ಯಾವುದೇ ಕ್ಷಣ ಮೈತ್ರಿ ಸರ್ಕಾರ ಪತನ: ಪುಟ್ಟಸ್ವಾಮಿ
Team Udayavani, Feb 4, 2019, 1:30 AM IST
ಹಾಸನ: ಸಮ್ಮಿಶ್ರ ಸರ್ಕಾರ ಕಳೆದ 7 ತಿಂಗಳಿಂದಲೂ ಅಸ್ಥಿರತೆಯ ನಡುವೆಯೇ ನಡೆದುಕೊಂಡು ಬಂದಿದ್ದು, ಯಾವುದೇ ಕ್ಷಣದಲ್ಲಾದರೂ ಪತನವಾಗಬಹುದು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಅನುಮಾನ ಮೂಡಿದೆ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಹೊಂದಾಣಿಕೆಯ ಕೊರತೆ ಯಿಂದ ಸರ್ಕಾರ ಬಿದ್ದು ಹೋಗಲಿದೆ. ಕಾಂಗ್ರೆಸ್ ಶಾಸಕರಿಗೆ ತಮ್ಮ ನಾಯಕರ ಬಗ್ಗೆಯೇ ನಂಬಿಕೆಯಿಲ್ಲ. ಶಾಸಕರನ್ನು ಭದ್ರ ವಾಗಿ ಇಟ್ಟುಕೊಳ್ಳಲಾಗದೆ ಹತಾಶರಾಗಿರುವ ಕಾಂಗ್ರೆಸ್ ನಾಯ ಕರು, ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾ ರೆಂದು ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಗೂಬೆ ಕೂರಿಸಲು ಕುಮಾರಸ್ವಾಮಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ತಮ್ಮ ವೈಫಲ್ಯಗಳಿಂದ ಬಚಾವಾಗಲು ಸಿಎಂಗೆ ಉಳಿದಿರುವುದು ರಾಜೀನಾಮೆ ಒಂದೇ ದಾರಿ ಎಂದರು.
ಹಾಸನ ಲೋಕಸಭಾ ಕ್ಷೇತ್ರ ಜೆಡಿಎಸ್ ಕುಟುಂಬಕ್ಕೆ ಮೀಸಲಾಗಿದೆ. ಹಾಸನದಲ್ಲೊಬ್ಬ ಮೊಮ್ಮಗ, ಮಂಡ್ಯದಲ್ಲೊಬ್ಬ ಮೊಮ್ಮಗನನ್ನು ಚುನಾವಣೆಗೆ ನಿಲ್ಲಿಸುತ್ತೇನೆ ಎನ್ನುತ್ತಾರೆ. ಅವರಿಗೆ ಕುಟುಂಬ ರಾಜಕಾರಣ ಬಿಟ್ಟು ರಾಜ್ಯದ ಚಿಂತೆ ಇಲ್ಲ ಎಂದು ದೇವೇಗೌಡರ ಕುಟುಂಬದ ವಿರುದ್ಧ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.