ನುಡಿಜಾತ್ರೆಗೆ ಮದಕರಿಪುರ ಸಜ್ಜು
Team Udayavani, Feb 9, 2019, 9:05 AM IST
ಚಿತ್ರದುರ್ಗ: ತಾಲೂಕು ಮಟ್ಟದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಇಡೀ ಗ್ರಾಮವೇ ಸಂಪೂರ್ಣ ಕನ್ನಡಮಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಆರ್.ದಾಸೇಗೌಡ ತಿಳಿಸಿದ್ದಾರೆ.
ತಾಲೂಕಿನ ಮದಕರಿಪುರದ ಸರ್ಕಾರಿ ಶಾಲೆಗೆ ಬಣ್ಣ, ಸುಣ್ಣ ಬಳಿದು ಸಿಂಗಾರ ಮಾಡಿದ್ದು, ಗ್ರಾಮದ ಪ್ರತಿಯೊಂದು ಬೀದಿಗಳಲ್ಲಿ ಕನ್ನಡ ಧ್ವಜದ ಬಣ್ಣದ ಪೇಪರ್ ಅಂಟಿಸಿ ಚಪ್ಪರ ನಿರ್ಮಿಸಲಾಗಿದೆ. ಅಲ್ಲದೆ, ವೇದಿಕೆ ಸಂಪೂರ್ಣ ಸಿದ್ಧಗೊಂಡಿದ್ದು, ಹಾಸ್ಯ ಸಾಹಿತಿ ಬಿ.ತಿಪ್ಪೇರುದ್ರಪ್ಪನವರ ವೇದಿಕೆ, ಸ್ವಾತಂತ್ರ್ಯ ಹೋರಾಟಗಾರ ಸಾ.ವಾಸುದೇವರಾವ್ ಮಂಟಪ, ದೊಡ್ಡ ಮಲ್ಲಪ್ಪ ಮಹಾದ್ವಾರ, ಗಮಕಿ ಕಲ್ಲಪ್ಪರ ಈಶಣ್ಣ ಭೋಜನ ಶಾಲೆಯನ್ನು ಸಜ್ಜುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಫೆ.9ರಂದು ಬೆಳಗ್ಗೆ 7.45ಕ್ಕೆ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ ಪರಿಷತ್‌ನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಾಡಧ್ವಜವನ್ನು ತಾಲೂಕು ಕಸಾಪ ಅಧ್ಯಕ್ಷ ದಾಸೇಗೌಡ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಂತರ ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷ ಎಸ್.ಆರ್.ಗುರುನಾಥ್ ಅದ್ಧೂರಿ ಮೆರವಣಿಗೆ ಆರಂಭವಾಗಲಿದ್ದು, ಮಾಜಿ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹಾಸ್ಯ ಸಾಹಿತಿ ತಿಪ್ಪೇರುದ್ರಪ್ಪ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಸಾಹಿತಿ ಪ್ರೊ| ಶ್ರೀಕಂಠ ಕೊಡಿಗೆ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.