ರಾಜಧಾನಿ ಬಂಪರ್ ಕೊಡುಗೆ
Team Udayavani, Feb 9, 2019, 5:49 AM IST
ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡನೆಯಾದ ರಾಜ್ಯ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಹಣದಹೊಳೆ ಹರಿದಿದೆ. ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಒಟ್ಟಾರೆ ಈ ಬಾರಿಯ ಆಯವ್ಯಯದಲ್ಲಿ ಅಂದಾಜು 9,500 ಸಾವಿರ ಕೋಟಿ ರೂ. ದೊರೆತಿದೆ.
ಬೆಂಗಳೂರಿಗೆ ಮತ್ತೂಂದು “ಕಾವೇರಿ’ ಹೊರತುಪಡಿಸಿದರೆ ಹೊಸದಾಗಿ ಯಾವುದೇ ಪ್ರಮುಖ ಯೋಜನೆಗಳು ಘೋಷಣೆ ಆಗಿಲ್ಲ. ಆದರೆ, ಈಗಾಗಲೇ ವಿವಿಧ ಹಂತದಲ್ಲಿರುವ ಯೋಜನೆಗಳಾದ “ನಮ್ಮ ಮೆಟ್ರೋ’, ಎತ್ತರಿಸಿದ ಸೇತುವೆ, ಪೆರಿಫೆರಲ್ ಹೊರವರ್ತುಲ ರಸ್ತೆ, ಮೇಲ್ಸೇತುವೆಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.
ಬಜೆಟ್‌ನಲ್ಲಿ ಬೆಂಗಳೂರಿಗೆ ಒದಗಿಸಿರುವ ಅನುದಾನದಲ್ಲಿ ಬಿಬಿಎಂಪಿ ಹಾಗೂ ಬಿಎಂಆರ್‌ಸಿಗೆ ಸಿಂಹಪಾಲು ದೊರಕಿದ್ದು, ನವ ಬೆಂಗಳೂರು ಯೋಜನೆ, ಮೇಲ್ಸೇತುವೆ-ಕೆಳಸೇತುವೆ ಸೇರಿ ಹಲವು ಯೋಜನೆಗಳಿಗೆ ಒಟ್ಟಾರೆಯಾಗಿ 2,495 ಕೋಟಿ ರೂ. ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಉಪನಗರ ರೈಲು ಸೇವೆ, ಮೆಟ್ರೋ 2ನೇ ಹಂತ, ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ ನಿರ್ಮಾಣ, 110 ಹಳ್ಳಿಗಳ ಅಭಿವೃದ್ಧಿಗೆ ಯೋಜನೆ ರೂಪಿಸಿರುವುದಾಗಿ ಬಜೆಟ್‌ನಲ್ಲಿ ಉಲ್ಲೇಖೀಸಿದ್ದರೂ, ಸ್ಪಷ್ಟತೆಯಿಲ್ಲ.
ಅಭಿವೃದ್ಧಿ ಪ್ರಾಧಿಕಾರ: ನಗರದಲ್ಲಿನ ವಾಹನ ದಟ್ಟಣೆ ನಿವಾರಣೆಗೆ ಸರ್ಕಾರದಿಂದ ಜಾರಿಗೊಳಿಸಲು ಮುಂದಾಗಿರುವ ಫೆರಿಫೆರಲ್ ಹೊರ ವರ್ತುಲ ರಸ್ತೆಯನ್ನು ನಿರ್ವಹಣಾ ವೆಚ್ಚ ಒಳಗೊಂಡಂತೆ 17,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ. ಅದರಂತೆ ಯೋಜನೆ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 1,000 ಕೋಟಿ ರೂ. ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.