ಬರದ ಜಿಲ್ಲೆಗೆ ನಿರಾಶಾದಾಯಕ ಬಜೆಟ್

Team Udayavani, Feb 9, 2019, 6:57 AM IST

barada.jpg

ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಯಾವುದೇ ಪ್ರಮುಖ ಯೋಜನೆಗಳನ್ನು ಘೋಷಿಸಿಲ್ಲ ಎಂಬ ಕೂಗು ಜಿಲ್ಲಾದ್ಯಂತ ಕೇಳಿಬಂದಿದೆ. ಜಿಲ್ಲೆಯ ಜನತೆಯ ನಿರೀಕ್ಷೆಯಾಗಿದ್ದ ಕೈಗಾರಿಕಾ ಪ್ರದೇಶ, ಕಾವೇರಿ ನೀರು, ಮೆಟ್ರೋ, ದ್ರಾಕ್ಷಿ ಹಣ್ಣು ಸಂಸ್ಕರಣಾ ಘಟಕ, ಕೃಷಿ ಉತ್ಪನ್ನ ಮಾರುಕಟ್ಟೆ, ನೇಕಾರರಿಗೆ ವಿಶೇಷ ಪ್ಯಾಕೇಜ್‌ ಮುಂತಾದ ಯೋಜನೆಗಳನ್ನು ಬಜೆಟ್ ಘೋಷಿಸಿಲ್ಲ ಎಂಬುದು ರೈತರು, ನಾಗರಿಕರು ಸೇರಿದಂತೆ ಕೂಲಿ ಕಾರ್ಮಿಕರ ಅಳಲಾಗಿದೆ. ಬಜೆಟ್ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಬಜೆಟ್ ಅನ್ನು ಟೀಕಿಸಿದರೆ, ಮತ್ತೆ ಕೆಲವರು ಉತ್ತಮ ಬಜೆಟ್ ಎಂದು ಮುಖ್ಯಮಂತ್ರಿಯ ಬೆನ್ನು ತಟ್ಟುವ ಕೆಲಸ ಮಾಡಿದ್ದಾರೆ.

ದೇವನಹಳ್ಳಿ: ಮುಖ್ಯಮಂತಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನಲ್ಲಿ ಬೆಂಗ ಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಯಾವುದೇ ಕೊಡುಗೆಗಳನ್ನು ಘೋಷಿಸದಿರುವುದು ಜನತೆಯಲ್ಲಿ ನಿರಾಶೆ ಹುಟ್ಟಿಸಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಂಕೀರ್ಣ ಇರುವುದರಿಂದ ನೀರಾವರಿ ಯೋಜನೆಗಳು ಲಭಿಸುತ್ತವೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಈ ಬಾರಿ ಬಜೆಟ್‌ನಲ್ಲಿ ಕೈಗಾರಿಕಾ ಪ್ರದೇಶ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಕಾವೇರಿ ನೀರು ನಗರಕ್ಕೆ ವಿಸ್ತರಣೆ, ಮೆಟ್ರೋ ರೈಲು, ದ್ರಾಕ್ಷಿ ಹಣ್ಣಿನ ಸಂಸ್ಕರಣಾ ಘಟಕ, ಕೃಷಿ ಉತ್ಪನ್ನ ಮಾರುಕಟ್ಟೆ,

ಉಪನಗರಗಳ ನಿರ್ಮಾಣ, ಪ್ರವಾಸಿ ತಾಣಗಳ ಅಭಿವೃದ್ಧಿ, ಶಾಶ್ವತ ನೀರಾವರಿಗೆ ಹೆಚ್ಚಿನ ಅನುದಾನ, ನನೆ ಗುದ್ದಿಗೆ ಬಿದ್ದಿರುವ ಬಿಎಂಟಿಸಿ ಬಸ್‌ ಡಿಪೋ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಯಾವುದೇ ಯೋಜನೆಗಳಿಗೆ ಅನುದಾನ ಘೋಷಣೆಯಾಗಿಲ್ಲ. ಈ ಮೂಲಕ ಆಯ ವ್ಯಯದಲ್ಲಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎನ್ನಲಾಗುತ್ತಿದೆ.

ಕೈಗಾರಿಕೆ ಘೋಷಿಸಲಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ನಲ್ಲಿ ತಾಲೂಕಿಗೆ ಕೈಗಾರಿಕಾ ಪ್ರದೇಶಗಳು ಘೋಷಣೆ ಆಗುತ್ತವೆ ಎಂಬ ಆಶಾ ಭಾವನೆಯಲ್ಲಿದ್ದೆವು. ಆದರೆ, ನಿರೀಕ್ಷೆ ಹುಸಿ ಯಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗು ತ್ತದೆಂದು ವಿದ್ಯಾರ್ಥಿನಿ ಸೌಮ್ಯಾಬಾಯಿ ಹೇಳುತ್ತಾರೆ.

ಕೃಷಿ ಮಾರುಕಟ್ಟೆ ಬರಲಿಲ್ಲ: ತಾಲೂಕಿನಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಬಜೆಟ್‌ನಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಅನುದಾನ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಯಾವುದೇ ಯೋಜನೆಗಳು ಈಡೇ ರಿಲ್ಲ. ರೈತರಿಗೆ ಹಲವಾರು ಯೋಜನೆಗಳನ್ನು ರೂಪಿಸಬಹುದಾಗಿತ್ತು. ತಾಲೂಕಿನಲ್ಲಿ ಅತಿ ಹೆಚ್ಚು ಕೃಷಿ ಮತ್ತು ತೋಟ ಮಾಡುತ್ತಿರುವ ರೈತರಿಗೆ ಕೃಷಿ ಮಾರುಕಟ್ಟೆಯಾಗುತ್ತದೆ ಎಂಬ ಆಸೆ ಹುಸಿಯಾಗಿದೆ ಎಂದು ರೈತ ನಾರಾಯಣಸ್ವಾಮಿ ತೀವ್ರ ಬೇಸರ ವ್ಯಕ್ತ ಪಡಿಸಿದರು.

ಜಿಲ್ಲೆಗೆ ಯಾವುದೇ ಕೊಡುಗೆಯಿಲ್ಲ: ಶಾಶ್ವತ ನೀರಾವರಿ ವಿಚಾರವಾಗಿ ಹೆಚ್ಚಿನ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ರೈತರಿಗೆ ಹೆಚ್ಚಿನ ಜನಪರ ಕಾರ್ಯಕ್ರಮಗಳನ್ನು ನೀಡುತ್ತಾರೆಂಬ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಸರ್ಕಾರ ಬಜೆಟ್‌ನಲ್ಲಿ ಜಿಲ್ಲೆಗೆ ಕೊಡುಗೆ ನೀಡು ವುದರಲ್ಲಿ ಹಿಂದೇಟು ಹಾಕಿದೆ. ಬಜೆಟ್‌ನಲ್ಲಿ ಒಂದೇ ಒಂದು ಯೋಜನೆ ನೀಡದಿರು ವುದು ಬೇಸರವಾಗಿದೆ ಎಂದು ರಾಜ್ಯ ರೈತಸಂಘದ ಉಪಾಧ್ಯಕ್ಷ ವೆಂಕಟನಾರಾ ಯಣಪ್ಪ ಹೇಳಿದರು.

ರೈತರಿಗೆ ಬಂಪರ್‌ ಕೊಡುಗೆ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿ ರುವ ಬಜೆಟ್‌ನಲ್ಲಿ ರೈತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ರೈತರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಪ್ರತಿ ಹೋಬಳಿಗೆ 4 ವರ್ಷದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಮಾಡುವುದರ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಬದಲಾವಣೆ ಸೇರಿದಂತೆ ಅನೇಕ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಜಿಪಂ ಸದಸ್ಯ ಲಕ್ಷ್ಮೀನಾರಾಯಣ್‌ ಹೇಳಿದರು.

ಹೆಚ್ಚಿನ ಅನುದಾನ ಬರಲಿಲ್ಲ: ತಾಲೂಕು ಸಾಕಷ್ಟು ಹಿಂದುಳಿದಿದ್ದು, ಮೈತ್ರಿ ಸರ್ಕಾರದ ಶಾಸಕರು ಇರುವುದರಿಂದ ತಾಲೂಕಿಗೆ ಹೆಚ್ಚಿನ ಅನುದಾನದ ನಿರೀಕ್ಷೆ ಇತ್ತು. ಆದರೆ, ಅದು ಹುಸಿಯಾಗಿದೆ. ತಾಲೂಕಿನಲ್ಲಿ ಹಲವಾರು ಸಮಸ್ಯೆಗಳು ಕಾಡುತ್ತಿವೆ. ಅವು ಗಳ ಪರಿಹಾರ ಬಜೆಟ್‌ನಲ್ಲಿ ಆಗಲಿದೆ ಎಂಬ ಆಶಾಭಾವನೆ ಇಲ್ಲದಂತಾಗಿದೆ ಎಂದು ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಡಿ.ಸಿ.ಅಂಬರೀಶ್‌ ಹೇಳುತ್ತಾರೆ.

ಸಿಎಂ ಉತ್ತಮ ಬಜೆಟ್ ಮಂಡಿಸಿದ್ದಾರೆ. ಪ್ರತಿ ಜನರಿಗೆ ಅನುಕೂಲಕರ ಬಜೆಟ್ ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿ ಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಪಾರದರ್ಶ ಕತೆ ಮತ್ತು ಸುರಕ್ಷತೆ ವರ್ಧಿ ಸಿದೆ. ಸಿಇಟಿ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ನಡೆಸಲು ಕ್ರಮ ಕೈಗೊಂಡಿದ್ದಾರೆ. ನಕಲಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳ ಹಾವಳಿ ತಪ್ಪಿಸಲು ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಉತ್ತಮ ಕ್ರಮ ಕೈಗೊಂಡಿದ್ದಾರೆ ಎಂದು ಪುರಸಭಾ ಸದಸ್ಯ ಜಿ.ಎ.ರವೀಂದ್ರ ತಿಳಿಸಿದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.