ಉದ್ಯಮ ಸ್ಥಾಪನೆ ಯೋಜನೆಗಳು ಸರಳವಾಗಲಿ


Team Udayavani, Feb 4, 2019, 6:33 AM IST

dvg-6.jpg

ದಾವಣಗೆರೆ: ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವನ್ನು ಪ್ರಾಮಾಣಿಕವಾಗಿ ಮರುಪಾವತಿ ಮಾಡಿದಾಗ ಮಾತ್ರ ಹಣಕಾಸು ಸಂಸ್ಥೆ, ಉದ್ದಿಮೆದಾರ, ಉದ್ದಿಮೆಗಳು ಬೆಳವಣಿಗೆಯಾಗಲು ಸಾಧ್ಯ ಎಂದು ಜಿಲ್ಲಾ ಜವಳಿ ಪಾರ್ಕ್‌ನ ಅಧ್ಯಕ್ಷ ಪ್ರೊ| ವೈ. ವೃಷಭೇಂದ್ರಪ್ಪ ಅಭಿಪ್ರಾಯಪಟ್ಟರು. ಜಿಎಂಐಟಿ ಸಮೀಪದ ಓಶಿಯನ್‌ ಪಾರ್ಕ್‌ ಹೋಟೆಲ್‌ನ ಆನೆಕೊಂಡ ಹನುಮಂತಪ್ಪ ಕನ್ವೆನ್‌ಷನ್‌ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಶಾಖಾ ಕಚೇರಿಯಿಂದ ಹಮ್ಮಿಕೊಂಡಿದ್ದ ಉದ್ದಿಮೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಹಣಕಾಸು ಸಂಸ್ಥೆಗಳು ಉದ್ದಿಮೆದಾರರಿಗೆ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿವೆ. ಆದರೆ, ಈ ಯೋಜನೆಗಳನ್ನು ಪಡೆಯಲು ಉದ್ದಿಮೆದಾರರಿಗೆ ಹಲವಾರು ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಯೋಜನೆಗಳನ್ನು ಸರಳೀಕರಿಸಬೇಕು. ಉದ್ದಿಮೆಗಳು ಆರೋಗ್ಯಕರವಾಗಿದ್ದಾಗ ಹಣಕಾಸು ಸಂಸ್ಥೆಗಳಿಗೆ ಭದ್ರತೆ ಇರುತ್ತದೆ ಎಂದರು.

ಉದ್ದಿಮೆದಾರರು ಆಗಲು ಬಯಸುವ ವಿದ್ಯಾರ್ಥಿಗಳಿಗೆ ನೀಡುವ ಸಾಲ ಸಬ್ಸಿಡಿಯಲ್ಲೂ ತಾರತಮ್ಯವಾಗುತ್ತಿದೆ. ಮೆರಿಟ್‌ನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಸಬ್ಸಿಡಿಯಲ್ಲಿ ಸಾಲ ನೀಡಲಾಗುತ್ತಿದೆ. ಪೇಮೆಂಟ್‌ನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಸಬ್ಸಿಡಿ ಸಾಲ ನೀಡುತ್ತಿಲ್ಲ. ಆದ್ದರಿಂದ ಸಾಲ ಕೊಡುವ ನೀತಿ ಬದಲಾವಣೆಯಾಗಬೇಕು ಎಂದು ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸತ್ಯನಾರಾಯಣ ಭಟ್ ಮಾತನಾಡಿ, ಕ್ಲಸ್ಟರ್‌ ವ್ಯವಸ್ಥೆ ಮಾಡಿಕೊಂಡ ಉದ್ದಿಮೆದಾರರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡಲಾಗುವುದು. ಉದ್ದಿಮೆದಾರರಿಗೆ ಅನೇಕ ಸವಾಲುಗಳಿವೆ. ಆದರೂ ಕ್ರೀಯಾಶೀಲರಾಗಬೇಕಿದೆ. ಆಗ ಮಾತ್ರ ಪ್ರಸ್ತುತ ಪೈಪೋಟಿ ಯುಗದಲ್ಲಿ ಉದ್ದಿಮೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾಸಂಸ್ಥೆಗಳು ಕೇವಲ ಕ್ಯಾಂಪಸ್‌ ಆಯ್ಕೆ ಮಾಡಿದರೆ ಸಾಲದು. ಬದಲಾಗಿ ವಿದ್ಯಾ ಸಂಸ್ಥೆಗಳು ಉದ್ದಿಮೆದಾರರನ್ನು ಸೃಷ್ಟಿಸಬೇಕಿದೆ. ಹೀಗೆ ಸೃಷ್ಟಿಸಿದ ಉದ್ದಿಮೆದಾರರು ತಮ್ಮ ಉದ್ದಿಮೆಯ ಮೂಲಕ ಹಲವಾರು ಜನರಿಗೆ ಉದ್ಯೋಗ ನೀಡುವಂತಾಗುವರು ಎಂದರು.

ಕೆಎಸ್‌ಎಫ್‌ಸಿ ಅಧಿಕಾರಿಗಳಾದ ಎಚ್. ನಾಗರಾಜ್‌, ಕೆ.ಬಿ. ಮನ್ಮಥನಾಯಕ್‌, ಆಶ್ರಫ್‌ ಅಲಿ, ಬಾಬು ಆರ್‌, ಹಾಲಾನಾಯ್ಕ, ಜಿಲ್ಲಾ ಸಣ್ಣ ಕೈಗಾರಿಕೋದ್ಯಮಿಗಳ ಸಂಘದ ಉಪಾಧ್ಯಕ್ಷ ರಾಜೇಂದ್ರ ಪ್ರಸಾದ್‌ ಇತರೆ ಉದ್ದಿಮೆದಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೆಎಸ್‌ಎಫ್‌ಸಿ ಉದ್ದಿಮೆದಾರರಿಗೆ ಸಣ್ಣ ಘಟಕಗಳನ್ನು ಸ್ಥಾಪಿಸಲು 60 ವರ್ಷಗಳಿಂದ ಸಾಲ ನೀಡುತ್ತಾ ಬಂದಿದೆ. ರಾಜ್ಯದ 1,72,450 ಘಟಕಗಳಿಗೆ 16,108 ಕೋಟಿ ಸಾಲ ಮಂಜೂರು ಮಾಡಿ 25 ಸಾವಿರ ಕೋಟಿ ನಿವ್ವಳ ಲಾಭ ಗಳಿಸಿದೆ. ಹೆಚ್ಚಿನ ಉದ್ದಿಮೆ ಸ್ಥಾಪಿಸಲು ಯುವಕರು ಮತ್ತು ಮಹಿಳೆಯರು ಮುಂದೆ ಬರಲಿ ಎಂಬ ಉದ್ದೇಶದಿಂದ ಶೇ.75 ರಷ್ಟು ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ನೀಡಲಾಗುತ್ತಿದೆ.

•ಶಿವಾನಂದ ಎಸ್‌. ಪಾಟೀಲ್‌ ಪ್ರಧಾನ ವ್ಯವಸ್ಥಾಪಕರು, ಕೆಎಸ್‌ಎಫ್‌ಸಿ

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.