ಗ್ರಾಪಂ ನೌಕರರ ಪ್ರತಿಭಟನೆ
Team Udayavani, Feb 8, 2019, 9:02 AM IST
ಬೀದರ: ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ (ಸಿಐಟಿಯು) ವತಿಯಿಂದ ಗುರುವಾರ ಜಿಲ್ಲಾ ಪಂಚಾಯತ ಎದುರು ಪ್ರತಿಭಟನೆ ನಡೆಸಲಾಯಿತು.
ಗ್ರಾಮ ಪಂಚಾಯತಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮೂಲ ವೇತನ ಪಾವತಿಸುವ ಆದೇಶವನ್ನು ಸರ್ಕಾರ ಹೊರಡಿಸಬೇಕು. ಅನುಮೋದನೆಗೆ ಬಾಕಿ ಇರುವ ಸಿಬ್ಬಂದಿಗಳಿಗೆ ಅನುಮೋದನೆ ಆದೇಶ ಹೊರಡಿಸಬೇಕು. ಕುಡಿಯುವ ನೀರು ಸರಬರಾಜು ಹಾಗೂ ಸಪಾಯಿ ಕಾರ್ಯ ಮಾಡುವ ಸಿಬ್ಬಂದಿಯನ್ನು ಖಾಲಿ ಇರುವ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು. ತಾಲೂಕುವಾರು ಜೇಷ್ಠತಾ ಪಟ್ಟಿ ತಯಾರಿಸಬೇಕು. ಕರ ವಸೂಲಿಗಾರ, ಗುಮಾಸ್ತ ಹುದ್ದೆಯಿಂದ ಕಾರ್ಯದರ್ಶಿ ಗ್ರೇಡ್-2 ಹಾಗೂ ಲೆಕ್ಕ ಸಹಾಯಕ ಹುದ್ದೆಗೆ ಶ್ರೀಘ್ರದಲ್ಲಿ ಬಡ್ತಿ ನೀಡಬೇಕು. ಸರ್ಕಾರದ ಆದೇಶದಂತೆ ನಿವೃತ್ತಿ ಹೊಂದಿದ್ದ ಸಿಬ್ಬಂದಿಗೆ 15 ತಿಂಗಳ ನಿವೃತ್ತಿ ವೇತನ ಪಾವತಿಸಬೇಕು.
ಎಲ್ಲ ಪಂಚಾಯತಗಳಲ್ಲಿ ಬಾಕಿ ಉಳಿದ ಸಂಬಳವನ್ನು ಕೂಡಲೆ ಪಾವತಿಸಬೇಕು. ಗ್ರೇಡ್-1 ಕಾರ್ಯದರ್ಶಿ ಹುದ್ದೆಯಿಂದ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಕೆಲ ಗ್ರಾಮ ಪಂಚಾಯತಗಳಲ್ಲಿ ಅಕ್ರಮವಾಗಿ ಸಿಬ್ಬಂದಿ ನೇಮಕಾತಿ ಮಾಡಿಕೊಂಡಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯಾನಿರ್ವಾಹ ಅಧಿಕಾರಿ ಮಹಾಂತೇಶ ಬೀಳಗಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವಿಕರಿಸಿದರು. ನೂರಾರು ಪ್ರತಿಭಟನಾಕಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.