ಬೆಳೆವಿಮೆ..ಹೊಸಪೇಟೆವರೆಗೆ ರೈಲು..


Team Udayavani, Feb 5, 2019, 6:20 AM IST

dvg-5.jpg

ದಾವಣಗೆರೆ: ಬೆಳೆ ವಿಮೆ ಪಾವತಿ…, ಹೊಸಪೇಟೆಯವರೆಗೆ ಹರಿಹರ-ಕೊಟ್ಟೂರು ರೈಲು ವಿಸ್ತರಣೆ…, ಇವು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಕೆಲ ಮನವಿ.

ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ ಹನುಮಂತಪ್ಪ ಮತ್ತು ಇತರೆ ರೈತರು, ಮೆಕ್ಕೆಜೋಳದ ಬೆಳೆ ವಿಮೆ ಕಂತು ಪಾವತಿಸಿದ್ದರೂ ವಿಮೆ ಹಣ ಇನ್ನೂ ಕೂಡ ಬಂದಿಲ್ಲ ಎಂದು ತಿಳಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಅರ್ಜಿಗಳನ್ನು ಕಳಿಸಿ, ಪರಿಶೀಲಿಸಲು ತಿಳಿಸುವುದಾಗಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಹೇಳಿದರು.

ಹರಿಹರ ತಾಲೂಕಿನ ಅಮರಾವತಿ ಕಾಲೋನಿಯ ಜಿ. ಗುರುರಾಜ್‌, ಹರಿಹರ-ಕೊಟ್ಟೂರು ರೈಲನ್ನು ಹೊಸಪೇಟೆಯವರೆಗೆ ವಿಸ್ತರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಅರ್ಜಿಯನ್ನು ರೈಲ್ವೆ ಇಲಾಖೆಗೆ ಕಳಿಸಿ ಕೊಡಲಾಗುವುದು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯಲ್ಲಿನ ದ್ವಿತಿಯ ದರ್ಜೆ ಸಹಾಯಕಿ ಶೋಭಾ ಎಂಬುವರು ಅಕ್ರಮವಾಗಿ ಉಚಿತ ನಿವೇಶನ ಪಡೆದಿದ್ದಾರೆ. ಸೂಕ್ತ ಕ್ರಮ ಜರುಗಿಸುವಂತೆ ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ್‌ ಇಂಗಳೇಶ್ವರ್‌ ಮನವಿ ಸಲ್ಲಿಸಿದರು. ಅರ್ಜಿಯನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಂದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ತಿಳಿಸಿದರು.

ನ್ಯಾಮತಿ ತಾಲೂಕಿನ ಟಿ. ಗೋಪಗೊಂಡನಹಳ್ಳಿ ಗ್ರಾಮದ ಎಚ್. ಮಲ್ಲಪ್ಪ ಎಂಬುವರು ತಮ್ಮ ಜೊತೆಗೆ 6 ಜನರು ಜಮೀನು ಹದ್ದುಬಸ್ತುಗೆ ಅರ್ಜಿ ಸಲ್ಲಿಸಿದ್ದೆವು. ಆದರೆ, ಇದುವರೆಗೆ ಯಾರು ಸಹ ಬಂದಿರುವುದಿಲ್ಲ. ಹದ್ದುಬಸ್ತ್ ಆಗಿಯೇ ಇಲ್ಲ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ, ಸಂಬಂಧಿಸಿದ ಅಧಿಕಾರಿಗಳಿಗೆ ಅರ್ಜಿ ರವಾನಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ತಿಳಿಸಿದರು.

ಹರಿಹರ ತಾಲೂಕಿನ ಧೂಳೆಹೊಳೆ ಗ್ರಾಮದ ಮಹಾಲಿಂಗಯ್ಯ ಎಂಬುವವರು, 1978ರ ಮೇ.2 ರಂದು ಸರ್ವೆ ನಂ.24/1ಬಿ ರಲ್ಲಿ ನಿವೇಶನ ನೀಡಲಾಗಿದೆ. ಹಕ್ಕುಪತ್ರ ಸಹ ಇದೆ. ಭೂ ದಾಖಲೆಗಳ ಇಲಾಖೆಯ ಭೂಮಾಪಕರು ಅಳತೆ ಮಾಡಿ ಪರಿಶೀಲಿಸಿದಾಗ ಮೂಲ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಸೇರ್ಪಡೆ ಮಾಡಲು ಕೋರಿ ಸಲ್ಲಿಸಿದ ಅರ್ಜಿ ಹಾಗೂ ಈ ಸೊತ್ತಿನ ಇ-ದಾಖಲೆ ಕೊಡಿಸಿಕೊಡಲು ಮನವಿ ಸಲ್ಲಿಸಿದರು. ಹರಿಹರ ತಹಶೀಲ್ದಾರರಿಗೆ ಸೂಕ್ತ ಕ್ರಮ ಜರುಗಿಸಲು ಸೂಚಿಸುವುದಾಗಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ತಿಳಿಸಿದರು.

ಜಾಲಿನಗರದ ನಸ್ರೀನಾ ಬಾನು ಎಂಬುವರು ತಮ್ಮ ಒಂದು ವರ್ಷದ ಮಗುವಿಗೆ ಮೂತ್ರಕೋಶ ತೊಂದರೆ ಇರುವುದರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹಾಯಧನ ಕೋರಿ ಅರ್ಜಿ ಸಲ್ಲಿಸಿದರು.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.