ಕಿಡಿಗೇಡಿಗಳ ಉಪಟಳಕ್ಕೆ ಹಂಪಿ ಸ್ಮಾರಕಗಳಿಗೆ ಧಕ್ಕೆ


Team Udayavani, Feb 2, 2019, 7:16 AM IST

bell-2.jpg

ಹೊಸಪೇಟೆ: ಕಿಡಿಗೇಡಿಗಳ ಉಪಟಳಕ್ಕೆ ವಿಶ್ವವಿಖ್ಯಾತ ಹಂಪಿಯ ಪುರಾತನ ಸ್ಮಾರಕಗಳು ಹಾನಿಗೊಳಗಾಗುತ್ತಿದ್ದು, ರಕ್ಷಣೆ ಇಲ್ಲದಂತಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿರುವುದು ಶುಕ್ರವಾರ ತಡವಾಗಿ ಬೆಳಕಿಗೆ ಬಂದಿದೆ.

ಇತ್ತೀಚಿಗೆ ಹಂಪಿಗೆ ಭೇಟಿ ನೀಡಿದ ಕಿಡಿಗೇಡಿಗಳ ಗುಂಪೊಂದು ಗಜಶಾಲೆ ಹಿಂಭಾಗದ ವಿಷ್ಣು ದೇವಾಲಯ ಆವರಣದ ಬೃಹತ್‌ ಕಲ್ಲಿನ ಕಂಬಗಳನ್ನು ನೆಲಕ್ಕುರುಳಿಸಿ ಹಾನಿ ಉಂಟು ಮಾಡಿದೆ. ಈ ಕೃತ್ಯದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಗರ್ಭಗುಡಿ ಮುಂಭಾಗದ ಬೃಹತ್‌ ಗಾತ್ರದ ಕಲ್ಲಿನ ಕಂಭಗಳನ್ನು ಹಾಡಹಗಲೇ ಕೈಯಿಂದ ತಳ್ಳಿ ನೆಲಕ್ಕುರುಳಿಸುತ್ತಿರುವ ಕಿಡಿಗೇಡಿಗಳ ಈ ಕೃತ್ಯವನ್ನು ಪ್ರವಾಸಿಗರೊಬ್ಬರು, ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ದೃಶ್ಯ ಎಲ್ಲೆಡೆ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಹಂಪಿ ವಿಶ್ವ ಪರಂಪರೆ ನಿರ್ವಹಣಾ ಪ್ರಾಧಿಕಾರ ಹಾಗೂ ಪೊಲೀಸ್‌ ಇಲಾಖೆ ಹಂಪಿ ಸ್ಮಾರಕಗಳ ರಕ್ಷಣೆಗಾಗಿ ಸೂಕ್ತ ಭದ್ರತೆ ವ್ಯವಸ್ಥೆ ಕಲ್ಪಿಸಿದ್ದರೂ, ಹಂಪಿಯ ಸ್ಮಾರಕಗಳಿಗೆ ಹಾನಿ ಮಾಡುತ್ತಿರುವ ಘಟನೆಗಳು ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹಂಪಿ ಅಭಿವೃದ್ಧಿ ಹಾಗೂ ರಕ್ಷಣೆಗಾಗಿ ನಾಲ್ಕಾರು ಇಲಾಖೆಗಳು ಇದ್ದರೂ, ಇಂತಹ ಕೃತ್ಯಗಳನ್ನು ತಡೆಯುವಲ್ಲಿ ಇಲಾಖೆಗಳು ಸಂಪೂರ್ಣ ವಿಫಲವಾಗಿವೆ. ಈ ಹಿಂದೆ ಅಚ್ಚುತ ಬಜಾರ್‌ ಕಲ್ಲುಕಂಭ ಹಾಗೂ ಮಾಲ್ಯವಂತ ರಘುನಾಥ ಸ್ವಾಮಿ ದೇವಸ್ಥಾನದ ಮುಂಭಾಗದ ಗಾಳಿ ಗೋಪುರವನ್ನು ದುಷ‌್ಕರ್ಮಿಗಳು ನಾಶ ಮಾಡಿರುವ ಘಟನೆಗಳು ಕಣ್ಮುಂದೆ ಇರುವಾಗ ಸ್ಮಾರಕಗಳು ಪದೇ,ಪದೇ, ಹಾನಿಗೊಳಾಗುತ್ತಿರುವುದು ಇಲಾಖೆಗಳ ನಿರ್ಲಕ್ಷ್ಯ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಇದನ್ನು ಅಲ್ಲೆಗೆಳಿದಿರುವ ಅಧಿಕಾರಿಗಳು ಈ ವಿಡಿಯೋದಲ್ಲಿನ ಕೃತ್ಯ ಹಂಪಿಯದಲ್ಲ ಎಂದು ಹೇಳುವ ಮೂಲಕ ನುಣಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.