ಕೈದಿಗಳಿಗೆ ಭೈರಪ್ಪ, ಲೋಹಿಯಾ, ಕುವೆಂಪು ಸಾಹಿತ್ಯದ ಆಸಕ್ತಿ
Team Udayavani, Feb 10, 2019, 1:56 AM IST
ಬೆಂಗಳೂರು: ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲು ಜೈಲು ಕೈದಿಗಳು ಪ್ರಯತ್ನಿಸುತ್ತಿದ್ದಾರೆ. ಪುಸ್ತಕ ಓದಿನ ಮೂಲಕ ಹೊಸ ಬದುಕು ಕಟ್ಟಿಕೊಳ್ಳುವುದರ ಜತೆಗೆ ನವ್ಯ ಚಿಂತನೆಯನ್ನು ಅಳವಡಿಸಿಕೊಳ್ಳಲು ಹವಣಿಸುತ್ತಿದ್ದಾರೆ.
ಆ ಹಿನ್ನೆಲೆಯಲ್ಲಿಯೇ ರಾಜ್ಯದ ಹಲವು ಜೈಲುಗಳಲ್ಲಿರುವ ಕೈದಿಗಳು ಇದೀಗ ಸ್ವಾತಂತ್ರ್ಯ ಹೋರಾಟಗಾರರ, ಚಿಂತಕರ ಬದುಕು ಬರಹದ ಪುಸ್ತಕಗಳು, ಜ್ಞಾನಪೀಠ ಪುರಸ್ಕೃತ ಸಾಹಿತಿಗಳ ಕೃತಿಗಳನ್ನು ನೀಡುವಂತೆ ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಕೋರಿಕೆ ಸಲ್ಲಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಡಾ.ರಾಮ್ ಮನೋಹರ್ ಲೋಹಿಯಾ, ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಕುವೆಂಪು, ಯು.ಆರ್.ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಕಾದಂಬರಿಕಾರ ಎಸ್.ಎಲ್.ಭೈರಪ್ಪ , ಕವಿ ಸಿದ್ಧಲಿಂಗಯ್ಯ ಸೇರಿ ಹಲವು ಹೆಸರಾಂತ ಸಾಹಿತಿಗಳ ಕೃತಿಗಳು ಕಾರಾಗೃಹಗಳ ಗ್ರಂಥ ಭಂಡಾರದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಅವುಗಳನ್ನು ಕಾರಾಗೃಹದ ಗ್ರಂಥಾಲಯಕ್ಕೆ ನೀಡಿ ಎಂದು ಪ್ರಾಧಿಕಾರಕ್ಕೆ ಮೌಖೀಕವಾಗಿ ಮನವಿ ಮಾಡಿದ್ದಾರೆ. ಜೈಲು ಕೈದಿಗಳಲ್ಲಿರುವ ಪುಸ್ತಕ ಓದಿನ ಆಸಕ್ತಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೈದಿಗಳು ಇಟ್ಟಿರುವ ಬೇಡಿಕೆ ಪೂರೈಸಲು ಮುಂದಾಗಿದೆ.
ತೇಜಸ್ವಿ ಪುಸ್ತಕ ನೀಡಿ: ಪ್ರಾಧಿಕಾರ ಈ ಹಿಂದೆ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ನಿಮ್ಮ ಮನೆಗೆ ಪುಸ್ತಕ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಆ ವೇಳೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವು ಕೈದಿಗಳು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಮತ್ತು ಡಾ.ರಾಮ್ ಮನೋಹರ್ ಲೋಹಿಯಾ ಅವರ ಪುಸ್ತಕಗಳಿಗೆ ಬೇಡಿಕೆ ಇಟ್ಟಿದ್ದರು. ಮೈಸೂರು ಮತ್ತು ಕಲಬುರಗಿ ಕಾರಾಗೃಹಗಳಲ್ಲಿ ಪ್ರಾಧಿಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪುರಸ್ಕೃತ ಸಾಹಿತಿಗಳಾದ ಕುವೆಂಪು, ಯು.ಆರ್.ಅನಂತ ಮೂರ್ತಿ ಪುಸ್ತಕಕ್ಕಾಗಿ ಮನವಿ ಮಾಡಿದ್ದರು. ಪೂರ್ಣಚಂದ್ರ ತೇಜಸ್ವಿ ಅವರ ಬರಹಗಳಿಗೆ ಮಾರು ಹೋಗಿರುವ ಇನ್ನೂ ಕೆಲವು ಕೈದಿಗಳು ತೇಜಸ್ವಿ ಅವರ ಕೃತಿಗಳಿಗೆ ಕೋರಿಕೆ ಸಲ್ಲಿಸಿದ್ದರು.
ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರ ಪುಸ್ತಕಗಳತ್ತಲೂ ಕೈದಿಗಳು ಆಸಕ್ತಿ ತೋರಿದ್ದರು. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮೊಬೈಲ್ ಗೀಳಿನಲ್ಲಿ ಮುಳುಗಿರುವ ಹಿನ್ನೆಲೆಯಲ್ಲಿ ಅಕ್ಷರ ಸಂಸ್ಕೃತಿ ಅಭಿರುಚಿ ಕಡಿಮೆಯಾಗುತ್ತಿದು,್ದ ಇಂತಹ ಸಂದರ್ಭದಲ್ಲಿ ಜೈಲು ಕೈದಿಗಳ ಹಂಬಲ ಖುಷಿ ಪಡುವ ವಿಚಾರವಾಗಿದೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಳಿ ಸಾಕಾಣಿಕೆ ಪುಸ್ತಕಕ್ಕೂ ಬೇಡಿಕೆ: ಜೈಲಿನಿಂದ ಹೊರ ಬಂದ ಮೇಲೆ ಸ್ವಾವಲಂಬನೆ ಜೀವನ ರೂಪಿಸಿಕೊಳ್ಳುವ ಹಂಬಲವನ್ನು ಹಲವು ಕೈದಿಗಳು ಹೊಂದಿದ್ದಾರೆ. ಆ ಹಿನ್ನೆಲೆಯಲ್ಲಿ ಕೃಷಿ ಜತೆಗೆ ಕೋಳಿ, ಹಂದಿ ಮತ್ತು ಮೊಲ ಸಾಕಾಣಿಕೆ ಸೇರಿ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಪುಸ್ತಕಗಳನ್ನೂ ನೀಡಿ ಎಂದು ವಿನಂತಿಸಿಕೊಂಡಿ ದ್ದಾರೆ. ಅಲ್ಲದೆ ಮಾನಸಿಕ ವ್ಯಾಧಿಯಿಂದ ಹೊರ ಬರುವ ಪುಸ್ತಕಗಳಿಗೂ ಆದ್ಯತೆ ನೀಡಿ ಎಂದು ಕೋರಿದ್ದಾರೆ.
ಜೈಲು ಕೈದಿಗಳಲ್ಲಿರುವ ಅಕ್ಷರಾಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ, ಈಗಾಗಲೇ ಕೈದಿಗಳು ಕೇಳಿರುವ ಹಲವು ಪುಸ್ತಕಗಳು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿವೆ. ಆದರೆ ಕೆಲವೇ ಕೆಲವು ಪುಸ್ತಕಗಳು ಪ್ರಾಧಿಕಾರದಲ್ಲಿಲ್ಲ. ಅಂತಹ ಪುಸ್ತಕಗಳನ್ನು ಖರೀದಿಸಿ ಆಯಾ ಕಾರಾಗೃಹದ ಗ್ರಂಥಾಲಯಗಳಿಗೆ ಸದ್ಯದಲ್ಲೆ ತಲುಪಿಸಲಾಗುವುದು ಎಂದು ಹೇಳಿದ್ದಾರೆ. ‘ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಕೈದಿಗಳಲ್ಲಿರುವ ಪುಸ್ತಕ ಓದುವ ಆಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೈಲು ಕೈದಿಗಳಲ್ಲಿ ಮತ್ತಷ್ಟು ಓದಿನ ಅಭಿರುಚಿ ಬೆಳೆಸಲು ರಾಜ್ಯದ ಹಲವು ಕೇಂದ್ರ ಕಾರಾಗೃಹಗಳಲ್ಲಿ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮವನ್ನು ಪ್ರಾಧಿಕಾರ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.