ಶೋಷಿತ ಒಕ್ಕೂಟದ ಪ್ರತಿಭಟನೆ


Team Udayavani, Feb 3, 2019, 10:31 AM IST

yad-2.jpg

ಸುರಪುರ: ತರಕಾರಿ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದ್ದು, ಸೌಲಭ್ಯ ಕಲ್ಪಿಸಿಕೊಡುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಆರೋಪಿಸಿ ಶೋಷಿತಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರ ತರಕಾರಿ ಮಾರುಕಟ್ಟೆಯಲ್ಲಿ ಪ್ರತಿಭಟಿಸಿದರು.

ಸುಮಾರು 4 ಗಂಟೆಗೂ ಮೇಲ್ಪಟ್ಟು ನಡೆದ ಪ್ರತಿಭಟನೆಯಿಂದ ನಗರಸಭೆ ಅಧಿಕಾರಿಗಳು ಗಲಿಬಿಲಿಗೊಂಡರು. ಪ್ರತಿಭಟನೆಯಲ್ಲಿ ತರಕಾರಿ ಮಾರಾಟಗಾರರು ಭಾಗವಹಿಸಿದ್ದರಿಂದ ಗ್ರಾಹಕರು ತರಕಾರಿಗಾಗಿ ಪರದಾಡಿದರು. ಪರಿಶೀಲನೆಗೆ ಅಗಮಿಸಿದ್ದ ಅಧಿಕಾರಿಗಳು ಮೂಗಿಗೆ ಕರವಸ್ತ್ರ ಕಟ್ಟಿಕೊಂಡದ್ದನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳ ವಿರುದ್ಧ ಘೊಷಣೆ ಕೂಗಿದರು.

ನೇತೃತ್ವ ವಹಿಸಿದ್ದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಿದ್ದ ಸಂತೆ ಕಟ್ಟೆಗಳೆಲ್ಲ ಹಾಳಾಗಿ ಹೋಗಿವೆ. ಮಾರಾಟಗಾರರು ನೆಲದ ಮೇಲೆ ಕುಳಿತುಕೊಂಡೆ ತರಕಾರಿ ಮಾರಾಟ ಮಾಡುತ್ತಾರೆ. ತರಕಾರಿ ಪೂರ್ಣ ಧೂಳಿನಿಂದ ಕೂಡಿರುತ್ತದೆ. ಮಾರುಕಟ್ಟೆ ಕರ ಪಡೆಯುವ ನಗರಸಭೆ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಯಾವುದೇ ಮೂಲಸೌಲಭ್ಯ ಒದಗಿಸಿಲ್ಲ ಎಂದು ದೂರಿದರು.

ಮಾರುಕಟ್ಟೆಯಲ್ಲಿ ದನಕರು, ಹಂದಿ ನಾಯಿ, ಮೇಕೆ ಎಗ್ಗಿಲ್ಲದೆ ತಿರುಗಾಡುತ್ತಿವೆ. ತರಕಾರಿಗೆ ಬಾಯಿ ಹಾಕಿ ತಿನ್ನುತ್ತವೆ. ಮಾರಾಟಗಾರರು ಕೈಯಲ್ಲಿ ಬಡಗಿ ಹಿಡಿದು ಕೂಡಬೇಕು. ಇಲ್ಲದೆ ಹೋದರೆ ತರಕಾರಿ ದನಕರುಗಳ ಪಾಲಾಗುತ್ತದೆ. ಇತ್ತ ಗ್ರಾಹಕರು ಮೂಗಿಗೆ ಕರವಸ್ತ್ರ ಹಿಡಿದುಕೊಂಡೆ ಬರಬೇಕು. ಅಷ್ಟು ಕೆಟ್ಟ ವಾಸನೆ ಬೀರುತ್ತಿದೆ. ಈ ಬಗ್ಗೆ ಸಾಕಷ್ಟು ಮನವಿ ಮಾಡಿದ್ದರೂ ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ತರಕಾರಿ ಮಾರುಕಟ್ಟೆಯಲ್ಲಿಯೇ ಮೀನು ಮತ್ತು ಕೋಳಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಮಾಂಸದ ಮಾರುಕಟ್ಟೆ ಪ್ರತ್ಯೇಕವಾಗಿ ನಿರ್ಮಿಸಿಲ್ಲ. ಇದರಿಂದ ತರಕಾರಿ ಖರೀದಿಗೆ ಬರುವ ಸಸ್ಯಹಾರಿ ಗ್ರಾಕಕರು ಮುಜುಗರ ಪಡುವಂತಾಗಿದೆ. ನಗರಸಭೆಗೆ ನೀರಿನಂತೆ ಅನುದಾನ ಹರಿದುಬರುತ್ತಿದೆ. ಮಾರುಕಟ್ಟೆ ಕರ ಕೂಡ ಲಕ್ಷಾಂತರ ರೂ. ಬರುತ್ತಿದೆ. ಆದರೆ ಅಭಿವೃದ್ಧಿಗೆ ಆಸಕ್ತಿ ತೋರುತ್ತಿಲ್ಲ. ಜನಪ್ರತಿನಿಧಿಗಳಿಗೆ ಎಳ್ಳಷ್ಟು ಕಾಳಜಿ ಇಲ್ಲ. ಭರವಸೆಗಳು ಭಾಷಣದ ಮಾತಾಗಿವೆ. ಮಾರುಕಟ್ಟೆ ಅಭಿವೃದ್ಧಿಗೆ ಯಾರೊಬ್ಬರು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೂಲಸೌಕರ್ಯಗಳಾದ ಕುಡಿಯುವ ನೀರು, ನೆರಳು, ಶೌಚಾಲಯ, ವಿದ್ಯುತ್‌ ಒದಗಿಸಿ ಸಂತೆಕಟ್ಟೆ ನಿರ್ಮಿಸಿಕೊಡಬೇಕು. ಮಾಂಸದ ಮಾರುಕಟ್ಟೆ ಪ್ರತೇಕಿಸಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಒತ್ತಾಯಿಸಿದರು.

ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ಶಿರಸ್ತೇದಾರ ರಾಮು ಪೂಜಾರಿ ಅವರಿಗೆ ಸಲ್ಲಿಸಿದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.