ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ
Team Udayavani, Feb 7, 2019, 11:27 AM IST
ಧಾರವಾಡ: ಸರ್ಕಾರಗಳು ಪ್ರತಿಯೊಬ್ಬರ ಜೀವದ ರಕ್ಷಣೆ ಹಾಗೂ ಜೀವನದ ಭದ್ರತೆ, ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತವೆ. ಆದರೆ ಜನರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಪೊಲೀಸ್ ಸ್ನೇಹ ಜನವ್ಯವಸ್ಥೆ ರೂಪುಗೊಂಡಾಗ ಮಾತ್ರ ಆ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಹೇಳಿದರು.
ನಗರದ ಕಲಾಭವನದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯು ಜಿಲ್ಲಾಡಳಿತ, ಸಾರಿಗೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಗಳು ಜನರಿಗಾಗಿ ಯೋಜನೆಗಳನ್ನು ಜಾರಿಗೆ ತರುತ್ತವೆ. ಅವರ ಪಾಲ್ಗೊಳ್ಳುವಿಕೆಯಿಂದ ಯೋಜನೆ ಉದ್ದೇಶ ಈಡೇರುತ್ತದೆ. ಜನರು ಪೊಲೀಸ್ ಆಗಬೇಕು ಮತ್ತು ಪೊಲೀಸರು ಸಹೃದಯ ನಾಗರಿಕರಾಗಬೇಕು. ಅಂದಾಗ ಮಾತ್ರ ಅಪಘಾತ, ಅಪರಾಧ, ಅನಾಹುತಗಳು ಕಡಿಮೆ ಆಗುತ್ತವೆ ಎಂದು ಹೇಳಿದರು.
ಕರಪತ್ರ ಬಿಡುಗಡೆ: ಇದೇ ವೇಳೆ ರಸ್ತೆ ಸುರಕ್ಷತೆ ಕುರಿತ ಕರಪತ್ರಗಳನ್ನು ಸಿಇಒ ಡಾ| ಬಿ.ಸಿ. ಸತೀಶ್, ಸ್ಟಿಕರ್‌ಗಳನ್ನು ಅಪರ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ, ಸುರಕ್ಷತಾ ಜಾಗೃತಿಯ ವಿಡಿಯೋ ಕ್ಲಿಪ್ ಗಳನ್ನು ಉಪಪೊಲೀಸ್ ಆಯುಕ್ತ ರವೀಂದ್ರ ಗಡಾದಿ ಮತ್ತು ಮಾಹಿತಿ ಪುಸ್ತಕಗಳನ್ನು ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ ಬಿಡುಗಡೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಅಪರ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ ಮತ್ತು ನೇಚರ್ ಫಸ್ಟ್ ಇಕೋ ವಿಲೇಜ್ ಅಧ್ಯಕ್ಷ ಪಿ.ವಿ. ಹಿರೇಮಠ ಮಾತನಾಡಿದರು. ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಅಧ್ಯಕ್ಷತೆ ವಹಿಸಿದ್ದರು. ಉಪಪೊಲೀಸ್ ಆಯುಕ್ತ ರವೀಂದ್ರ ಗಡಾದಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಆರ್.ಎಂ. ದೊಡ್ಡಮನಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಮುಳ್ಳೂರ, ಎನ್‌ಡಬ್ಲೂಕೆಎಸ್‌ಆರ್‌ಟಿಸಿ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಶ್ವಜ್ಞ, ಜಿಲ್ಲಾ ಉಪಪೊಲೀಸ್ ವರಿಷ್ಠಾಧಿಕಾರಿ ಡಾ| ರಾಮನಗೌಡ ಹಟ್ಟಿ, ಜಿಲ್ಲಾ ಅಥೊರ್ಪೇಡಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ| ಸತೀಶ ಇರಕಲ್ಲ, ಧಾರವಾಡ ಬಾಂಡ್ಸ್ ಅಧ್ಯಕ್ಷ ಕಿರಣ ಹಿರೇಮಠ, ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್. ನಾಗನೂರ ಸೇರಿದಂತೆ ಹಲವರು ಇದ್ದರು.
ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಕಾರ್ಯದರ್ಶಿ ಆಗಿರುವ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ಕವಳಿ ಮಾತನಾಡಿದರು. ರವಿ ಕುಲಕರ್ಣಿ ನಿರೂಪಿಸಿದರು. ಮುರಗೇಶ ಚಣ್ಣನ್ನವರ ಸ್ವಾಗತಿಸಿ, ವಂದಿಸಿದರು.
ವಾಹನ ಚಾಲನೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವಳಿ ನಗರದಲ್ಲಿ 2016ರಲ್ಲಿ 3 ಕೋಟಿ, 2017ರಲ್ಲಿ 4.5 ಕೋಟಿ ಮತ್ತು 2018ರಲ್ಲಿ 6.5 ಕೋಟಿ ರೂ.ಗಳನ್ನು ವಾಹನ ಸವಾರರಿಂದ ದಂಡ ವಸೂಲಿ ಮಾಡಲಾಗಿದೆ. ಕಳೆದ ವರ್ಷ ಅವಳಿ ನಗರ ವ್ಯಾಪ್ತಿಯಲ್ಲಿ 26 ಕೊಲೆ ಪ್ರಕರಣ ಮತ್ತು 400 ಅಪಘಾತದಲ್ಲಿ ಸಾವು ಸಂಭವಿಸಿವೆ. ಪೊಲೀಸ್ ಇಲಾಖೆ ಪರಿಣಾಮಕಾರಿ ಕಾರ್ಯ ಮತ್ತು ಮುಂಜಾಗ್ರತೆಗಳಿಂದಾಗಿ ಹಿಂದಿನ ವರ್ಷಗಳಿಗೆ ಹೊಲಿಕೆ ಮಾಡಿದರೆ ಶೇ.38ರಷ್ಟು ಕೊಲೆ, ಅಪರಾಧ ಪ್ರಕರಣಗಳು ಪ್ರಸಕ್ತ ಸಾಲಿನಲ್ಲಿ ಕಡಿಮೆ ಆಗಿವೆ.
•ಎಂ.ಎನ್. ನಾಗರಾಜ್,
ಪೊಲೀಸ್ ಆಯುಕ್ತರು, ಹು-ಧಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.