ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್‌ ಮಂಡನೆ


Team Udayavani, Feb 5, 2019, 6:23 AM IST

samagra.jpg

ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ, ರೈತರ, ಅಸಂಘಟಿತ ಕಾರ್ಮಿಕರ ಪರವಾಗಿರುವ ಮತ್ತು ಮಧ್ಯಮ ವರ್ಗದ ಆಶಯಕ್ಕೆ ಪೂರಕವಾಗಿರುವ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಪತ್ರಿಕೆಗಳ ಸಂಪಾದಕರ ಜತೆ ಸಂವಾದ ನಡೆಸಿದ ಅವರು, ಆಟೋಚಾಲಕರ ಸಂಘಟನೆಗಳು, ಗಾರ್ಮೆಂಟ್ಸ್‌ ನೌಕರರು ಮತ್ತಿತರ ಅಸಂಘಟಿತ  ಕ್ಷೇತ್ರಗಳ ಪ್ರತಿನಿಧಿಗಳ ಸಲಹೆಗಳನ್ನೂ ಬಜೆಟ್‌ ರೂಪಿಸುವಲ್ಲಿ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದ್ದ ಅನ್ನಭಾಗ್ಯ, ರೈತರಿಗೆ ಉಚಿತ ವಿದ್ಯುತ್‌ನಂತಹ ಯೋಜನೆಗಳನ್ನು ಮುಂದುವರಿಸಲಾಗಿದೆ. ಒಟ್ಟಾರೆಯಾಗಿ ಸುಮಾರು 11,000 ಕೋಟಿ ರೂ.ಗಳನ್ನು ಸರ್ಕಾರದಿಂದ ಒದಗಿಸಲಾಗಿದೆ.  45,000 ಕೋಟಿ ರೂ. ಸಾಲಮನ್ನಾಕ್ಕಾಗಿ ಮೀಸಲಿರಿಸಲಾಗಿದೆ.

ಉಳಿದಂತೆ 85% ಬಿಪಿಎಲ್‌ ಕಾರ್ಡ್‌ ಹೊಂದಿರುವವರ ಬಗ್ಗೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು  ಹೇಳಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಘೋಷಣೆಯಾದ ರೈತಬೆಳಕು ಯೋಜನೆ ಬಗ್ಗೆ ಪ್ರಸ್ತಾಪಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ,3,500 ಕೋಟಿ ರೂ ಅನುದಾನದ ಘೋಷಣೆಯಾಗಿತ್ತು. ಆದರೆ, 1,000 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು.

ತಾವು ಆಡಳಿತಕ್ಕೆ ಬಂದ ಮೇಲೆ ಆ ಯೋಜನೆ ಸ್ಥಗಿತವಾಗಿರುವ ಬಗ್ಗೆ ತಮಗೇನೂ ಬೇಸರವಿಲ್ಲ. ರೈತರ ಸಾಲಮನ್ನಾ ತಮಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ವಿವಿಧ ಭಾಗ್ಯಗಳು, ರೈತರ ಸಾಲಮನ್ನಾ ಯೋಜನೆಗಳು ಜನರ ಸಮಸ್ಯೆಯನ್ನು ನಿಜವಾಗಿ ಪರಿಹರಿಸುತ್ತವೆ ಎನ್ನುವುದರ ಬಗ್ಗೆ ಖಾತ್ರಿಯಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ, ಚುನಾವಣಾ ಪ್ರಣಾಳಿಕೆಗಳಿಗೆ ಅನುಗುಣವಾಗಿ ಕೆಲವು ನಿರ್ಧಾರಗಳನ್ನು ಪ್ರಕಟಿಸಬೇಕಾಗುತ್ತದೆ ಎಂದ ಅವರು, ಒಟ್ಟಾರೆ ಅಬಿವೃದ್ಧಿಗೆ ಪೂರಕವಾಗಿ ಬಜೆಟ್‌ ಮಂಡಿಸುವುದಾಗಿ ಹೇಳಿದರು.  

ಪ್ರಧಾನಿಗೆ ಪತ್ರ: ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದ್ದರೂ ಪ್ರಧಾನಿ ಮೋದಿ ಅವರ ಚಿತ್ರವನ್ನು ಪ್ರಕಟಿಸಿ ಯೋಜನೆ ಕೇಂದ್ರ ಸರ್ಕಾರದ್ದೇ ಎನ್ನುವ ರೀತಿಯಲ್ಲಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಕಟಕಿಯಾಡಿದ್ದಾರೆ.

ರಾಜ್ಯಸರ್ಕಾರದಿಂದ ಸುಮರು 130 ಕೊಟಿ ರೂ. ಯೋಜನೆಗೆ ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರ ಕೇವಲ 30 ಕೊಟಿ ರೂ.ಗಳನ್ನು  ಕೇಂದ್ರ ನೀಡುತ್ತಿದೆ. ದೇಶದೆಲ್ಲೆಡೆ ಈ ರೀತಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಕೊಡುಗೆ ಮಹತ್ವದ್ದಾಗಿರುವುದರಿಂದ ಆ ಬಗ್ಗೆ ಪ್ರಕಟಣೆಗಳಲ್ಲಿ,

ಕೇಂದ್ರ ನಡೆಸುತ್ತಿರುವ ಪ್ರಚಾರದಲ್ಲಿ ಉಲ್ಲೇಖೀಸಬೇಕೇಂದು ತಿಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಆ ಕಾರಣಕ್ಕಾಗಿ ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.  

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರ ಸಿಬಿಐ ತನಿಖಾ ಸಂಸ್ಥೆಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾದುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲಿ ನಡೆದಿರುವ ಘಟನೆ ರಾಜ್ಯ ಸರ್ಕಾರಗಳ ಸ್ವಾಯತ್ತತೆಗೆ ಧಕ್ಕೆ ತರುವ ವಿಚಾರವಾಗಿದೆ. ತಾವು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರವಾಗಿ ನಿಲ್ಲುತ್ತೇನೆ.
-ಎಚ್‌.ಡಿ. ಕುಮಾರಸ್ವಾಮಿ 

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.