ವಾಲ್ಮೀಕಿ ಜಾತ್ರೆಗೆ ಭರದ ಸಿದ್ಧತೆ


Team Udayavani, Feb 4, 2019, 6:37 AM IST

dvg-7.jpg

ಹರಿಹರ: ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆ. 8 ಮತ್ತು 9ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ಅರಣ್ಯ ಸಚಿವ ಸತೀಶ್‌ ಜಾರಕಿಹೋಳಿ, ಚಿತ್ರದುರ್ಗದ ಮುರುಘಾ ಮಠ, ಸಿರಿಗೆರೆ ತರಳಬಾಳು ಮಠದಂತೆ ವಾಲ್ಮೀಕಿ ಮಠವೂ ಸಂಘಟನೆ ಜೊತೆಗೆ ಸಾಮಾಜದಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದೆ. ಫೆ. 8ರ ಬೆಳಗ್ಗೆ 11ಕ್ಕೆ ಧಾರ್ಮಿಕ, ವೈಚಾರಿಕ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ, ಕೌಟುಂಬಿಕ, ಆಧ್ಯಾತ್ಮಿಕ ವಿಚಾರ ಗೊಷ್ಠಿಗಳ ಜೊತೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು.

ಫೆ. 9ರ ಬೆಳಗ್ಗೆ 10ಕ್ಕೆ ಧರ್ಮ ಜಾಗೃತಿಗಾಗಿ ನಾಡಿನ ವಿವಿಧ ಮಠಾಧೀಶರ ನೇತೃತ್ವದಲ್ಲಿ ಧರ್ಮಸಭೆ ನಡೆಯಲಿದೆ. ಮಧ್ಯಾಹ್ನ 12-30ಕ್ಕೆ ನಡೆಯುವ ಜಾತ್ರಾ ಮಹೋತ್ಸವದ ಸಮಾರೋಪದಲ್ಲಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವಾರು ಸಚಿವರು, ಶಾಸಕರು, ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಶಾಸಕ ಬಿ. ಶ್ರೀರಾಮುಲು ಮಾತನಾಡಿ, ಬೆಳಗಾವಿ ಸಭೆಯಲ್ಲಿ ಶ್ರೀಗಳು ಜಾತ್ರಾ ಮಹೋತ್ಸವದ ಬಗ್ಗೆ ಪ್ರಸ್ತಾಪಿಸಿದಾಗ ಸಭೆಯಲ್ಲಿದ್ದ ನಾವೆಲ್ಲಾ ಒಮ್ಮತದಿಂದ ಅಗತ್ಯ ಸಹಕಾರ ನೀಡುವುದಾಗಿ ಘೋಷಿಸಿದ್ದೆವು. ಸಮಾಜ ಸಂಘಟನಾ ಕಾರ್ಯದಲ್ಲಿ ಶ್ರೀಗಳೊಂದಿಗೆ ಸದಾ ತಾವು ಕೈಜೋಡಿಸುವುದಾಗಿ ತಿಳಿಸಿದರು.

ಪೀಠಾಧ್ಯಕ್ಷರಾದ ಪ್ರಸನ್ನಾನಂದಪುರಿ ಶ್ರೀ ಮಾತನಾಡಿ, ವಾಲ್ಮೀಕಿ ಗುರುಪೀಠ 1998ರ ಫೆ. 2ರಂದು ಸ್ಥಾಪನೆಯಾಗಿದ್ದು, ಲಿಂ| ಪುಣ್ಯಾನಂದಪುರಿ ಶ್ರೀಗಳು ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಸಮಾಜ ಸಂಘಟಿಸಿದ್ದರು. ದುರಾದೃಷ್ಟವಶಾತ್‌ ರೈಲು ಅಪಘಾತದಲ್ಲಿ ಅವರು ಲಿಂಗೈಕ್ಯರಾದ ನಂತರ 2008 ಆ. 14ರಂದು ನೂತನ ಪೀಠಾಧ್ಯಕ್ಷರಾದ ತಾವು ಅವರ ಕಾರ್ಯ ಮುಂದುವರಿಸಿರುವುದಾಗಿ ಹೇಳಿದರು.

ಸಮಾಜ ಬಾಂಧವರ ಸಹಕಾರದಿಂದ ಆಯೋಜಿಸಿರುವ ವಿನೂತನ ವಾಲ್ಮೀಕಿ ಜಾತ್ರಾ ಮಹೋತ್ಸವ ಪಕ್ಷಾತೀತ, ಜಾತ್ಯತೀತ ಕಾರ್ಯಕ್ರಮವಾಗಿದೆ. ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದ್ದು, ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಸಂಯೋಜಕ ಟಿ.ಈಶ್ವರ್‌, ಮಠದ ಧರ್ಮದರ್ಶಿ ಓಬಳಪ್ಪ, ಕಾರ್ಯದರ್ಶಿ ಕೆ.ಬಿ. ಮಂಜುನಾಥ್‌, ಮಕ್ರಿ ಪಾಲಾಕ್ಷಪ್ಪ, ಎಚ್.ಎಚ್. ಬಸವರಾಜ್‌, ಕೆ.ಪಿ. ಪಾಲಯ್ಯ, ಜಿಗಳಿ ಆನಂದಪ್ಪ, ಸಣ್ಣ ತಮ್ಮಪ್ಪ ಬಾರ್ಕಿ, ಜಿಗಳಿ ರಂಗಪ್ಪ, ಡಿ.ಮಂಜುನಾಥ್‌, ರಾಜನಹಳ್ಳಿ ಭೀಮಣ್ಣ, ಆನಂದಪ್ಪ, ಡಿವೈಎಸ್‌ಪಿ ಮಂಜುನಾಥ್‌ ಗಂಗಲ್‌, ಸಿಪಿಐ ಗುರುನಾಥ್‌, ಪಿಎಸ್‌ಐ ರವಿಕುಮಾರ್‌ ಹಾಗೂ ಮತ್ತಿತರರಿದ್ದರು.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.