ಪಿಎಸ್‌ಐ ಕೊಲೆ ಯತ್ನ: ನಾಲ್ವರ ಸೆರೆ


Team Udayavani, Feb 6, 2019, 6:39 AM IST

psi.jpg

ತುಮಕೂರು: ನಗರದ ಜಯನಗರ ಠಾಣೆಯ ಪಿಎಸ್‌ಐ ನವೀನ್‌ಕುಮಾರ್‌ ಅವರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರಿನವರಾಗಿದ್ದು, ಹೊಸಗುಡ್ಡದಹಳ್ಳಿಯ ದಿಲೀಪ್‌ ಕುಮಾರ್‌(27),  ಕಲಾಸಿಪಾಳ್ಯದ ಸಂತೋಷ್‌(23), ಕೆ.ಆರ್‌.ಮಾರುಕಟ್ಟೆಯ ವಿತ್ತೇಶ(21), ಮುರುಗನ್‌(24)ನನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರಿಗಾಗಿ ಬಲೆ ಬೀಸಲಾಗಿದೆ.

ಜಯನಗರ ಪೊಲೀಸ್‌ ಠಾಣೆ ಸರಹದ್ದಿನಲ್ಲಿ ಸೋಮವಾರ ರಾತ್ರಿ 11.40ರಲ್ಲಿ ಉಪ್ಪಾರಹಳ್ಳಿ ಅಂಡರ್‌ಪಾಸ್‌ ಹತ್ತಿರ ಇನ್ನೋವಾ ಕ್ರಿಸ್ಟಾ ಕಾರು ಅನುಮಾನವಾಗಿ ನಿಂತಿತ್ತು. ಇದನ್ನು ಕಂಡ ಪಿಎಸ್‌ಐ ನವೀನ್‌ಕುಮಾರ್‌, ಸಮೀಪದ ಹೋಗಿ, ವಿಚಾರಣೆ ಮಾಡುತ್ತಿದ್ದಾಗ ವಾಹನದ ಚಾಲಕ ಪಿಎಸ್‌ಐ ಅವರನ್ನು ಕೆಳಗೆ ತಳ್ಳಿ, ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿ, ಕಾರು ಸಮೇತ ಪರಾರಿಯಾಗಿದ್ದಾನೆ.

ಈ ವೇಳೆ ಕೆಳಗೆ ಬಿದ್ದಿದ್ದ ಸಬ್‌ಇನ್ಸ್‌ಪೆಕ್ಟರ್‌ ನವೀನ್‌ ಅವರ ಮುಖ, ಮೂಗು, ಕೈಗಳು ಮತ್ತು ಕಾಲಿಗೆ ತೀವ್ರ ಪೆಟ್ಟಾಗಿದೆ. ಈಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವು ಕಡೆ ಹೊಲಿಗೆ ಸಹ ಹಾಕಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸುದ್ದಿ ತಿಳಿದ ತಕ್ಷಣ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಆಸ್ಪತ್ರೆಗೆ ದಾವಿಸಿ ಗಾಯಗೊಂಡಿದ್ದ ಸಬ್‌ಇನ್ಸ್‌ಪೆಕ್ಟರ್‌ ನವೀನ್‌ ಅವರ ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಂಧನಕ್ಕೆ ತಂಡ ರಚನೆ: ಈ ಪ್ರಕರಣ ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಕೆ.ವಂಶಿಕೃಷ್ಣ. ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ.ವಿ.ಜೆ ಶೋಭಾರಾಣಿ ಹಾಗೂ ನಗರ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ ತಿಲಕ್‌ ಪಾರ್ಕ್‌ ವೃತ್ತ ನಿರೀಕ್ಷಕ ಟಿ.ಎಸ್‌.ರಾಧಾಕೃಷ್ಣ ಹಾಗೂ ಪಿಎಸ್‌ಐ ಎಂ.ಬಿ.ಲಕ್ಷ್ಮಯ್ಯ ನೇತೃತ್ವದಲ್ಲಿ ಒಂದು ವಿಶೇಷ ತಂಡ ರಚನೆ ಮಾಡಿದ್ದು, ಈ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.