ಶ್ರೀರಾಮೇಶ್ವರ ದೇವಾಲಯದ ಪ್ರವೇಶೋತ್ಸವ-ಪ್ರತಿಷ್ಠಾಪನೆ
Team Udayavani, Feb 8, 2019, 11:16 AM IST
ಆಲ್ದೂರು: ಹಾಂದಿ ಗ್ರಾಮದಲ್ಲಿ ಶ್ರಿ ರಾಮೇಶ್ವರ ನೂತನ ದೇವಾಲಯ ಪ್ರವೇಶೋತ್ಸವ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ರಾಮೇಶ್ವರಸ್ವಾಮಿ ಪ್ರತಿಷ್ಠಾಪನೆ ಹಾಗೂ ಪರಿವಾರ ದೇವತೆಗಳ ಸ್ಥಾಪನೆ, ಪ್ರಾಣ ಪ್ರತಿಷ್ಠಾಪನೆ, ಮಹಾ ರುದಾಭಿಷೇಕ ನಂತರ ಸ್ವಾಮಿಯ ನೇತ್ರೋನ್ಮಿಲನ, ಕಲಾಹೋಮ ನಡೆಯಿತು .ಮಧ್ಯಾಹ್ನ ಸಹಸ್ರ ಬಿಲ್ವಾರ್ಚನೆ, ಸಂಜೆ ಗೋದೂಳಿ ಲಗ್ನದಲ್ಲಿ ರುದ್ರಹೋಮ, ನವಗ್ರಹ ಹೋಮ, ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ಸುಂದರ ಕಾಫಿ ತೋಟದ ನಡುವೆ ಪ್ರಕೃತಿಯ ಮಡಿಲಲ್ಲಿ ರಾಮೇಶ್ವರ ದೇವಾಲಯ ನಿರ್ಮಾಣ ಮಾಡಿದ್ದು, ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿರುವ ರಾಮೇಶ್ವರ ಶಿವಲಿಂಗವು ಭಕ್ತರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ.
ಶಿವಲಿಂಗದ ಕೆಳ ಭಾಗದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪಿಸಿದ್ದು ಗರ್ಭಗುಡಿಯ ಎದುರಿಗೆ ಬಸವಣ್ಣ, ಬಲ ಭಾಗದಲ್ಲಿ ಸರಸ್ವತಿಯಮ್ಮ ಹಾಗೂ ಎಡ ಭಾಗದಲ್ಲಿ ಕಾಲಭೈರವೇಶ್ವರ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಗಿದೆ.
ದೇವಾಲಯದ ಹೊರಭಾಗದಲ್ಲಿ ಕಳಸಗಳನ್ನು ಪ್ರತಿಷ್ಠಾಪಿಸಿದ್ದು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಗಿದೆ. ಪೂಜಾ ವಿಧಿ ವಿಧಾನಗಳನ್ನು ಪ್ರಸನ್ನ ಶಾಸ್ತ್ರಿಗಳು ಹೊಸಮಠ ಚನ್ನಗೊಂಡನಹಳ್ಳಿ ನಡೆಸಿಕೊಟ್ಟರು.
ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ನಿವೇಶನ ದಾನಿಗಳಾದ ವೇದಾವತಿ ಬೊಮ್ಮೇಗೌಡ, ಧರ್ಮದರ್ಶಿಗಳಾದ ಭಗತ್, ದಾನಿಗಳಾದ ನಂದಿನಿ ವಿರಾಜೇಗೌಡ, ಬಿ.ಬಿ. ರೇಣುಕಾರ್ಯ, ನಿಶ್ಚಲ್, ತೀರ್ಥಪ್ಪ ಹಾಗೂ ಸುತ್ತಮುತ್ತಲಿನ ಅಪಾರ ಭಕ್ತರು ಪಾಲ್ಗೊಂಡಿದ್ದರು.
ಇಂದು ಕಳಸಾರೋಹಣ-ಧರ್ಮಸಭೆ
ಶುಕ್ರವಾರ ಬೆಳಗ್ಗೆ ರಾಮೇಶ್ವರ ಸ್ವಾಮಿಗೆ ರುದ್ರಾಭಿಷೇಕ ಹಾಗೂ ಕುಂಬಾಭಿಷೇಕ ನಡೆಯಲ್ಲಿದ್ದು, ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳಿಂದ ದೇವಾಲಯಕ್ಕೆ ಕಳಸಾರೋಹಣ ನಡೆಯಲಿದೆ. ಈ ಧರ್ಮಸಭೆಯಲ್ಲಿ ವಾರಣಾಸಿ ಜಂಗಮವಾಡಿ ಮಠದ ಕಾಶೀ ಜ್ಞಾನ ಸಿಂಹಾಸನಾದೀಶ್ವರ ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಸಾನ್ನಿಧ್ಯ ವಹಿಸಿ ಆಶೀರ್ವಚನ ನಿಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹಾಗೂ ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಸ್ವಾಮೀಜಿ ಉಪಸ್ಥಿತರಿರುವರು. ದಾನಿಗಳಾದ ದಿವ್ಯಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿದಂತೆ ಜನ ಪ್ರತಿನಿಧಿಗಳು ಮುಖಂಡರು ಭಾಗವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.