ದಿ| ಚಂದ್ರಶೇಖರ ರಾವ್‌ ಸ್ಮರಣಾರ್ಥ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ

Team Udayavani, Feb 1, 2019, 12:58 PM IST

3001mum20.jpg

ಮುಂಬಯಿ: ಯಾವುದೇ ಸೇವೆಗೆ ಬೇಕಾದಂತಹ ಅರ್ಪಣಾ ಮನೋಭಾವ, ಶ್ರದ್ಧೆ ಚಂದ್ರಶೇಖರ ರಾವ್‌ ಅವರಿಂದ  ನಾವೂ ಕಲಿಯಬೇಕಾದದ್ದು ಬಹಳಷ್ಟಿದೆ. ಮುರಿಯುವುದು ಸುಲಭ,  ಆದರೆ ಕಟ್ಟುವುದು ಕಷ್ಟ. ಅಂತಹ ಕಟ್ಟುವ ಕೆಲಸಗಳನ್ನು ಚಂದ್ರಶೇಖರ್‌ ತಮ್ಮ ಸಂಬಂಧಗಳ ಮೂಲಕ ಸಾಧಿಸಿದ್ದಾರೆ. ಇಂದಿನ ಸಂಘ ಸಂಸ್ಥೆಯಲ್ಲಿರುವವರಿಗೆ ಚಂದ್ರಶೇಖರ್‌ ಅವರೋರ್ವ  ಮಾದರಿಯಾಗಿದ್ದಾರೆ. ಆದ್ದರಿಂದಲೇ ಅವರಿಂದು ಭೌತಿಕಕಾಗಿ ನಮ್ಮೊಂದಿಗಿಲ್ಲದಿದ್ದರೂ ನೆನಪುಗಳಿಂದ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ಸಾಹಿತಿ, ವಿಮರ್ಶಕ ಪ್ರಾಚಾರ್ಯ ಡಾ| ಕೆ. ರಘುನಾಥ್‌ ತಿಳಿಸಿದರು.

ಕವಿ, ಕಥೆಗಾರ, ರಂಗನಟ ಚಂದ್ರಶೇಖರ ರಾವ್‌ ಅವರ ಸ್ಮರಣಾರ್ಥ ಕಳೆದ ಶನಿವಾರ ಭಾಂಡೂಪ್‌ನಲ್ಲಿ ಚಂದ್ರಶೇಖರ ರಾವ್‌ ಮೆಮೋರಿಯಲ್‌ ಟ್ರಸ್ಟ್‌ ಮುಂಬಯಿ ವತಿಯಿಂದ ಶ್ರೀದೇವಿ ಸಿ. ರಾವ್‌ ಅಧ್ಯಕ್ಷತೆಯಲ್ಲಿ ನೇರವೇರಿದ  ಚಂದ್ರಶೇಖರ ರಾವ್‌ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯನ್ನು ಅಭಿನಂದಿಸಿದರು. ಸಮಕಾಲೀನ ವಸ್ತುವನ್ನೊಳಗೊಂಡಿದ್ದ ವೈವಿಧ್ಯತೆಗಳಿಂದ ಕೂಡಿದ ಕವಿತೆಗಳನ್ನು ಇಂದು ಕವಿಗಳು ಪ್ರಸ್ತುತಪಡಿಸಿದ್ದಾರೆ. ಮಾತ್ರವಲ್ಲದೆ ಸಂಬಂಧಗಳ ತೀವ್ರವಾದ ಶೋಧನೆ ಈ ಕವಿತೆಗಳಲಿತ್ತು. ಹೆಚ್ಚು ತೀವ್ರವಾದಷ್ಟು ಕವಿತೆಯ ತೀÅತೆ ಹೆಚ್ಚುತ್ತದೆ. ಅಂತಹ ಕವಿತೆಗಳ ಅಗತ್ಯ ಇಂದು ಇದೆ ಎಂದರು.

ಗೌರವ ಅತಿಥಿಗಳಾಗಿ ಟ್ರಸ್ಟ್‌ನ ವಿಶ್ವಸ್ಥರಾದ ಎಂ. ಎಸ್‌. ಪ್ರತಾಪ್‌, ಗೋಪಾಲ್‌ ಶೇಟ್‌ ಉಪಸ್ಥಿತರಿದ್ದರು. ಶ್ರೀದೇವಿ ರಾವ್‌ ಅವರು ಮಾತನಾಡಿ, ಚಂದಶೇಖರ್‌ ಅವರು ಜೀವಿತ ಕಾಲದಲ್ಲಿ ಹಲವು ಕನಸುಗಳನ್ನು ಹೊಂದಿದ್ದರು. ಇದೀಗ ಅವರ ಹೆಸರಿನ ಟ್ರಸ್ಟಿನ ಮೂಲಕ ಆ ಆಸೆಗಳನ್ನು ಕನಸುಗಳನ್ನು ನೇರವೇರಿಸಲು ಪಣತೊಟ್ಟಿದ್ದೇವೆ. ಯೋಗಾನು ಯೋಗವೆಂಬಂತೆ ವಿವೇಕಾನಂದರ ಹುಟ್ಟುಹಬ್ಬದ  ದಿನದಂದೆ ಅವರ ಸಂಸ್ಮರಣಾ ಕಾರ್ಯಕ್ರಮ ನಡೆಯುತ್ತಿದೆ. ಕವಿಗೋಷ್ಠಿಯ ರೂಪದಲ್ಲಿ ಸಂಬಂಧ ಗಟ್ಟಿಯಾಗಿ ಉಳಿಯಬೇಕು. ಅವರ ಹೆಸರಿನಲ್ಲಿ ಸಾಹಿತ್ಯ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂಬುವುದೇ ನಮ್ಮ ಟ್ರಸ್ಟ್‌ನ ಆಶಯ ಎಂದರು.

ಡಾ| ಕರುಣಾಕರ ಎನ್‌. ಶೆಟ್ಟಿ, ಡಾ| ದಾûಾಯನಿ ಎಡಹಳ್ಳಿ, ಡಾ| ರಜನಿ ವಿ. ಪೈ,  ಡಾ| ಜಿ. ಪಿ. ಕುಸುಮಾ, ಗೋಪಾಲ್‌  ತ್ರಾಸಿ, ಕುಸುಮಾ ಸಿ. ಅಮೀನ್‌ ತಮ್ಮ ಸ್ವರಚಿತ ಕವಿತೆಗಳನ್ನು ವಾಚಿಸಿದರು. ಕವಿಯೂ ಆಗಿದ್ದ ಚಂದ್ರಶೇಖರ ರಾವ್‌ ಅವರ ಕವಿತೆಗಳನ್ನು ವಾಚಿಸಿ ಸಾ. ದಯಾ ಅವರು ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿ.ಪಿ.ಎಂ ಶಾಲೆ ಮುಲುಂಡ್‌ ಇದರ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ಪುಟಾಣಿ ಮಕ್ಕಳಿಂದ  ಶ್ಲೋಕ, ಸ್ತುತಿ ಪಠಣೆ ಹಾಗೂ ಭಗವದ್ಗೀತೆಯ ವಾಚನ ಕಾರ್ಯಕ್ರಮ ನಡೆಯಿತು.  ಎಂ. ಎ. ಅಂಜನ್‌, ಸಂಧ್ಯಾ ರೈಕರ್‌, ಸುಶ್ಮಿತಾ ರಾಯ್ಕರ್‌ ಸಹಕರಿಸಿದ್ದು ಟ್ರಸ್ಟ್‌ನ ಗೌ| ಪ್ರ| ಕಾರ್ಯದರ್ಶಿ ಸಜ್ಜನ್‌ ಎಂ. ಎಸ್‌ ವಂದಿಸಿದರು.

ಟಾಪ್ ನ್ಯೂಸ್

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.