ತ್ಯಾಜ್ಯ ಸಂಗ್ರಹ ಸ್ಥಳದಲ್ಲಿ ಔಷಧಿ ಸಿಂಪಡಿಸಲು ಒತ್ತಾಯ
Team Udayavani, Feb 8, 2019, 7:15 AM IST
ಕಲಬುರಗಿ: ತಾಲೂಕಿನ ಉದನೂರ ಗ್ರಾಮಕ್ಕೆ ಸಮೀಪದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕ ಪಕ್ಕದ ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಂದಿಕೂರ ಗ್ರಾಪಂ ಸದಸ್ಯ ಪವನಕುಮಾರ ವಳಕೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಘನತ್ಯಾಜ್ಯ ವಿಲೇವಾರಿ ಘಟಕದ ಪಕ್ಕದಲ್ಲಿ ರಸ್ತೆ ಕಿರಿದಾಗಿದ್ದು, ವಾಹನ ಸಂಚಾರ ದಟ್ಟವಾಗಿದೆ. ಇದರಿಂದ ಹಲವಾರು ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಅಗಲೀಕರಣ ಮಾಡಬೇಕೆಂದು ಒತ್ತಾಯಿಸಿದರು. ಘನತ್ಯಾಜ್ಯ ಘಟಕದಿಂದ ಗ್ರಾಮಸ್ಥರು ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ. ತ್ಯಾಜ್ಯ ಸಂಗ್ರಹಿಸುವ ಸ್ಥಳ ಮತ್ತು ಸೀತನೂರ, ನಂದಿಕೂರ, ಪಾಣೆಗಾಂವ ಗ್ರಾಮಗಳ ಸುತ್ತಮುತ್ತಸಾಂಕ್ರಾಮಿಕ ರೋಗ
ಹರಡದಂತೆ ಔಷಧಿ ಸಿಂಪಡಿಸಬೇಕು. ಗ್ರಾಮದ ಮಲ್ಲಿಕಾರ್ಜುನ ಮೂಲಗೆ ಅವರ ಜಮೀನಿಗೆ ಬೆಂಕಿ ಕಿಡಿ ಬಿದ್ದು ಲಕ್ಷಂತಾರ ರೂ. ಮೌಲ್ಯದ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಗರದಲ್ಲಿರುವ ನಾಯಿಗಳನ್ನು ತಂದು ಉದನೂರ ಗ್ರಾಮದಲ್ಲಿ ಬಿಡಲಾಗುತ್ತಿದೆ. ರಾತ್ರಿ ವೇಳೆ ಮಲಗಿದ ವ್ಯಕ್ತಿಗಳನ್ನು ನಾಯಿಗಳು ಕಚ್ಚುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಾಯಿಗಳ ದಾಳಿ ಮಾಡಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆದರೆ, ನಾಯಿಗಳ ಹಾವಳಿ ತಡೆಯಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂದಿಕೂರ ಗ್ರಾಪಂ ಉಪಾಧಕ್ಷ
ಶರಣಬಸಪ್ಪ ಡಿ.ಮೂಲಗೆ, ಮುಖಂಡರಾದ ಶಿವರಾಜ ಪೊಲೀಸ್ ಪಾಟೀಲ, ಜಗದೇವಿ ಕುಮಾರ, ಶಾಂತಾ ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಮಾಲಿಪಾಟೀಲ, ಹಣಮಂತ ಚವ್ಹಾಣ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.