‘ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ’
Team Udayavani, Feb 2, 2019, 5:39 AM IST
ಪುತ್ತೂರು: ಲೋಕಸಭಾ ಚುನಾವಣೆ ಶೀಘ್ರ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲ ಮತಗಟ್ಟೆಗಳನ್ನು ಪೊಲೀಸ್ ಹಾಗೂ ಸೆಕ್ಟರ್ ಅಧಿಕಾರಿಗಳು ಜತೆಯಾಗಿ ಭೇಟಿ ನೀಡಿ ಕುಂದು ಕೊರತೆಗಳ ಕುರಿತು ಪರಿಶೀಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದರು.
ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾ ಭವನದಲ್ಲಿ ಶುಕ್ರವಾರ ನಡೆದ ಪುತ್ತೂರು ಉಪ ವಿಭಾಗದ ದುರ್ಬಲತೆ ಮ್ಯಾಪಿಂಗ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಲವು ಬಾರಿ ಚುನಾವಣಾ ಕರ್ತವ್ಯ ನಿರ್ವಹಿಸಿದ್ದರೂ ಮತ್ತೆ ಏಕೆ ತರಬೇತಿ ಎನ್ನುವ ಭಾವನೆಯನ್ನು ಎಲ್ಲರೂ ಬಿಟ್ಟು ಬಿಡಬೇಕು. ಅನುಭವಗಳಿದ್ದರೂ ಪ್ರತಿ ಚುನಾವಣೆ ಯಲ್ಲಿ ಹೊಸ ಮಾರ್ಗಸೂಚಿಗಳಿರುತ್ತದೆ. ಇದರಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.
ಇಲಾಖೆಯ ಇತರ ಕೆಲಸಗಳಲ್ಲಿ ಏನಾದರೂ ಸಣ್ಣ ಪುಟ್ಟ ತಪ್ಪುಗಳಾದರೆ ಅದನ್ನು ಸರಿಪಡಿಸಿಕೊಂಡು ಹೋಗಲು ಸಾಧ್ಯವಿದೆ. ಆದರೆ ಚುನಾವಣಾ ಕರ್ತವ್ಯ ದಲ್ಲಿ ತಪ್ಪುಗಳಾದರೆ ಸರಿಪಡಿಸುವುದು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬರೂ ಜಾಗರೂಕತೆಯಿಂದ ಕೆಲಸ ನಿರ್ವಹಿಸುವುದು ಆವಶ್ಯಕ. ಕಳೆದ ಚುನಾವಣೆಯಲ್ಲಿ ಸೆಕ್ಟರ್ ಅಧಿಕಾರಿಗಳಾಗಿ ಕೆಲಸ ನಿರ್ವಹಿಸಿ ದವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದವರು ಹೇಳಿದರು.
ಪುತ್ತೂರು ತಹಶೀಲ್ದಾರ್ ಡಾ| ಪ್ರದೀಪ್ ಕುಮಾರ್, ಸುಳ್ಯ ತಹಶೀಲ್ದಾರ್ ಸಂತೋಷ್ ಹಾಗೂ ಬೆಳ್ತಂಗಡಿ ತಹಶೀಲ್ದಾರ್ ತಮ್ಮಯ್ಯ ಚಿನ್ನಪ್ಪ ಹದಿಮಣಿ ಉಪಸ್ಥಿತರಿದ್ದರು.
ಪುತ್ತೂರು ಉಪ ವಿಭಾಗದ ಪೊಲೀಸರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.