅಗತ್ಯವಾಗಿ ಆರಂಭಿಸಬೇಕೆಂಬ ಬೇಡಿಕೆ ವ್ಯಕ್ತ ವಾಯಿತು. ಕಡಬ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ದೊಡ್ಡ ಸಂಖ್ಯೆ ಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಉತ್ತಮ ಫ‌ಲಿ ತಾಂಶ ದಾಖಲಾಗುತ್ತಿದೆ. ಸುತ್ತಲಿನ ಪ.ಪೂ. ಕಾಲೇಜುಗಳಲ್ಲೂ ವಿಜ್ಞಾನ ವಿದ್ಯಾರ್ಥಿಗಳಿದ್ದಾರೆ. ವಿಜ್ಞಾನ ವಿಭಾಗ ಆರಂಭಿಸಿದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸಭಿಕರು ಅಧಿಕಾರಿಗಲಿಗೆ ಮನವರಿಕೆ ಮಾಡಿಕೊಟ್ಟರು.

ನಿರ್ಣಯ ಮಂಡನೆ 
ಕಡಬದಲ್ಲಿ ಸರಕಾರಿ ಪ್ರ.ದರ್ಜೆ ಕಾಲೇಜನ್ನು ತಾತ್ಕಾಲಿಕ ಕಟ್ಟಡದಲ್ಲಿ ಪ್ರಾರಂಭಿಸು ವುದಾದರೆ ಪ್ರಥಮ ವರ್ಷದಲ್ಲಿ ಕೊಠಡಿಗಳು, ಶೌಚಾಲಯ, ಕುಡಿಯುವ ನೀರು ಇತ್ಯಾದಿಗಳನ್ನು ಒದಗಿಸಲು ಸಹಕರಿಸುವುದಾಗಿ ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ನಿರ್ಣಯ ಕೈಗೊಂಡು, ಅದರ ಪ್ರತಿಯನ್ನು ಅಧಿಕಾರಿಗಳಿಗೆ ನೀಡಿದರು.

ಸ್ಥಳ ಪರಿಶೀಲನೆ
ಸಭೆಯ ಬಳಿಕ ಜಂಟಿ ನಿರ್ದೇಶಕರು, ಸಮನ್ವಯಾಧಿಕಾರಿ, ಜನಪ್ರತಿನಿಧಿಗಳು ಪದವಿ ಪೂರ್ವ ಕಾಲೇಜಿನ ಬಳಿ ಪದವಿ ಕಾಲೇಜಿಗೆ ನಿಗದಿಪಡಿಸಿದ ಜಮೀನು ಹಾಗೂ ತಾತ್ಕಾಲಿಕ ನೆಲೆಯಲ್ಲಿ ಕಾಲೇಜು ಆರಂಭಿಸಲು ಪ್ರಸ್ತಾವಿಸಲಾದ ಕಡಬ ಸ.ಮಾ.ಹಿ.ಪ್ರಾ. ಶಾಲೆಗೆ ತೆರಳಿ ಅಲ್ಲಿನ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲಿ ಕೆಲವು ಸೌಕರ್ಯಗಳನ್ನು ಕಲ್ಪಿಸಿ ಕಾಲೇಜನ್ನು ತಾತ್ಕಾಲಿಕವಾಗಿ ತೆರೆಯುವ ಬಗ್ಗೆ ಅಧಿಕಾರಿಗಳು ಸಹಮತ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.