ಮಲ್ಯ ಗಡೀಪಾರಿಗೆ ಯುಕೆ ಸರಕಾರ ಒಪ್ಪಿಗೆ
Team Udayavani, Feb 5, 2019, 12:30 AM IST
ಲಂಡನ್: ಭಾರತೀಯ ಬ್ಯಾಂಕ್‌ಗಳಿಗೆ 9,000 ಕೋಟಿ ರೂ. ವಂಚಿಸಿ ಲಂಡನ್‌ನಲ್ಲಿ ಅಡಗಿರುವ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಯು.ಕೆ. ಸರಕಾರ ಒಪ್ಪಿಗೆ ನೀಡಿದೆ. ಇದು ಕೇಂದ್ರದ ಎನ್‌ಡಿಎ ಸರಕಾರಕ್ಕೆ ಸಂದ ಮಹತ್ವದ ಜಯವಾಗಿದೆ. ಭ್ರಷ್ಟಾಚಾರಿಗಳು ಯಾವುದೇ ದೇಶದಲ್ಲಿ ಅಡಗಿದ್ದರೂ ಹುಡುಕಿ ಭಾರತಕ್ಕೆ ಕರೆತರುತ್ತೇವೆ ಎಂದು ಪದೇ ಪದೆ ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ನೈತಿಕ ಬಲ ತಂದುಕೊಡಲಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
ಮಲ್ಯ ಹಸ್ತಾಂತರಕ್ಕಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ 17 ವಿವಿಚಧ ಭಾರತೀಯ ಬ್ಯಾಂಕುಗಳ ಒಕ್ಕೂಟವು ಹೂಡಿದ್ದ ದಾವೆಯ ವಿಚಾರಣೆ ನಡೆಸಿದ್ದ ಲಂಡನ್‌ನ ವೆಸ್ಟ್ ಮಿನ್‌ಸ್ಟರ್ ನ್ಯಾಯಾಲಯ, ಕಳೆದ ವರ್ಷ ಡಿ. 10ರಂದು ಮಲ್ಯ ಹಸ್ತಾಂತರಕ್ಕೆ ಆದೇಶಿಸಿತ್ತು. ಆದರೆ ಈ ಬಗ್ಗೆ ಯು.ಕೆ. ಇಲಾಖೆ ಅಂತಿಮ ತೀರ್ಮಾನ ಕೈಗೊಳ್ಳಬೇಕಾದ್ದರಿಂದ ಈ ಪ್ರಕರಣವನ್ನು ನ್ಯಾಯಾಲಯ, ಗೃಹ ಇಲಾಖೆಗೆ ವರ್ಗಾವಣೆ ಮಾಡಿತ್ತು. ನಿಯಮಗಳಂತೆ, ಇಂಥ ಪ್ರಕರಣವು ತನಗೆ ವರ್ಗಾವಣೆಗೊಂಡ ದಿನದಿಂದ 2 ತಿಂಗಳುಗಳ ಕಾಲಾವಧಿಯಲ್ಲಿ ಗೃಹ ಇಲಾಖೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದ್ದು, ಮಲ್ಯ ಪ್ರಕರಣ ದಲ್ಲಿ ಕಾಲಾವಧಿ ಫೆ. 10ಕ್ಕೆ ಮುಕ್ತಾಯ ವಾಗುವುದರಲ್ಲಿತ್ತು. ಆದರೆ ಅದಕ್ಕಿನ್ನೂ ಒಂದು ವಾರ ಬಾಕಿ ಇರು ವಾಗಲೇ, ಮಲ್ಯರ ಹಸ್ತಾಂತರಕ್ಕೆ ಗೃಹ ಇಲಾಖೆ ಒಪ್ಪಿಗೆ ನೀಡಿದೆ.
ಮಲ್ಯಗೆ ಬಚಾವಾಗಲು ಇನ್ನೊಂದು ಅವಕಾಶ?
ಯು.ಕೆ. ಗೃಹ ಇಲಾಖೆಯಿಂದ ಹಸ್ತಾಂ ತರಕ್ಕೆ ಅಧಿಕೃತ ಒಪ್ಪಿಗೆ ಸಿಕ್ಕಿದ್ದರೂ, ಈ ನಿರ್ಧಾರದ ವಿರುದ್ಧವೇ ಮೇಲ್ಮನವಿ ಸಲ್ಲಿಸಲು ಮಲ್ಯ ಅವರಿಗೆ ಅವಕಾಶವಿದೆ. ಅತ್ತ, ಮಲ್ಯ ಭಾರತದಲ್ಲಿ ತಮಗೆ ಸಂಬಂಧಿಸಿದ 13,000 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ್ದು ಇದು ತಾವು ಬಾಕಿ ಉಳಿಸಿಕೊಂಡಿರುವ ಸಾಲಕ್ಕಿಂತ (9,000 ಕೋಟಿ ರೂ.) ಹೆಚ್ಚಾಗಿದೆ ಎಂದು ಗುಡುಗಿದ್ದಾರೆ. ಇದೇ ವಿಚಾರವನ್ನು ಅವರು ಮೇಲ್ಮನವಿಯಲ್ಲಿ ಉಲ್ಲೇಖೀಸಿ, ತಮ್ಮ ಗಡೀಪಾರು ಆದೇಶ ಹಿಂಪಡೆಯಲು ಕೋರಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.