ಕಿಸಾನ್ ಸ್ಕೀಮ್ನ 2ನೇ ಕಂತಿಗೆ ಆಧಾರ್ ಕಡ್ಡಾಯ
Team Udayavani, Feb 5, 2019, 12:30 AM IST
ಹೊಸದಿಲ್ಲಿ: ಕೇಂದ್ರ ಬಜೆಟ್ನಲ್ಲಿ ಮಂಡಿಸಲಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಮೊದಲ ಕಂತಿನ ಮೊತ್ತಕ್ಕೆ ಆಧಾರ್ ಐಚ್ಛಿಕವಾಗಿದ್ದರೆ, 2ನೇ ಕಂತಿಗೆ ಆಧಾರ್ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. 75 ಸಾವಿರ ಕೋಟಿ ರೂ. ಮೊತ್ತದ ಈ ಯೋಜನೆ ಅಡಿ ಸಣ್ಣ ಮತ್ತು ಮಧ್ಯಮ ವರ್ಗದ 2 ಹೆಕ್ಟೇರ್ಗಿಂತ ಕಡಿಮೆ ಇರುವ ರೈತರಿಗೆ ವಾರ್ಷಿಕ 6 ಸಾವಿರ ರೂ. ನಗದು ನೀಡಲಾಗುತ್ತದೆ.
ಮಾರ್ಚ್ ವೇಳೆಗೆ ಮೊದಲ ಕಂತು ಬಿಡುಗಡೆ ಮಾಡಲಾ ಗುತ್ತದೆ. 2018 ಡಿಸೆಂಬರ್ನಿಂದ 2019 ಮಾರ್ಚ್ ಅವಧಿಯ ಕಂತಿನ ಮೊತ್ತವನ್ನು ನೀಡುವಾಗ ಆಧಾರ್ ಲಭ್ಯವಿದ್ದರೆ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ ಆಧಾರ್ ಸಂಖ್ಯೆ ಲಭ್ಯವಿಲ್ಲದಿದ್ದರೆ, ಡ್ರೈವಿಂಗ್ ಲೈಸೆನ್ಸ್, ಮತದಾರರ ಗುರುತಿನ ಚೀಟಿ ಮತ್ತು ನರೇಗಾ ಜಾಬ್ ಕಾರ್ಡ್ ಅಥವಾ ಸರಕಾರ ನೀಡಿದ ಯಾವುದೇ ಇತರ ದಾಖಲೆಗಳನ್ನು ದಾಖಲೆಯಾಗಿ ಪಡೆಯಲಾಗುತ್ತದೆ. ಆದರೆ ನಂತರದ ಕಂತುಗಳನ್ನು ವರ್ಗಾವಣೆ ಮಾಡಲು ಆಧಾರ್ ಕಡ್ಡಾಯವಾಗಿದ್ದು, ನಕಲಿ ಫಲಾನುಭವಿಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.