ಸಂಘದ ನೂತನ ಹೆಸರು ತುಳುಸಂಘ ಪಿಂಪ್ರಿ-ಚಿಂಚ್ವಾಡ್‌ ಅನಾವರಣ

Team Udayavani, Feb 1, 2019, 12:26 PM IST

10.jpg

ಪುಣೆ: ತುಳುಕೂಟ ಪಿಂಪ್ರಿ- ಚಿಂಚ್ವಾಡ್‌ ಇದರ ವಾರ್ಷಿಕೋತ್ಸವ ಸಮಾರಂಭವು ಜ. 27ರಂದು ಚಿಂಚಾÌಡ್‌ನ‌ ರಾಮಕೃಷ್ಣ ಮೋರೆ ಸಭಾಗೃಹದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರ ಮದಲ್ಲಿ  ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್‌, ಗೌರವ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಎ. ಗೋಪಾಲ್‌ ಅಂಚನ್‌ ಹಾಗೂ ರಾಷ್ಟ್ರಪತಿ ಪುರಸ್ಕಾರ ಪಡೆದ ಶಿಕ್ಷಕ ಕುದಿ ವಸಂತ್‌ ಶೆಟ್ಟಿ, ಗೌರವ ಅತಿಥಿಯಾಗಿ ಪುಣೆ ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ ಉಪಸ್ಥಿತರಿದ್ದರು. ಅತಿಥಿಗಣ್ಯರು  ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು. 

ಈ ಸಂದರ್ಭ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ವಿ. ಶೆಟ್ಟಿ, ಸಂಘದ ಮಾಜಿ ಕಾರ್ಯಾಧ್ಯಕ್ಷ  ಮಹೇಶ್‌ ಹೆಗ್ಡೆ ಕಟ್ಟಿಂಗೇರಿಮನೆ ನಿಕಟಪೂರ್ವ ಕಾರ್ಯಾಧ್ಯಕ್ಷ ಶ್ಯಾಮ್‌ ಸುವರ್ಣ ಅವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ  ಸಂಘದ ಉಪಾಧ್ಯಕ್ಷರಾದ ದಿನೇಶ್‌ ಶೆಟ್ಟಿ  ಉಜಿರೆ, ಶೇಖರ್‌  ಚಿತ್ರಾಪು, ಪ್ರಧಾನ ಕಾರ್ಯದರ್ಶಿ ವಿನಯ್‌ ಶೆಟ್ಟಿ ನಿಟ್ಟೆ, ಕೋಶಾಧಿಕಾರಿ ಗಣೇಶ್‌ ಅಂಚನ್‌, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ  ಸಂತೋಷ್‌ ಶೆಟ್ಟಿ ಪೆರ್ಡೂರು, ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ನಿತಿನ್‌ ಶೆಟ್ಟಿ ನಿಟ್ಟೆ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸತೀಶ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮಿಥುನ್‌ ಶೆಟ್ಟಿ ಉಪಸ್ಥಿತರಿದ್ದರು.  

ಉಡುಪಿ ಶಾಸಕ ರಘುಪತಿ ಭಟ್‌ ಅವರು  ಸಂಘವು ಬದಲಾವಣೆಗೊಂಡು ನೂತನವಾದ ತುಳುಸಂಘ ಪಿಂಪ್ರಿ -ಚಿಂಚಾÌಡ್‌  ಹೆಸರನ್ನು ಅನಾವರಣಗೊಳಿಸಿದರು. 

ತುಳುಕೂಟ ಪಿಂಪ್ರಿ-ಚಿಂಚಾÌಡ್‌  ಇನ್ನು ಮುಂದೆ ತುಳುಸಂಘ ಪಿಂಪ್ರಿ-ಚಿಂಚಾÌಡ್‌ ಎನ್ನುವ ಹೆಸರಿನೊಂದಿಗೆ ಕರೆಸಿಕೊಳ್ಳಲಿದೆ.

ಪುಣೆಯಲ್ಲಿ ಶ್ರೇಷ್ಠ ನಾಯಕತ್ವದೊಂದಿಗೆ ಗುರುತಿಸಿಕೊಂಡು  ಪುಣೆ ಬಂಟರ ಭವನವನ್ನು  ತನ್ನ ನೇತೃತ್ವದಲ್ಲಿ ನಿರ್ಮಿಸಿ ಲೋಕಾರ್ಪಣೆಗೊಳಿಸಿದ, ವಿಶೇಷ ಸಮಾಜ ಸೇವಕನಾಗಿ ಗುರುತಿಸಿ ಕೊಳ್ಳುವ  ಪುಣೆ ತುಳುಕನ್ನಡಿಗರೆಲ್ಲರ  ಪ್ರೀತಿ ವಿಶ್ವಾಸಕ್ಕೆ ಪಾತ್ರರಾದ  ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಮತ್ತು ದಿವ್ಯಾ ಸಂತೋಷ್‌ ಶೆಟ್ಟಿ ದಂಪತಿಯನ್ನು ವರ್ಷದ ಸಾಧಕರನ್ನಾಗಿ ಬೃಹತ್‌ ಹಾರ ತೊಡಿಸಿ, ಫಲ-ಪುಷ್ಪ, ಸ್ಮರಣಿಕೆ, ಸಮ್ಮಾನಪತ್ರಗಳನ್ನು  ನೀಡಿ ಸಮ್ಮಾನಿಸಲಾಯಿತು. ಅತಿಥಿಗಳನ್ನು ಶಾಲು ಹೊದೆಸಿ, ನೆನಪಿನ ಕಾಣಿಕೆಗಳನ್ನು ನೀಡಿ ಸತ್ಕರಿಸಲಾಯಿತು.

ಸಮಾರಂಭದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಎಲೆ-  ಅಡಿಕೆ,  ಹಿಂಗಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ದಿನೇಶ್‌ ಶೆಟ್ಟಿ ಉಜಿರೆ ಸ್ವಾಗತಿಸಿದರು. ಸಂತೋಷ್‌ ಕಡಂಬ, ಶ್ಯಾಮ್‌ ಸುವರ್ಣ, ಸುಧಾಕರ ಶೆಟ್ಟಿ ಪೆಲತ್ತೂರು ಅತಿಥಿಗಳನ್ನು ಪರಿಚಯಿಸಿದರು. ನೂತನ್‌ ಸುವರ್ಣ ಮತ್ತು  ಕುಸುಮಾ ಸಾಲ್ಯಾನ್‌ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ  ಸಂತೋಷ್‌ ಶೆಟ್ಟಿ ಪೆರ್ಡೂರು ವಂದಿಸಿದರು.

ಜಯಲಕ್ಷ್ಮೀ ಪಿ. ಶೆಟ್ಟಿ, ಜ್ಯೋತಿ ವಿ. ಶೆಟ್ಟಿ ಹಾಗೂ ಪ್ರೇಮಾ ವಿ. ಶೆಟ್ಟಿ ಇವರೊಗಳೊಂದಿಗೆ ತಾಳ್ಮೆಯ  ಹಾದಿ  ಎಂಬ ಮುಕ್ತ ಸಂದರ್ಶನ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಮಿತಿ ಸದಸ್ಯರಿಂದ ನೃತ್ಯ ವೈವಿಧ್ಯಗಳು, ಸಂಘದ ಸದಸ್ಯರಿಂದ ರಸಮಂಜರಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿಜೇತ ತುಳು ನಾಟಕ ಮಣ್ಣಿ ಪ್ರದರ್ಶನಗೊಂಡು ಪ್ರೇಕ್ಷಕರ ಮನಸೂರೆಗೊಂಡಿತು.  ಸಂಘದ ಪದಾಧಿಕಾರಿಗಳು ಹಾಗೂ ಯುವ ವಿಭಾಗದ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.