ಸಿಬಿಐ ವಿಚಾರಣೆಗೆ ಸಹಕರಿಸಿದ ರಾಜೀವ್
Team Udayavani, Feb 10, 2019, 12:30 AM IST
ಕೋಲ್ಕತಾ: ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ, ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನಲ್ಲಿ ಶನಿವಾರ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತು.
ಸತತ ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಸರಿಯಾಗಿ ಸಹಕರಿಸದ, ಆಯುಕ್ತ ರಾಜೀವ್ ಕುಮಾರ್ ಅವರು ನಂತರದ ಹಂತದಲ್ಲಿ ತನಿಖೆಗೆ ಸಹಕಾರ ನೀಡಿದರು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ ಎಂದು ದಿ ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ. ಶಿಲ್ಲಾಂಗ್‌ನ ಓಕ್‌ಲ್ಯಾಂಡ್‌ನಲ್ಲಿರುವ ಸಿಬಿಐ ಕಚೇರಿಯಲ್ಲಿ 11 ಗಂಟೆಯಿಂದ ಶುರುವಾದ ವಿಚಾರಣೆ, ರಾತ್ರಿ 9 ಗಂಟೆಯವರೆಗೆ ಮುಂದುವರಿದಿತ್ತು. ಇದಕ್ಕಾಗಿ, ದೆಹಲಿಯಿಂದ ಸಿಬಿಐನ ಮೂವರು ಅಧಿಕಾರಿಗಳು ಶಿಲ್ಲಾಂಗ್‌ಗೆ ಆಗಮಿಸಿದ್ದರು. ವಿವೇಕ್ ದತ್ ನೇತೃತ್ವದ 12 ಮಂದಿ ಸಿಬಿಐ ಅಧಿಕಾರಿಗಳ ತಂಡ ವಿಚಾರಣೆಯಲ್ಲಿ ಪಾಲ್ಗೊಂಡಿತ್ತು. ಶಾರದಾ ಚಿಟ್‌ಫಂಡ್ ಹಗರಣದ ತನಿಖೆ ನಡೆಸಿದ್ದ ಪಶ್ಚಿಮ ಬಂಗಾಳ ಪೊಲೀಸ್‌ನ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವವನ್ನು ರಾಜೀವ್ ಕುಮಾರ್ ಅವರೇ ವಹಿಸಿಕೊಂಡಿದ್ದು, ಆ ವೇಳೆ ಸಾಕ್ಷ್ಯಾಧಾರಗಳು ನಾಶವಾಗಿರುವ ಹಿನೆ°ಲೆಯಲ್ಲಿ ಅವರನ್ನು ವಿಚಾರಣೆಗೊಳಪಡಿಸಿದೆ. ಕೋಲ್ಕತಾದಲ್ಲಿ ಇವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲು ಸಿಬಿಐ ಯತ್ನಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.