ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೋಟ ಬಂದ್‌

Team Udayavani, Feb 4, 2019, 1:00 AM IST

aropigala.jpg

ಕೋಟ: ಜ. 26ರಂದು ಕೋಟದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು  ಶೀಘ್ರ ಬಂಧಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಫೆ.3ರಂದು ಕೋಟದಲ್ಲಿ  ಸ್ವಯಂಪ್ರೇರಿತ ಬಂದ್‌ ನಡೆಯಿತು.
ಕೋಟ ಸಂತೆ ಮಾರುಕಟ್ಟೆ ಸಮೀಪ ಪ್ರತಿಭಟನಾ ಸಭೆ ನಡೆಯಿತು.  ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು.  

ಆರೋಪಿಗಳ ಬಂಧನಕ್ಕೆ ಆಗ್ರಹ
ಪ್ರಕರಣಕ್ಕೆ ಸಂಬಂಧಿಸಿ ರಾಜಶೇಖರ ರೆಡ್ಡಿ. ಚಂದ್ರಶೇಖರ ರೆಡ್ಡಿ ಹಾಗೂ ಇತರ ನಾಲ್ಕು ಜನರು ಆರೋಪಿಗಳಾಗಿರುವುದಾಗಿ ಪ್ರತ್ಯಕ್ಷದರ್ಶಿ ದೂರು ದಾಖಲಿಸಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಎನ್ನುವ ಆಗ್ರಹ ಪ್ರತಿಭಟನಾ ಸಭೆಯಲ್ಲಿ ವ್ಯಕ್ತವಾಯಿತು.

ಫೆ.6ರ ತನಕ ಗಡುವು 
ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ್‌ ಪೂಜಾರಿ ಮಾತನಾಡಿ, ಈ ಘಟನೆ ನಮ್ಮ ಊರಿಗೆ ಕಪ್ಪು ಚುಕ್ಕೆ. ಇಂತಹ ಘಟನೆಗಳು ಮರುಕಳಿಸಬಾರದು. ಹೀಗಾಗಿ ಈ ಆರೋಪಿಗಳಿಗೆ ಕಠಿನ ಶಿಕ್ಷೆಯಾಗಬೇಕು. ಫೆ. 6ರೊಳಗೆ ಪ್ರಕ ರಣದ ಆರೋಪಿಗಳ ಬಂಧನವಾಗದಿದ್ದಲ್ಲಿ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದರು.

ಎಸ್‌.ಪಿ. ಮನವಿ ಸ್ವೀಕಾರ 
ಪ್ರತಿಭಟನ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ ಭೇಟಿ ನೀಡಿದರು. ಈ ಸಂದರ್ಭ ಪ್ರತಿಭಟನಕಾರರು ಎಸ್‌ಪಿಯವರಿಗೆ ಮನವಿ ಸಲ್ಲಿಸಿ ಕಠಿನ ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಎಸ್‌ಪಿಯವರು ಈಗಾಗಲೇ ತನಿಖೆ ಚಾಲ್ತಿಯಲ್ಲಿದೆ. ಯಾವುದೇ ಕಾರಣಕ್ಕೂ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯ ವಿಲ್ಲ. ಸಾರ್ವಜನಿಕರು ಪೊಲೀಸ್‌ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಮೃತ ಯುವಕರ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಹುಂಡಿ ಕಾಣಿಕೆ ಸಂಗ್ರಹಿಸಲಾಯಿತು.

ಸಭೆಯಲ್ಲಿ ಇಂಟೆಕ್‌ ರಾಜ್ಯಾಧ್ಯಕ್ಷ ರಾಕೇಶ್‌ ಮಲ್ಲಿ,   ಜಿಲ್ಲಾ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸತೀಶ್‌ ಪೂಜಾರಿ, ಹೆದ್ದಾರಿ ಜಾಗೃತಿ ಸಮಿತಿಯ ಪ್ರತಾಪ್‌ ಶೆಟ್ಟಿ ಸಾಸ್ತಾನ, ಸಾಮಾಜಿಕ ಹೋರಾಟಗಾರ ದಿನೇಶ್‌ ಗಾಣಿಗ, ರಾಜೇಶ ಕಾವೇರಿ, ಕಿಶೋರ್‌ ಕುಮಾರ್‌, ಲಿಯಾಕತ್‌ ಸಾಹೇಬ್‌,  ಭಗತ್‌ ಸಿಂಗ್‌ ಯುವ ವೇದಿಕೆಯ ಧನಂಜಯ್‌, ಉದ್ಯಮಿ ಎಂ.ಎಸ್‌. ಸಂಜೀವ, ಶಿವರಾಮ ಕೆ.ಎಂ. ಮಾತನಾಡಿದರು.

ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌, ತಾ.ಪಂ. ಸದಸ್ಯೆ ಲಲಿತಾ, ಶ್ಯಾಮ್‌ ಸುಂದರ್‌ ನಾೖರಿ, ವಿಟuಲ ಪೂಜಾರಿ, ಜಯಂತ್‌ ಅಮೀನ್‌, ಮೊಗವೀರ ಯುವ ಸಂಘಟನೆಯ ಚಂದ್ರ ಮೆಂಡನ್‌, ಕೋಟ ಗ್ರಾ.ಪಂ. ಅದ್ಯಕ್ಷ ವನಿತಾ ಶ್ರೀಧರ್‌ ಆಚಾರ್ಯ, ಕೋಟತಟ್ಟು ರಘು ತಿಂಗಳಾಯ, ಸ್ಥಳೀಯರಾದ ವಿವೇಕ ಸುವರ್ಣ, ಸಂದೀಪ್‌ ಕೋಡಿ, ಬಸವ ಮರಕಾಲ ಕಲ್ಲುಗದ್ದೆ, ಸುಬ್ರಾಯ ಆಚಾರ್ಯ, ಪ್ರಸಾದ್‌ ಬಿಲ್ಲವ ಉಪಸ್ಥಿತರಿದ್ದರು. ಪ್ರಶಾಂತ್‌ ಶೆಟ್ಟಿ ಸಾಸ್ತಾನ ನಿರೂಪಿಸಿದರು.

ಪ್ರತಿಭಟನೆ ಸಂದರ್ಭ ಉಡುಪಿ ಡಿವೈಎಸ್‌ಪಿ ಜೈಶಂಕರ್‌, ಕುಂದಾಪುರ ಡಿವೈಎಸ್‌ಪಿ ದಿನೇಶ್‌, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌, ಕೋಟ ಠಾಣಾಧಿಕಾರಿ ನರಸಿಂಹ ಶೆಟ್ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.