ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಪೀಠ
Team Udayavani, Feb 5, 2019, 1:00 AM IST
ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಅಮಾನತುಗೊಳಿಸಿದ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಹೈಕೋರ್ಟ್ ಏಕಸದಸ್ಯ ನ್ಯಾಯಪಿಠ ನಿರಾಕರಿಸಿತು.
ಸೋಮವಾರ ಮಧ್ಯಾಹ್ನ ಅರ್ಜಿಯು ನ್ಯಾಯಪೀಠದ ಮುಂದೆ ಇದೇ ಮೊದಲ ಬಾರಿ ವಿಚಾರಣೆಗೆ ಬಂದಿತ್ತು. ಈ ವೇಳೆ ‘ಅರ್ಜಿದಾರ ವ್ಯಕ್ತಿ ತಮಗೆ ಪರಿಚಯಸ್ಥರು, ಹಾಗಾಗಿ, ಈ ಅರ್ಜಿ ನನ್ನ ಮುಂದೆ ಬೇಡ’ ಎಂದು ಹೇಳಿದ ನ್ಯಾ. ಆರ್. ದೇವದಾಸ್ ವಿಚಾರಣೆಯಿಂದ ಹಿಂದೆ ಸರಿದರು. ಅವ್ಯವಹಾರ ಅರೋಪದ ಹಿನ್ನೆಲೆಯಲ್ಲಿ ಸ್ಪೀಕರ್ ಅವರ ಶಿಫಾರಸಿನಂತೆ ವಿಧಾನಸಭೆಯ ಶಿಸ್ತು ಪ್ರಾಧಿಕಾರವಾಗಿರುವ ‘ವಿಶೇಷ ಮಂಡಳಿ’ಯು ಎಸ್. ಮೂರ್ತಿಯವರನ್ನು ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಳಿಸಿ 2018ರ ಡಿ.27ರಂದು ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಗೊಳಿಸುವಂತೆ ಕೋರಿ ಮೂರ್ತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.