ಶರಣ್‌ ಈಗ “ಅವತಾರ್‌’ ಪುರುಷ


Team Udayavani, Feb 6, 2019, 5:53 AM IST

avatara.jpg

ನಟ ಶರಣ್‌ ಹಾಗೂ ನಿರ್ದೇಶಕ ಸುನಿ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾ ಬರುತ್ತಿದ್ದು, ಈ ಸಿನಿಮಾವನ್ನು ಪುಷ್ಕರ್‌ ನಿರ್ಮಿಸಲಿದ್ದಾರೆಂಬ ವಿಷಯ ನಿಮಗೆ ಗೊತ್ತೇ ಇದೆ. ಸಹಜವಾಗಿಯೇ ಈ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಚಿತ್ರದ ಟೈಟಲ್‌ ಏನಿರಬಹುದು ಎಂಬ ಕುತೂಹಲ ಅನೇಕರಿಗಿತ್ತು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ಚಿತ್ರಕ್ಕೆ “ಅವತಾರ್‌ ಪುರುಷ’ ಎಂದು ಹೆಸರಿಡಲಾಗಿದೆ.

ಕನ್ನಡದಲ್ಲಿ ಅಂಬರೀಶ್‌ ಅವರು “ಅವತಾರ ಪುರುಷ’ ಎಂಬ ಸಿನಿಮಾ ಮಾಡಿದ್ದರು. ಹಾಗಂತ ಆ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇನ್ನು,  ಹಾಲಿವುಡ್‌ನ‌ಲ್ಲಿ “ಅವತಾರ್‌’ ಸಿನಿಮಾ ಬಂದು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ “ಅವತಾರ್‌’ನ ಮೇಕಪ್‌, ಗೆಟಪ್‌ ಎಲ್ಲರ ಮನಸೂರೆಗೊಂಡಿತ್ತು. ಈಗ ಶರಣ್‌ “ಅವತಾರ್‌ ಪುರುಷ’ದ ವಿಶೇಷತೆ ಏನು ಎಂದು ಕೇಳಬಹುದು.

ಹಾಲಿವುಡ್‌ನ‌ “ಅವತಾರ್‌’ ಚಿತ್ರದ ಪೋಸ್ಟರ್‌ ಅನ್ನು ಹೋಲುವಂತೆ “ಅವತಾರ್‌ ಪುರುಷ’ದ ಫೋಟೋಶೂಟ್‌ ಮಾಡಿದ್ದು, ಚಿತ್ರತಂಡ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿದೆ. ಚಿತ್ರದ ಟೈಟಲ್‌ ಫ‌ಂಟ್‌ ಕೂಡಾ “ಅವತಾರ್‌’ ಶೈಲಿಯಲ್ಲೇ ಇದೆ. ಹಾಗಂತ ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನಾದರೂ ಸಂಬಂಧವಿದೆಯಾ ಎಂದು ನೀವು ಕೇಳುವಂತಿಲ್ಲ. ಏಕೆಂದರೆ ಇದು ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಸುನಿ, “ಇಲ್ಲಿ ಹೀರೋ ಜೂನಿಯರ್‌ ಆರ್ಟಿಸ್ಟ್‌. ಹಾಗಾಗಿ, ತುಂಬಾ ಅವತಾರಗಳನ್ನು ತಾಳುತ್ತಾನೆ. ಒಂದು ಹಂತದಲ್ಲಿ ಆತ ನಿಜ ಜೀವನದಲ್ಲಿ ಬೇರೆ ಅವತಾರವೆತ್ತಬೇಕಾಗಿ ಬರುತ್ತದೆ. ಅದಕ್ಕೊಂದು ಕಾರಣವಿರುತ್ತದೆ.  ಹಾಗಾಗಾಗಿ, ಟೈಟಲ್‌ ಕಥೆಗೆ ಚೆನ್ನಾಗಿ ಹೊಂದಿಕೆಯಾಗುತ್ತದೆ. ಜೊತೆಗೆ ಚಿತ್ರದಲ್ಲಿ ರಾಮಾಯಣದಲ್ಲಿ ಬರುವ ತ್ರಿಶಂಕು ಸ್ವರ್ಗ ಮತ್ತು ಮಹಾಭಾರತದ ಒಂದು ಎಳೆಯನ್ನು ಇಟ್ಟುಕೊಂಡು, ಅದನ್ನು ಇಂದಿನ ಕಾಲಮಾನಕ್ಕೆ ಅನ್ವಯಿಸಿದರೆ ಹೇಗಿರುತ್ತದೆ ಎಂಬ ಪರಿಕಲ್ಪನೆಯಲ್ಲಿ ಈ ಚಿತ್ರವನ್ನು ಮಾಡುತ್ತಿದ್ದೇವೆ’ ಎನ್ನುತ್ತಾರೆ. 

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಪುಷ್ಕರ್‌, “ಇದೊಂದು ಸಂಪೂರ್ಣ ಮನರಂಜನಾತ್ಮಕ ಸಿನಿಮಾವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಶರಣ್‌ ಹಾಗೂ ಸುನಿ ಕಾಂಬಿನೇಶನ್‌ನಲ್ಲಿ ಈ ಥರದ ಚಿತ್ರವನ್ನು ಯಾವತ್ತೋ, ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅದಕ್ಕೆ ಸಮಯ ಬಂದಿದೆ. ಇದೊಂದು ಹೊಸಥರ‌ದ ಸಬ್ಜೆಕ್ಟ್ ಚಿತ್ರ. ನೋಡುಗರಿಗಂತೂ ಮನರಂಜನೆಗೆ ಮೋಸವಿಲ್ಲ’ ಎನ್ನುತ್ತಾರೆ. ಅಂದಹಾಗೆ, ಇಂದು ಶರಣ್‌ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ “ಅವತಾರ್‌ ಪುರುಷ’ ಅವರಿಗೆ ಖುಷಿ ನೀಡಲಿದೆ. 

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.