ದೇವಾಡಿಗ ವೆಲ್ಫೇರ್‌ ಅಸೋಸಿಯೇಶನ್‌ ಮುಂಬಯಿ 31ನೇ ವಾರ್ಷಿಕೋತ್ಸವ 

Team Udayavani, Feb 5, 2019, 1:02 PM IST

0302mum09.jpg

ಮುಂಬಯಿ: ಮುಂಬಯಿಯ ಪ್ರತಿಷ್ಠಿತ ಜಾತಿಯ ಸಂಸ್ಥೆಗಳÇÉೊಂದಾದ ದೇವಾಡಿಗ ವೆಲ್ಫೆàರ್‌ ಅಸೋಸಿಯೇಶನ್‌ ಮುಂಬಯಿ ಇದರ 31ನೇ ವಾರ್ಷಿಕೋತ್ಸವವು ವಡಾಲದ ಎನ್‌.ಕೆ.ಇ.ಎಸ್‌ ಹೈಸ್ಕೂಲ್‌ ಸಭಾಗ್ರಹದಲ್ಲಿ ಜ.20ರಂದು ವಿಜೃಂಭಣೆ ಯಿಂದ ನೆರವೇರಿತು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿಕೊಂಡ ಸುರೇಶ್‌ ಡಿ. ಪಡುಕೋಣೆ, ಮುಖ್ಯ ಅತಿಥಿ ಹೊಟೇಲ್‌ ಉದ್ಯಮಿ ಸುರೇಶ್‌ ಪೂಜಾರಿ, ಅಧ್ಯಕ್ಷ ಸುಬ್ಬ ಜಿ. ದೇವಾಡಿಗ, ಶ್ರೀ ಏಕನಾಥೇಶ್ವರಿ ದೇವಸ್ಥಾನ ಕಟ್ಟಡ ಸಮಿತಿಯ ಅಧ್ಯಕ್ಷ ಅಣ್ಣಯ್ಯ ಶೇರಿಗಾರ್‌, ಟ್ರಸ್ಟಿ ಎಚ್‌. ಮೋಹನ್‌ದಾಸ್‌, ಸಂಘದ ಉಪಾಧ್ಯಕ್ಷ ಎನ್‌. ಎನ್‌ ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಬಿ.ಎಂ. ದೇವಾಡಿಗ, ಮಹಿಳಾ ವಿಭಾಗದ ಅಧ್ಯಕ್ಷೆ  ಸೀತಾ ಎಂ. ದೇವಾಡಿಗ, ಯುವ ವಿಭಾಗದ ಅಧ್ಯಕ್ಷ ರವೀಂದ್ರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ‘ಶ್ರೀ ಏಕನಾಥೇಶ್ವರಿ ದೇವಸ್ಥಾನ ಬಾಕೂìರು’ ಈ ಭವ್ಯ ದೇವಾಲಯ ನಿರ್ಮಾಣದ ರೂವಾರಿ ಅಣ್ಣಯ್ಯ ಶೇರಿಗಾರ್‌ ಇವರಿಗೆ ದೇವಾಡಿಗ ವೆಲ್ಫೆàರ್‌ ಅಸೋಸಿಯೇಶನ್‌ ಮುಂಬಯಿ ಇದರ ವತಿಯಿಂದ ಸರ್ವಾನುಮತದಿಂದ, ಚೆಂಡೆ ಮತ್ತು ಕೊಂಬು ನಿನಾದದೊಂದಿಗೆ ಅತಿಥಿ ಗಣ್ಯರು ಮತ್ತು ಸಂಘದ ಪದಾಧಿಕಾರಿಗಳು, ಸಮಾರಂಭದಲ್ಲಿ ಉಪಸ್ಥಿತ ಸಮಸ್ತ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ದೇವಾಡಿಗ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಅಣ್ಣಯ್ಯ ಶೇರಿಗಾರ್‌ ಅವರು ಮಾತನಾಡುತ್ತಾ, ನಾನು ಪ್ರಶಸ್ತಿಗೆ ಅರ್ಹನೋ ಎನ್ನುವುದು ಗೊತ್ತಿಲ್ಲ. ಯಾಕೆಂದರೆ ಅನೇಕರು ನನ್ನೊಂದಿಗೆ ಶ್ರೀ ಏಕನಾಥೇಶ್ವರಿ ದೇವಸ್ಥಾನ ಕಟ್ಟಡ ಯೋಜನೆಯಲ್ಲಿ ಸಹಕರಿಸಿ¨ªಾರೆ. ಆದರೂ ದೇವಾಡಿಗ ವೆಲ್ಫೆàರ್‌ ಅಸೋಸಿಯೇಶನ್‌ ನೀಡಿದ ಪ್ರಶಸ್ತಿಗೆ ನಾನು ಚಿರಋಣಿ. ನಮ್ಮ ಸಮಾಜ ಬಾಂಧವರು ಭಾಷೆ, ಪ್ರಾಂತ್ಯಗಳನ್ನೂ ಮೀರಿ ನಿಲ್ಲಬೇಕೆಂಬ ಭಾವನೆಯನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿ ಸುರೇಶ್‌ ಪೂಜಾರಿ ಅವರು ಮಾತನಾಡುತ್ತಾ, ಎಲ್ಲ ಜಾತಿ ಒಂದೇ. ನಾವು ಶಿಕ್ಷಿತರಾಗಿ ಸಮಸ್ತ ಹಿಂದುಳಿದ ವರ್ಗಗಳನ್ನು ಮೇಲೆತ್ತುವಲ್ಲಿ ಸಹಕರಿಸಬೇಕು. ಅಲ್ಲದೆ ನಾವು ಸಮಯ ಚಿತ್ತರಾಗಿ ನಮ್ಮ ಭವಿಷ್ಯವನ್ನು ನಾವೇ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನಿಮ್ಮ ಸಂಘಕ್ಕೆ ನೆರವಾಗಲು ನಾನು ಯಾವಾಗಲೂ ಸದಾ ಸಿದ್ಧ ಎಂಬ ಭರವಸೆಯನ್ನು  ಈ ಸಂದರ್ಭದಲ್ಲಿ ಅವರು ನೀಡಿದರು.

ಸಭಾಧ್ಯಕ್ಷರಾದ ಸುರೇಶ್‌ ಪಡುಕೋಣೆ ಅವರು ಮಾತನಾಡುತ್ತಾ, ನಮ್ಮ ಸಮಾಜ ಬಾಂಧವರು ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಪಾವನರಾಗಬೇಕು. ನಮ್ಮ ಏಳಿಗೆ ಸಾಧನೆಯಲ್ಲಿ ನಿರಂತರವಾಗಿ ಪರಿಶ್ರಮ ಇರಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶ್ರೀ ಏಕನಾಥೇಶ್ವರಿ ಕಟ್ಟಡ ಸಮಿತಿಯ ಟ್ರಸ್ಟಿ ಎಚ್‌. ಮೋಹನ್‌ದಾಸ್‌ ಮಾತನಾಡಿ, ಏಕನಾಥೇಶ್ವರಿ ದೇವಸ್ಥಾನ ಕಟ್ಟಡ ನಿರ್ಮಿಸುವಲ್ಲಿ ಅಣ್ಣಯ್ಯ ಶೇರಿಗಾರ್‌ ಅವರೊಂದಿಗೆ ಸಹಕರಿಸಿದ ಸಂದರ್ಭವನ್ನು ನೆನೆಸಿಕೊಂಡು, ತುಳು-ಕನ್ನಡಿಗರು ಭಾಷೆ ಯಿಂದ ಬೇರೆಯಾಗದೆ ನಾವೆಲ್ಲರೂ ದೇವಾಡಿಗರು ಎಂಬ ಭಾವನೆ ಬೆಳೆಸಿಕೊಂಡು ಮುನ್ನಡೆಯಬೇಕೆಂದು ತಿಳಿಸಿದರು.

ಅಂದು ಬೆಳಗ್ಗೆ ಸಮಾಜ ಬಾಂಧವರಿಗಾಗಿ ಸಂಸ್ಥೆಯು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವೈವಿಧ್ಯಮಯ ನೃತ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನರಂಜಿಸಿದವು. ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮಗಳ ತೀರ್ಪುಗಾರರಾಗಿ ಲಲಿತಾ ಅಂಗಡಿ, ಕುಮಾರಿ ಪ್ರಾಂಜಲಿ ರಾವ್‌ ಮತ್ತು ಕುಮಾರಿ ಸ್ನೇಹಲ್‌ ಹೆರೆಂಜಾಲ್‌ ಇವರು ಸಹಕರಿಸಿದರು. ಅವರಿಗೆ ಸಂಘದ ಅಧ್ಯಕ್ಷರು ಹೂಗುತ್ಛ ನೀಡಿ ಅಭಿನಂದಿಸಿದರು.

ಬೆಳಗ್ಗಿನ ಕಾರ್ಯಕ್ರಮಗಳ ತರುವಾಯ ಸಂಘದ ಮಹಿಳಾ ವಿಭಾಗದವರಿಂದ ಅರಸಿನ ಕುಂಕುಮ ಕಾರ್ಯಕ್ರಮವು ನೆರವೇರಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಅಪರಾಹ್ನದ ಭೋಜನ ವಿರಾಮದ ಅನಂತರ ಕುಮಾರಿ ನಿಶೀತಾ ಅಶೋಕ್‌ ದೇವಾಡಿಗ ಇವರ ಸ್ವಾಗತ ನೃತ್ಯದೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ,  ವಾರ್ಷಿಕ ಕ್ರೀಡೋತ್ಸವದಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಮತ್ತು ಡಿಪಿಎಲ್‌ ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು  ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಾಯಿತು. ಅತಿಥಿ ಗಣ್ಯರನ್ನು ಹಾಗೂ ಸಮಸ್ತ ಸಮಾಜ ಬಾಂಧವರನ್ನು ಜಿ.ಎ ದೇವಾಡಿಗರು ಹೃದಯಪೂರ್ವಕವಾಗಿ ಸ್ವಾಗತಿಸಿ, ಸಂಘದ ಕುರಿತಾಗಿ ಸಂಕ್ಷಿಪ್ತ ಮಾಹಿತಿಯನ್ನು ಸಭೆಗೆ ನೀಡಿದರು. ಮಹಿಳಾ ವಿಭಾಗದ ಅಧ್ಯಕ್ಷೆ ಸೀತಾ ಎಂ. ದೇವಾಡಿಗ ಹಾಗೂ ಯುವ ವಿಭಾಗದ ಅಧ್ಯಕ್ಷ ರವೀಂದ್ರ ದೇವಾಡಿಗ ಇವರು ತಮ್ಮ ವಿಭಾಗಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತವಾಗಿ ಸಭೆಗೆ ತಿಳಿಸಿದರು.

ಸಭಾ ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ಬಿ.ಎಂ. ದೇವಾಡಿಗ ಮತ್ತು ಜಿ.ಎ. ದೇವಾಡಿಗರು ನಿರೂಪಿಸಿದರು. ಹಾಗೆಯೇ ಬೆಳಗ್ಗಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಶೋಕ್‌ ದೇವಾಡಿಗ ಮತ್ತು ರೋಹಿತ್‌ ದೇವಾಡಿಗ ನಿರೂಪಿಸಿದರು.

ಮಾಜಿ ಅಧ್ಯಕ್ಷ ಎಸ್‌.ವಿ. ದೇವಾಡಿಗ, ಮಹಿಳಾ ವಿಭಾಗದ ಉಪಾಧ್ಯಕ್ಷೆ ಸುಶೀಲಾ ಎಸ್‌.ದೇವಾಡಿಗ ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು. ಜತೆ ಕಾರ್ಯದರ್ಶಿ ಪ್ರಭಾಕರ ದೇವಾಡಿಗ ವಂದಿಸಿದರು.    ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಟಾಪ್ ನ್ಯೂಸ್

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.