ದೇಶಕ್ಕೆ ವಿವೇಕಾನಂದರ ಕೊಡುಗೆ ಅಪಾರ
Team Udayavani, Feb 4, 2019, 9:26 AM IST
ಬಳ್ಳಾರಿ: ನಗರದ ತಾರಾನಾಥ್ ಆಯುರ್ವೇದಿಕ್ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಪೊಲೀಸ್ ಠಾಣೆ ಸಿಪಿಐ ಗಾಯತ್ರಿ, ಸ್ವಾಮಿ ವಿವೇಕಾನಂದರು ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಇಂದಿನ ಯುವಪೀಳಿಗೆ ಅವರ ದಾರಿಯಲ್ಲಿ ನಡೆದರೆ ಖಂಡಿತ ಯಶಸ್ಸು ಸಾಧಿಸಲು ಸಾಧ್ಯ. ಇಂದಿನ ಯುವ ಸಮುದಾಯ ಸಾಮಾಜಿಕ ಜಾಲತಾಣವನ್ನು ಅವಶ್ಯಕತೆಗೆ ತಕ್ಕಷ್ಟು ಬಳಕೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆದಾಗ ಖಚಿತವಾಗಿ ಫಲಿತ ದೊರೆಯಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅರಕೆರೆ ಸರ್‌ದೇಶ್ ಮಾತನಾಡಿ, ಬದಲಾವಣೆ ಮಾಡಬೇಕಾದರೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ದೇಶಕ್ಕೋಸ್ಕರ ಸ್ವಲ್ಪ ಸಮಯವಾದರೂ ಪ್ರತಿಯೊಬ್ಬ ವಿದ್ಯಾರ್ಥಿಯು ಮೀಸಲಿಡಬೇಕು ಎಂದು ತಿಳಿಸಿದರು.
ಕಾಲೇಜಿನ ವೀರನಗೌಡ ಪಾಟೀಲ್ ಮಾತನಾಡಿದರು. ಜಯಂತಿ ನಿಮಿತ್ತ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ವಾಲಿಬಾಲ್, ಥ್ರೋಬಾಲ್ ರಂಗೋಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಬಿವಿಪಿ ಕಾರ್ಯಕರ್ತರಾದ ಶ್ರೀಕಾಂತರೆಡ್ಡಿ, ಹೇಮರೆಡ್ಡಿ, ಹನುಮಂತರೆಡ್ಡಿ, ಕೌಶಿಕ್, ವೀರೇಶ್, ರಾಧಿಕಾ, ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.