ಆಡಿಯೋದಲ್ಲಿರುವುದು ನನ್ನದೇ ಧ್ವನಿ: ಒಪ್ಪಿಕೊಂಡ ಯಡಿಯೂರಪ್ಪ
Team Udayavani, Feb 10, 2019, 5:51 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದ ‘ಆಪರೇಷನ್ ಆಡಿಯೋ’ದಲ್ಲಿ ಇರುವುದೇ ನನ್ನದೇ ಧ್ವನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದೇವದುರ್ಗಕ್ಕೆ ಹೋಗಿದ್ದು ನಿಜ. ಶರಣ ಗೌಡರ ಜೊತೆ ಮಾತನಾಡಿದ್ದು ನಿಜ. ಆಡಿಯೋದಲ್ಲಿರುವುದು ನನ್ನದೇ ಧ್ವನಿ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಕುತಂತ್ರದ ರಾಜಕಾರಣ ಮಾಡಿದ್ದಾರೆ. ಅವರಿಗೆ ಬೇಕಾದ ಆಡಿಯೋವನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದರು.
ಮುಂದುವರಿದು ಮಾತನಾಡಿದ ವಿಪಕ್ಷ ನಾಯಕ ಯಡಿಯೂರಪ್ಪ, ಅಲ್ಲಿ ನಡೆದ ಪೂರ್ಣ ಸಂಭಾಷಣೆ ನನ್ನಲ್ಲಿದೆ. ಕುಮಾರಸ್ವಾಮಿ ಅವರಿಗೆ ಬೇಕಾದ ಆಡಿಯೋ ಭಾಗವನ್ನು ಬಿಡುಗಡೆ ಮಾಡಿದ್ದಾರೆ. ಸಂಪೂರ್ಣ ಆಡಿಯೋವನ್ನು ನಾನು ಸೋಮವಾರ ಸದನದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮತ್ತೊಂದು ಬಾಂಬ್ ಹಾಕಿದ್ದಾರೆ. ಯಡಿಯೂರಪ್ಪ ಈ ಹೇಳಿಕೆ ರಾಜ್ಯ ರಾಜಕಾರಣದ ಮತ್ತೊಂದು ಕುತೂಹಲಕ್ಕೆ ಕಾರಣವಾಗಿದೆ.
ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಡಿರುವ ‘ಸೂಟ್ ಕೇಸ್ ಸಂಸ್ಕೃತಿ’ ಆರೋಪಕ್ಕೆ ಉತ್ತರಿಸಿದ ಯಡಿಯೂರಪ್ಪ, ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ನಾನು ಯಾವುದೇ ತನಿಖೆಗೂ ಸಿದ್ದ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.