RLSP ರ್ಯಾಲಿಯಲ್ಲಿ ಹಿಂಸಾಚಾರ ;ಮಾಜಿ ಕೇಂದ್ರ ಸಚಿವ ಕುಶ್ವಾಹಗೆ ಗಾಯ
Team Udayavani, Feb 2, 2019, 1:56 PM IST
ಪಟ್ನಾ: ಬಿಹಾರದಲ್ಲಿ ಆರ್ಎಲ್ಎಸ್ಪಿ ಪಕ್ಷದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದ ವೇಳೆ ಪೊಲೀಸ್ ಲಾಠಿ ಚಾರ್ಜ್ ನಡೆಸಿದ್ದು, ಮಾಜಿ ಕೇಂದ್ರ ಸಚಿವ, ಆರ್ಎಸ್ಎಲ್ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಸೇರಿ ಹಲವರು ಗಾಯಗೊಂಡಿದ್ದಾರೆ. ಈ ಘಟನೆ ನಿತಿಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರದ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾಗಿದೆ.
ಉಪೇಂದ್ರ ಕುಶ್ವಾಹ ಅವರು ಡಿಸೆಂಬರ್ ತಿಂಗಳಿನಲ್ಲಿ ಎನ್ಡಿಎ ಮೈತ್ರಿ ಕೂಟದಿಂದ ಹೊರ ಬಂದು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಸೇರಿಕೊಂಡ ಬೆನ್ನಲ್ಲೇ ಈ ಘಟನೆ ನಡೆದಿದೆ. ಲಾಠಿ ಚಾರ್ಜ್ನಲ್ಲಿ ಗಾಯಗೊಂಡಿರುವ ಕುಶ್ವಾಹ ಅವರು ನಿತಿಶ್ ಕುಮಾರ್ ಅವರೇ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಶಾಲಾ ಮತ್ತು ಉನ್ನತ ಶಿಕ್ಷಣದ ಗುಣಮಣ್ಣ ಕುಸಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜನ ಆಕ್ರೋಶ್ ರ್ಯಾಲಿ ನಡೆಸುತ್ತಿದ್ದ ಆರ್ಎಲ್ಎಸ್ಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆದಿದೆ.
ಲಾಠಿ ಚಾರ್ಜ್ನಲ್ಲಿ ಗಾಯಗೊಂಡಿರುವ ಕುಶ್ವಾಹ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.