ಪಾಠದೊಂದಿಗೆ ಕೌಶಲ್ಯ ಬೆಳೆಸಿಕೊಳ್ಳಿ
Team Udayavani, Feb 1, 2019, 11:15 AM IST
ಕಾರಟಗಿ: ಬದಲಾಗುತ್ತಿರುವ ಪಠ್ಯಕ್ರಮ, ಶಿಕ್ಷಣ ಪದ್ಧತಿಗಳು, ಬೋಧನಾ ವಿಧಾನ ಹಾಗೂ ವೃತ್ತಿ ಕೌಶಲ್ಯಗಳು ಬೆಳೆಸಿಕೊಳ್ಳಲು ಆಗಾಗ ಇಲಾಖೆ ಹಮ್ಮಿಕೊಳ್ಳುವ ಸಮಾಲೋಚನಾ ಸಭೆಗಳು ತರಬೇತಿಗಳು ಅತ್ಯವಶ್ಯಕವಾಗಿವೆ ಎಂದು ಗಂಗಾವತಿ-ಕಾರಟಗಿ ವಲಯ ಸಂಪನ್ಮೂಲ ವ್ಯಕ್ತಿ (ಬಿಆರ್‌ಸಿ) ಯಮನೂರಪ್ಪ ಹೇಳಿದರು.
ಪಟ್ಟಣದ ಬಸವೇಶ್ವರ ನಗರದ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಪಶ್ಚಿಮ ಸಮೂಹ ಸಂಪನ್ಮೂಲ ಕೇಂದ್ರದ 1 ದಿನದ 4ನೇ ಅಗತ್ಯತೆ ಆಧಾರಿತ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ತಾಂತ್ರಿಕವಾಗಿ ಪ್ರಾಯೋಗಿಕವಾಗಿ ಹಾಗೂ ಚಟುವಟಿಕೆಗಳ ಆಧಾರಿತ ಬೋಧನೆಯಿಂದ ಮಕ್ಕಳ ಕಲಿಕೆ ಪರಿಣಾಮಕಾರಿಯಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರು ಉತ್ತಮ ಬೋಧನೆ ಅಳವಡಿಸಿಕೊಂಡು ಗುಣಾತ್ಮಕ ಶಿಕ್ಷಣ ನೀಡುವಂತೆ ಮನವಿ ಮಾಡಿದರು. ನಂತರ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ತಿಮ್ಮಣ್ಣ ನಾಯಕ ಸಮಾಲೋಚನೆ ಸಭೆಯ ರೂಪುರೇಷೆಗಳು ಇಲಾಖಾ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ರಾಮಣ್ಣ ಹಳ್ಳಿಕೇರಿ ಶಿಕ್ಷಕರು ಚಟುವಟಿಕೆಗಳ ಮೂಲಕ ಗಣಿತ ಕಿಟ್ ಬಳಸುವ ವಿಧಾನವನ್ನು ತಿಳಿಸಿದರು.
ಸಮಾಲೋಚನಾ ಸಭೆಯಲ್ಲಿ ಶಿಕ್ಷಕರಿಗೆ ತುಂಬಾ ಉಪಯುಕ್ತ ವಾಗಿದ್ದು, ತರಗತಿಯಲ್ಲಿನ ಕ್ಲಿಷ್ಟಕರ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಯಿತು. ಶಾಲಾ ಮುಖ್ಯೊಪಾಧ್ಯಾಯರಾದ ಸೋಮಪ್ಪ, ಸಹ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕ ಮಂಜುನಾಥ ಬಾಳೆಕುಂದ್ರಿ, ತನ್ವೀರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.