ಸಾಂತಾಕ್ರೂಜ್ ಬಿಲ್ಲವ ಭವನದಲ್ಲಿ ವೃತ್ತಿಪರ ಮಾರ್ಗದರ್ಶನ ಶಿಬಿರ
Team Udayavani, Feb 5, 2019, 3:46 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ವಿದ್ಯಾಉಪ ಸಮಿತಿಯ ವತಿಯಿಂದ ಜ. 26ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ದತ್ತು ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರಗತಿ ಪರಿಶೀಲನೆ ಮತ್ತು ವೃತ್ತಿಪರ ಮಾರ್ಗದರ್ಶನ ಶಿಬಿರ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ಚಂದ್ರಶೇಖರ್ ಎಸ್. ಪೂಜಾರಿ ಅವರು ಮಾತನಾಡಿ, ಬಿಲ್ಲವರ ಅಸೋಸಿಯೇಶನ್ ನಾರಾಯಣ ಗುರುಗಳ ಸಂದೇಶದಂತೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಾ ಬಂದಿದೆ. ಅಂತೆಯೇ ಪ್ರತೀವರ್ಷ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಶೈಕ್ಷಣಿಕ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿದೆ. ಅಸೋಸಿಯೇಶನ್‌ನಿಂದ ಸಹಾಯ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಅನಂತರ ತಮ್ಮ ಮಾತೃ ಸಂಸ್ಥೆಯನ್ನು ಎಂದಿಗೂ ಮರೆಯಬಾರದು, ಅಲ್ಲದೆ ಅಸೋಸಿಯೇಶನ್‌ನ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ವಿದ್ಯಾ ಉಪಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ತೋನ್ಸೆ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿ ಗಳು ಶಿಸ್ತುಬದ್ಧ ಜೀವನ ನಡೆಸಲು ಸಲಹೆ ನೀಡಿದರು. ಈ ಮಧ್ಯೆ ಉಪನ್ಯಾಸಕ ಕುಶಲ್ ಬಿ. ಸುವರ್ಣ ಅವರನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾದ ಶಂಕರ್ ಡಿ. ಪೂಜಾರಿ, ಶ್ರೀನಿವಾಸ್ ಕರ್ಕೇರ ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭ ಹಾರೈಸಿದರು.
ಕಾರ್ಯಾಗಾರವನ್ನು ಉದ್ಘಾಟಿಸಿದ ವಿವಾ
ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಉಪನ್ಯಾಸಕರಾದ ಕುಶಲ್ ಬಿ. ಸುವರ್ಣ ಅವರು ವೃತ್ತಿಪರ ಮಾರ್ಗದರ್ಶನದ ಬಗ್ಗೆ ಸವಿಸ್ತಾರವಾಗಿ ವಿವರಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿ ಕಾರ್ಯಾಗಾರವನ್ನು ಉತ್ತಮ ರೀತಿಯಲ್ಲಿ ನೆರವೇರಿಸಿಕೊಟ್ಟರು. ಪಾಲ್ಗೊಂಡ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್ ಎಸ್. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ಉಪಸಮಿತಿಯ ಗೌರವ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ವಂದಿಸಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.