ಬೋಟ್ ನಾಪತ್ತೆಯಾಗಿ 53 ದಿನ; ಇನ್ನೂ ನಿಗೂಢ
Team Udayavani, Feb 7, 2019, 12:30 AM IST
ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಮತ್ತು ಅದರಲ್ಲಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ 53 ದಿನ ಕಳೆದು ಹೋದರೂ ಇನ್ನೂ ಮಹತ್ವದ ಸುಳಿವು ಸಿಕ್ಕಿಲ್ಲ. ಮೀನುಗಾರರು ಎಲ್ಲಿ ಹೋದರು? ಏನಾದರು? ಎಂಬುದು ನಿಗೂಢವಾಗಿಯೇ ಉಳಿದಿದ್ದು ಮನೆ ಮಂದಿ ಕೊರಗುತ್ತಾ ಇದ್ದಾರೆ.
ಕ್ಯಾಬಿನ್ ಪತ್ತೆ
ಮಹಾರಾಷ್ಟ್ರದ ಮಾಲ್ವಾಣ್ ಸಮೀಪ ಅಲ್ಲಿನ ಮೀನುಗಾರರಿಗೆ ಸಮುದ್ರದ ಮಧ್ಯೆ ಬೋಟಿನ ಕ್ಯಾಬಿನ್ನ ಮೇಲ್ಛಾವಣಿ ಸಮುದ್ರದಲ್ಲಿ ತೇಲುತ್ತಿರುವುದು ಪತ್ತೆಯಾಗಿದ್ದು, ಅದು ಸುವರ್ಣ ತ್ರಿಭುಜ ಬೋಟಿನದ್ದಾಗಿರಬಹುದೇ ಎಂದು ಖಚಿತಪಡಿಸಲು ನಾಪತ್ತೆಯಾದ ಮೀನುಗಾರರ ಸಂಬಂಧಿಕರಿಗೆ ಚಿತ್ರವನ್ನು ಕಳುಹಿಸಲಾಗಿದೆ. ಆದರೆ ಅವರು ಅದನ್ನು ಅಲ್ಲಗಳೆದಿದ್ದಾರೆ ಎಂದು ತಿಳಿದು ಬಂದಿದೆ.
ಸ್ಪಷ್ಟ ಮಾಹಿತಿ ನೀಡಿಲ್ಲ
ನೌಕಾಪಡೆಗೆ ತಳಭಾಗದಲ್ಲಿ ಸಿಕ್ಕಿರುವ ವಸ್ತು ಯಾವುದೆಂದು ಇದುವರೆಗೂ ಸ್ಪಷ್ಟ ಮಾಹಿತಿ ನೀಡಿಲ್ಲ. ನಾಳೆ, ನಾಳಿದ್ದು ಎಂದು ದಿನ ದೂಡುತ್ತಾ ಇದ್ದಾರೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವರು ನೌಕಾದಳ ವನ್ನು ಸಂಪರ್ಕಿಸಿ ಮಾಹಿತಿ ಪಡೆದು ತಿಳಿಸುವಂತೆ ಜನಪ್ರತಿ ನಿಧಿಗಳನ್ನು ಆಗ್ರಹಿಸುತ್ತಿದ್ದೇವೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್ಲೈನ್ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.