ಹಳೇ ಬಸ್‌ ನಿಲ್ದಾಣದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ

Team Udayavani, Feb 4, 2019, 7:24 AM IST

hale.jpg

ಅರಕಲಗೂಡು: ಪಟ್ಟಣದಲ್ಲಿನ ಹಳೆ ಬಸ್‌ ನಿಲ್ದಾಣಕ್ಕೆ ಕಾಯಕಲ್ಪ ನೀಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 13.25 ಕೋಟಿ ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ನೀಲ ನಕ್ಷೆ ತಯಾರಿಸಿದೆ.

ಪಟ್ಟಣದ ಮಧ್ಯ ಭಾಗದಲ್ಲಿನ ನಿಲ್ದಾಣವು 10 ವರ್ಷಗಳಿಂದ ಪಾಳು ಬಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದ ಕಾರಣ ಸಾರ್ವಜನಿಕರು ತಲೆತಗ್ಗಿಸಿಕೊಂಡು ಓಡಾಡುವ ಪರಿಸ್ಥಿತಿಗೆ ನಿರ್ಮಾಣವಾಗಿದೆ. ಇದನ್ನು ಮನಗಂಡ ಶಾಸಕ ಎ.ಟಿ.ರಾಮಸ್ವಾಮಿ, ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು 13.25 ಕೋಟಿ ರೂ. ವೆಚ್ಚದಲ್ಲಿ ವಾಣಿಜ್ಯ ಮಳಿಗೆ ತೆರೆಯಲು ಮುಂದಾಗಿದ್ದಾರೆ.

ಜನರ ಆಕ್ರೋಶ: 15 ವರ್ಷಗಳ ಹಿಂದೆ ಪಟ್ಟಣದ ಕೋಟೆ ಮತ್ತು ಪೇಟೆಯ ಮಧ್ಯಭಾಗದಲ್ಲಿದ್ದ ದೊಡ್ಡಕೆರೆಯನ್ನು ಮುಚ್ಚಿ 4.5 ಎಕರೆ ಜಾಗದಲ್ಲಿ 2009ರಲ್ಲಿ ಹೊಸ ಬಸ್‌ ನಿಲ್ದಾಣವನ್ನು ನಿರ್ಮಿಸಲಾಗಿತ್ತು. 2012ರಲ್ಲಿ ಬಸ್‌ ನಿಲ್ದಾಣ ಸಂಪೂರ್ಣ ಸ್ಥಳಾಂತರವಾದ ನಂತರ ಹಳೇ ಬಸ್‌ ನಿಲ್ದಾಣ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪಾಳು ಬಿದ್ದಿತ್ತು. ಇದರಿಂದ ಸಾರ್ವಜನಿಕರು ಹಲವು ಬಾರಿ ಇಲಾಖೆ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಪತ್ರದ ಮೂಲಕ ಪಟ್ಟಣದ ಮಧ್ಯ ಭಾಗದಲ್ಲಿನ ಈ ಸ್ಥಳವನ್ನು ಪುನಃ ಪಟ್ಟಣ ಪಂಚಾಯಿತಿಗೆ ನೀಡಿ ಇಲ್ಲವಾದರೆ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಎಂದು ಹೇಳಿದ್ದರು.

ಸಿಎಂ ಶಂಕು ಸ್ಥಾಪನೆ: ಪಪಂ ಚುನಾವಣೆಗೂ ಮುನ್ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡಿಸಲು ಉತ್ಸುಕರಾಗಿರುವ ಶಾಸಕ ಎ.ಟಿ. ರಾಮಸ್ವಾಮಿ, ಕ್ಷೇತ್ರದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ಮಾಡುವ ಮೂಲಕ ವಾಣಿಜ್ಯ ಸಂಕೀರ್ಣ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಚಾಲನೆ ಕೊಡಿಸಲು ಮುಂದಾಗಿದ್ದಾರೆ.

ಶೀಘ್ರವೇ ಚಾಲನೆ: ಪಟ್ಟಣದ ಹಳೆ ಬಸ್‌ ನಿಲ್ದಾಣವು ವರ್ಷಗಳಿಂದ ಪಾಳುಬಿದ್ದಿದೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಇದನ್ನು ಮನಗಂಡು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಉತ್ತಮ ವಾಣಿಜ್ಯ ಸಂಕೀರ್ಣ ತೆರೆಯಲು ಮುಂದಾಗಿದ್ದೇನೆ.

ಇದಕ್ಕೆ 13.25 ಕೋಟಿ ರೂ. ವೆಚ್ಚವಾಗುತ್ತಿದ್ದು, ವಾಣಿಜ್ಯ ಮಳಿಗೆ ತೆರೆದು, ಉತ್ತಮ ಹೋಟೆಲ್‌, ಸಿನಿಮಾ ಮಂದಿರ, ಐಟೆಕ್‌ ಶೌಚಾಲಯ, ಲಿಫ್ಟ್, ಪಿಕ್‌ ಅಂಡ್‌ ಡ್ರಾಪ್‌ ಪಾಯಿಂಟ್, ಇನ್ನು ಮೊದಲಾದ ಯೋಜನೆಗಳನ್ನು ಒಳಗೊಂಡು ನೀಲನಕ್ಷೆ ತಯಾರಿಸಲಾಗಿದೆ. ಅತೀ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.