ರಾಜಕೀಯ ಶಕ್ತಿ ಇದ್ದರೆ ಸಮುದಾಯದ ಮಾತಿಗೆ ಮನ್ನಣೆ

Team Udayavani, Feb 9, 2019, 5:48 AM IST

m4-rajakeeya.jpg

ಮೈಸೂರು: ಸಮುದಾಯ ಬೆಳೆಯಬೇಕಾದರೆ ರಾಜಕೀಯ ಶಕ್ತಿ ಇರಬೇಕು. ರಾಜಕೀಯ ಶಕ್ತಿ ಇಲ್ಲದಿದ್ದರೆ ಮನ್ನಣೆ ಇರುವುದಿಲ್ಲ. ಯಾವುದೇ ಒಡಕು ಉಂಟಾಗದಂತೆ ಒಗ್ಗಟ್ಟಿನಿಂದ ಇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಗಿನೆಲೆ ಕನಕ ಗುರುಪೀಠದಿಂದ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಿರ್ಮಿಸಿರುವ ಕನಕ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.

1992ರಲ್ಲಿ ಸಮುದಾಯದ ಸಂಘಟನೆಯ ಉದ್ದೇಶದಿಂದ ಕಾಗಿನೆಲೆ ಕನಕ ಗುರುಪೀಠ ಸ್ಥಾಪಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್‌.ಬಂಗಾರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಹೋದಾಗ 25 ಲಕ್ಷ ರೂ. ನೀಡಲು ಮುಂದೆ ಬಂದರು.

ಅಲ್ಲದೇ ಉದ್ಯಮಿ ಹರಿಖೋಡೆ ಊಟದ ಖರ್ಚು ನೀಡುವುದಾಗಿ ತಿಳಿಸಿದರು. ಆದರೆ, ನಮ್ಮ ಸಮುದಾಯವೇ ಸ್ವಾಭಿಮಾನದಿಂದ ಸಂಗ್ರಹಿಸಿ ನೀಡಿದ 60 ರಿಂದ 70 ಲಕ್ಷ ರೂ. ಇದ್ದುದ್ದರಿಂದ ಯಾರಿಂದಲೂ ಹಣ ಪಡೆಯಲಿಲ್ಲ. ಕಾರ್ಯಕ್ರಮ ಮಾಡಿ ಉಳಿದ 40 ಲಕ್ಷ ರೂ. ಹಣದಿಂದ ಮಠ ಕಟ್ಟಲಾಯಿತು ಎಂದರು.

ಬಾದಾಮಿಯಲ್ಲಿ ಸಾಮೂಹಿಕ ವಿವಾಹ: ಬಡವರು ಮಕ್ಕಳ ಮದುವೆ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹೀಗಾಗಿ ನನ್ನನ್ನು ಗೆಲ್ಲಿಸಿರುವ ಬಾದಾಮಿಯಲ್ಲಿ ಮುಂದಿನ ವರ್ಷ 500 ಜೋಡಿಗಳಿಗೆ ಸಾಮೂಹಿಕ ವಿವಾಹ ಮಾಡಿಸಲು ಉದ್ದೇಶಿಸಿದ್ದೇನೆ ಎಂದರು.

ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಶ್ರೀ, ಈಶ್ವರಾನಂದಪುರಿ ಶ್ರೀ, ಸಿದ್ದರಾಮಾನಂದಪುರಿ ಶ್ರೀ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್‌, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್‌, ಮೇಯರ್‌ ಪುಷ್ಪಲತಾ ಇದ್ದರು.

ಮೈತ್ರಿ ಸರ್ಕಾರದ ಜೀವ ಸಿದ್ದು ಕೈಯಲ್ಲಿ: ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮಾತನಾಡಿ, ಚುನಾವಣೆ ಸಮಯದಲ್ಲಿ ಒಂದು ಜನಾಂಗ ವ್ಯವಸ್ಥಿತವಾಗಿ ಸಿದ್ದರಾಮಯ್ಯರನ್ನು ಸೋಲಿಸಿತು. ಆದರೆ ಈಗ ಅಂಥವರು ನಡೆಸುತ್ತಿರುವ ಸರ್ಕಾರದ ಜೀವ‌ವೇ ಇವರ ಕೈಯಲ್ಲಿದೆ. ಮನಸ್ಸು ಮಾಡಿದರೆ ಕ್ಷಣದಲ್ಲಿ ಸರ್ಕಾರ ಉರುಳಿಸಬಹುದು.

ಆದರೆ, ಸಿದ್ದರಾಮಯ್ಯ ಅಂತಹ ಕಾರ್ಯ ಮಾಡಲ್ಲ. ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಜನಾಂಗದ ನಾಯಕರಾದ ಸಿದ್ದರಾಮಯ್ಯ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಇದು ಸಮುದಾಯದ ಸ್ವಾಭಿಮಾನಕ್ಕೆ ಮಾಡುವ ಅಪಮಾನವಾಗುತ್ತದೆ. ಆದ್ದರಿಂದ ರಾಜಕೀಯವಾಗಿ ಟೀಕೆಗಳನ್ನು ಮಾಡುವಾಗ ನಾಲಿಗೆ ಹರಿಬಿಡದೆ ಬಹಳ ಎಚ್ಚರಿಕೆಯಿಂದ ಮಾತನಾಡಿ ಎಂದರು.

ಟಾಪ್ ನ್ಯೂಸ್

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.