ದೇವರಾಜ ಅರಸು ಕಾಲೇಜಲ್ಲಿ ಜನಪದ, ಭಾವಗೀತೆ ಸ್ಪರ್ಧೆ
Team Udayavani, Feb 8, 2019, 7:08 AM IST
ಹುಣಸೂರು: ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳು ವಿದ್ಯಾರ್ಥಿ ಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಲಿವೆ ಎಂದು ಡಿ.ಡಿ. ಅರಸು ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾ ಧ್ಯಕ್ಷ ಧರ್ಮಾಪುರ ನಾರಾಯಣ್ ತಿಳಿಸಿದರು.
ನಗರದ ಅರಸು ಕಾಲೇಜು ವತಿಯಿಂದ ದೇವರಾಜ ಅರಸರ ಸ್ಮರಣಾರ್ಥ ಆಯೋಜಿಸಿದ್ದ ಐದನೇ ವರ್ಷದ ರಾಜ್ಯ ಮಟ್ಟದ ಜನಪದ ಹಾಗೂ ಭಾವಗೀತೆ ಸ್ಪರ್ಧೆ ಉದ್ಘಾಟನಾ ಸಮಾ ರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳು ಅತ್ಯುತ್ತಮ ಅವಕಾಶ ಕಲ್ಪಿಸಿವೆ ಎಂದರು.
ಪ್ರಾಚಾರ್ಯ ಡಾ.ವೆಂಕಟೇಶ್ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ಕಾಲೇಜಿಗೆ ಒಳ್ಳೆಯ ಹೆಸರು ಬರುತ್ತಿದೆ ಎಂದರು. ವೇದಿಕೆಯಲ್ಲಿ ನಗರಸಭೆ ಸದಸ್ಯೆ ಪ್ರೇಮಾನಂಜಪ್ಪ, ರೋಟರಿ ಸಂಸ್ಥೆ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಶ್ರೀಧರ್, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಕೆ.ಎನ್.ಮೋಹನ್, ಸಾಂಸ್ಕೃತಿಕ ವಿಭಾಗದ ಸಂಚಾಲಕ ಆರ್.ಉಮಾ ಕಾಂತ್, ಶಿಕ್ಷಕರಾದ ವೆಂಕಟರಮಣ, ಕುಮಾರ್, ಲೋಕೇಶ್ ಇತರರಿದ್ದರು.
ಕಾರ್ಯಕ್ರಮದಲ್ಲಿ 5ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರ ಪಟ್ಟಿ ಹೀಗಿದೆ. ಭಾವಗೀತೆ ವಿಭಾಗ: ನಿಶ್ಚಯ್ ಜೈನ್ (ಪ್ರಥಮ) ಜ್ಞಾನದೀಪ ಪ್ರಥಮ ದರ್ಜೆ ಕಾಲೇಜು ಮೈಸೂರು. ಮಧು ಬಿ.ಕೆ.(ದ್ವಿತೀಯ) ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್.ಪೇಟೆ. ಲಕ್ಷ್ಮ್ಮಣ (ತೃತೀಯ) ಸಿದ್ಧಾರ್ಥ ನಗರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮೈಸೂರು. ಜಾನಪದ ಸ್ಪರ್ಧೆ: ಸಂಧ್ಯಾ (ಪ್ರಥಮ) ಡಿ.ಡಿ. ಅರಸ್ ಕಾಲೇಜು ಹುಣಸೂರು. ಮಂಜೇಶ್ ಗೌಡ (ದ್ವಿತೀಯ) ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಡ್ಯ. ಹರೀಶ್(ತೃತೀಯ) ಮೈಸೂರು ವಿವಿಯ ಲಲಿತಕಲಾ ಕಾಲೇಜು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.