ತಿಂಗಳೊಳಗಾಗಿ ಕೈಗಾರಿಕಾ ತರಬೇತಿ ಕೇಂದ್ರ
Team Udayavani, Feb 4, 2019, 7:23 AM IST
ಕೋಲಾರ: ಜಿಲ್ಲೆಯಲ್ಲಿ ತಿಂಗಳೊಳಗಾಗಿ ಖಾಸ ಗಿ ಸಹಭಾಗಿತ್ವದಲ್ಲಿ ಕೈಗಾರಿಕಾ ತರಬೇತಿ ಕೇಂದ್ರ ಆರಂಭವಾಗಲಿದೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದ ಕೆಇಬಿ ಸಮುದಾಯ ಭವನ ದಲ್ಲಿ ದಲಿತ ಇಂಡಸ್ಟ್ರಿಯಲ್ ಅಸೋಸಿ ಯೇಷನ್ ಕರ್ನಾಟಕ ಆಯೋಜಿಸಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುಪಿಎ ಸರ್ಕಾರದಲ್ಲಿ ತಾವು ಸಚಿವರಾಗಿದ್ದಾಗ ದೇಶ ಹಿಂದೆಂದೂ ಕಾಣದಂತ ಕೈಗಾರಿಕೆ ಅಭಿವೃದ್ಧಿ ಮಾಡಲಾಗಿತ್ತು. ಕೇವಲ ಒಂದು ವರ್ಷದ ಅವಧಿಯಲ್ಲಿ 1 ಲಕ್ಷ ಕೈಗಾರಿಕೆಗಳನ್ನು ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಕಲ್ಪಿಸಲಾಗಿತ್ತು. ಆದರೆ, ಈ ಉದ್ದಿಮೆಗಳಲ್ಲಿ ಪರಿಶಿಷ್ಟ ಜಾತಿಯ ಶೇ.5 ಮತ್ತು ಪರಿಶಿಷ್ಟ ಪಂಗಡದ ಶೇ.2 ಉದ್ದಿಮೆದಾರರು ಮಾತ್ರವೇ ಇದ್ದರೆಂದು ವಿಷಾದಿಸಿದರು.
ಸೂಕ್ತ ತರಬೇತಿ ಇಲ್ಲದಿರುವುದೇ ಇದಕ್ಕೆ ಕಾರಣವೆಂಬುದನ್ನು ಅರ್ಥ ಮಾಡಿಕೊಂಡ ತಾವು ಜಿಲ್ಲೆಗೆ ಕೈಗಾರಿಕೆ ತರಬೇತಿ ಕೇಂದ್ರ ಮಂಜೂರು ಮಾಡಿಸಿದ್ದಾಗಿ ವಿವರಿಸಿದರು. ದಲಿತ ಇಂಡಸ್ಟ್ರೀಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಮಾಮಿಡಿ ಸುದರ್ಶನ್, ಕರ್ನಾಟಕದಲ್ಲಿ ಎರಡನೇ ಕಾರ್ಯಕ್ರಮ ವಾಗಿ ಆಯೋಜಿಸಲಾಗಿದೆ ಎಂದರು. ಈ ವೇಳೆ ದಲಿತ್ ಇಂಡಸ್ಟ್ರೀಸ್ ಅಸೋಸಿಯೇ ಷನ್ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಲಾಲ್‌ಬಹಾದ್ದೂರ್ ಶಾಸ್ತ್ರೀ ಆಯ್ಕೆಯಾಗಿದ್ದಾರೆಂದು ಸಂಸದ ಕೆ.ಎಚ್.ಮುನಿಯಪ್ಪ ಘೋಷಿಸಿದರು.
ವೇದಿಕೆ ಮೇಲೆ ಜಿಲ್ಲಾ ಕೈಗಾರಿಕಾ ಕೇಂದ್ರದ ವೆಂಕಟರಮಣಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಶ್ರೀನಿವಾಸರಾವ್, ಡಿಐಎ ಪದಾಧಿಕಾರಿಗಳಾದ ಎ.ಕೋಕಿಲ, ಚಿತ್ರ ಮದನ್, ಜಿಲ್ಲಾ ಕಿಸಾನ್‌ಖೇತ್ ಅಧ್ಯಕ್ಷ ಬುಸನಹಳ್ಳಿ ಆಂಜಿನಪ್ಪ, ಊರುಬಾಗಿಲು ಶ್ರೀನಿವಾಸ್, ಕುಮಾರ್, ಕೆ.ಜಯದೇವ್, ವೈ.ವಿ.ನರಸಿಂಹಮೂರ್ತಿ, ಎನ್.ಶ್ರೀನಿ ವಾಸ್, ಕೆ.ರಾಜೇಂದ್ರ ಪ್ರಸಾದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.