ED ಕಚೇರಿಗೆ ವಾದ್ರಾಗೆ ಕಾರಿನಲ್ಲಿ ಡ್ರಾಪ್ ಕೊಟ್ಟ ಪ್ರಿಯಾಂಕಾ ಗಾಂಧಿ
Team Udayavani, Feb 6, 2019, 12:19 PM IST
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ, ಸೋನಿಯಾ ಗಾಂಧಿ ಅಳಿಯ, ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಇಂದು ಮಧ್ಯಾಹ್ನ 3.47ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ED) ಮುಂದೆ ತನಿಖೆಗೆ ಹಾಜರಾಗಲು ಪತ್ನಿ ಪ್ರಿಯಾಂಕಾ ಗಾಂಧಿ ತಮ್ಮ ಬಿಳಿ ಬಣ್ಣದ ಟೊಯೋಟಾ ಲ್ಯಾಂಡ್ ಕ್ರೂಯಿಸರ್ ಕಾರಿನಲ್ಲಿ ಡ್ರಾಪ್ ಕೊಟ್ಟರು.
ಪ್ರಿಯಾಂಕಾ ಕಾರಿಗೆ ಬೆಂಗಾವಲಾಗಿ ಎಸ್‌ಪಿಜಿ ಸಿಬಂದಿಗಳು ಇನ್ನೊಂದು ವಾಹನದಲ್ಲಿ ಇದ್ದರು. ED ಕಾರ್ಯಾಲಯವಿರುವ ಮಧ್ಯ ದಿಲ್ಲಿಯ ಜಾಮ್ ನಗರ್ ಹೌಸ್ ಗೆ ಪ್ರಿಯಾಂಕಾ, ಪತಿ ವಾದ್ರಾಗೆ ಡ್ರಾಪ್ ಕೊಟ್ಟು ಒಡನೆಯೇ ತಮ್ಮ ಬೆಂಗಾವಲಿನ ವಾಹನಗಳ ಸಾಲಿನಲ್ಲಿ ಮರಳಿದರು.
ವಾದ್ರಾ ಅವರು ತನಿಖಾ ಸಂಸ್ಥೆಯಾಗಿರುವ ಜಾರಿ ನಿರ್ದೇಶನಾಲಯದ ಮುಂದೆ ಇದೇ ಮೊದಲ ಬಾರಿಗೆ ಹಾಜರಾಗುತ್ತಿದ್ದಾರೆ.
ಕಳೆದ ವಾರ ವಾದ್ರಾ ಅವರು ಸಂಭಾವ್ಯ ಬಂಧನದಿಂದ ಪಾರಾಗಲು ನಿರೀಕ್ಷಣಾ ಜಾಮೀನು ಕೋರಿ ದಿಲ್ಲಿ ಕೋರ್ಟ್ ಗೆ ಅರ್ಜಿ ಹಾಕಿದ್ದರು. ಇಡಿ ಮುಂದೆ ತನಿಖೆಗೆ ಹಾಜರಾಗಿ ಸಹಕರಿಸಬೇಕೆಂಬ ಶರತ್ತಿನಲ್ಲಿ ಕೋರ್ಟ್ ವಾದ್ರಾ ಗೆ ಫೆ.16ರ ವರೆಗೆ ಬಂಧನದಿಂದ ರಕ್ಷಣೆ ನೀಡಿತ್ತು.
ವಾದ್ರಾ ಅವರು ಬ್ರಿಟನ್ ನಲ್ಲಿ ಹಲವಾರು ಆಸ್ತಿಪಾಸ್ತಿ ಖರೀದಿಸಿರುವಲ್ಲಿ ನಡೆಸಿರುವರೆನ್ನಲಾದ ಹಣಕಾಸು ಅಕ್ರಮಗಳ ಬಗ್ಗೆ ಜಾರಿ ನಿರ್ದೇಶನಾಲಯ ವಾದ್ರಾ ವಿರುದ್ಧ ತನಿಖೆ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.