ನಗರದಲ್ಲಿ ಭಾರೀ ಮಳೆ; ನಾಗರಿಕರ ಪರದಾಟ

Team Udayavani, Feb 10, 2019, 6:34 AM IST

nagarada.jpg

ಬೆಂಗಳೂರು: ತಮಿಳುನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ (ಕಡಿಮೆ ಒತ್ತಡದ ತಗ್ಗು) ಟ್ರಫ್ ಉಂಟಾದ ಪರಿಣಾಮ ರಾಜಧಾನಿಯಲ್ಲಿ ಶನಿವಾರ ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಸಾರ್ವಜನಿಕರು ಪರದಾಡಿದರು.

ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ ಸಂಜೆ 7.30ವರೆಗೆ ಭರ್ಜರಿ ಮಳೆ ಸುರಿದು ನಗರವನ್ನು ತಂಪಾಗಿಸಿದೆ. ಕೆಲ ದಿನಗಳಿಂದ ತಾಪಮಾನ ನಿಧಾನವಾಗಿ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಾಣುತ್ತಿದ್ದು, ಈ ಅಂಶವೂ ಕೂಡಾ ಮಳೆ ಸುರಿಯಲು ಕಾರಣವಾಗಿದೆ.

ಸಂಜೆ ವೇಳೆ ಮಳೆ ಸುರಿದಿದ್ದರಿಂದ ಕಚೇರಿಗಳಿಂದ ಮನೆ ಸೇರುವವರು, ಕಾಲೇಜು ವಿದ್ಯಾರ್ಥಿಗಳು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ನಗರದ ಜನತೆ ತೊಂದರೆ ಅನುಭವಿಸುವಂತಾಯಿತು. ಮುಖ್ಯವಾಗಿ ಪುರಭವನ, ಮೈಸೂರು ರಸ್ತೆ ಜಂಕ್ಷನ್‌, ಯಶವಂತಪುರ, ಮೆಜೆಸ್ಟಿಕ್‌, ಚಾಲಕ್ಯ ಸರ್ಕಲ್‌ ಸೇರಿದಂತೆ ಹಲವೆಡೆ ಸಿಗ್ನಲ್‌ಗ‌ಳಲ್ಲಿ ವಾಹನ ದಟ್ಟಣೆ ಕಂಡುಬಂತು. 

ರಸ್ತೆ ಹಾಗೂ ಪಾದಾಚಾರಿ ಮಾರ್ಗದಲ್ಲಿನ ಗುಂಡಿಗಳಲ್ಲಿ ನೀರುತುಂಬಿ, ಮಾರ್ಗ ಕಾಣದಂತಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೀಡಾದರು. ಓಕಳಿಪುರ ಕೆಳಸೇತುವೆ, ನಾಯಂಡಹಳ್ಳಿ, ಮಂತ್ರಿ ಮಾಲ್‌ ಎದುರು, ಮೆಜೆಸ್ಟಿಕ್‌ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ವಾಹನ ಸವಾರರು ಪರದಾಡಿದರು. ಜತೆಗೆ ತಗ್ಗು ಪ್ರದೇಶಗಳಿರುವ ಬಡಾವಣೆಗಳ ಕೆಲ ಮನೆಗಳಿಗೆ ನೀರು ನುಗ್ಗಿದೆ. ಜಯನಗರ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನ ಒಳಗೆ ನೀರು ನುಗ್ಗಿದ ಘಟನೆ ನಡೆದಿದೆ.

9ಕ್ಕೂ ಹೆಚ್ಚು ಮರಗಳು ಧರೆಗೆ: ಜೋರಾಗಿ ಸುಳಿದ ಮಳೆಯಿಂದಾಗಿ ಗಾಂಧಿನಗರದಲ್ಲಿ 2, ಎಂ.ಜಿ.ರಸ್ತೆ, ಬಸವನಗುಡಿ, ನಿಮಾನ್ಸ್‌ ಆಸ್ಪತ್ರೆ, ಕೆ.ಆರ್‌.ರಸ್ತೆ, ಕೋರಮಂಗಲ, ವಿಜಯನಗರ, ಬಸವೇಶ್ವರ ನಗರ, ಮಹಾಲಕ್ಷ್ಮೀ ಬಡಾವಣೆಯಲ್ಲಿ ತಲಾ 1 ಮರ ಸೇರಿದಂತೆ 9ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮರಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಧಾವಿಸಿದ್ದು, ರಾತ್ರಿವರೆಗೂ ತೆರವು ಕಾರ್ಯಾಚರಣೆ ನಡೆಸಿದರು.

ಮಳೆಯ ಪ್ರಮಾಣ: ಸಂಪಂಗಿರಾಮ ನಗರದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯ ಪ್ರಮಾಣ 67 ಮಿ.ಮೀ. ದಾಖಲಾಗಿದೆ. ಬಸವನಗಡಿ 66 ಮಿ.ಮೀ., ಪಟ್ಟಾಭಿರಾಮನಗರ 58 ಮಿ.ಮೀ., ಹೊಯ್ಸಳನಗರ 43 ಮಿ.ಮೀ., ಲಾಲ್‌ಬಾಗ್‌ 38 ಮಿ.ಮೀ., ಎಚ್‌ಎಸ್‌ಆರ್‌ ಲೇಔಟ್‌ 36 ಮಿ.ಮೀ., ಕೊನೇನ ಅಗ್ರಹಾರ 24 ಮಿ.ಮೀ., ಬೆಳ್ಳಂದೂರು 17 ಮಿ.ಮೀ.,

ರಾಜರಾಜೇಶ್ವರಿ ನಗರ 16 ಮಿ.ಮೀ., ಅಟ್ಟೂರು 13 ಮಿ.ಮೀ., ಯಲಹಂಕ, ಸಾರಕ್ಕಿ 12 ಮಿ.ಮೀ., ಬೊಮ್ಮನಹಳ್ಳಿ 10 ಮಿ.ಮೀ. ಮಳೆಯ ಬಿದ್ದಿರುವುದಾಗಿ ದಾಖಲಾಗಿದೆ. ಉಳಿದಂತೆ ತಾವರೆಕೆರೆ, ಯಶವಂತಪುರ, ಕೆಂಗೇರಿ, ಕೋರಮಂಗಲ, ಬಿಳೇಕಹಳ್ಳಿ, ದೊರೆಸಾನಿಪಾಳ್ಯ, ಅಗ್ರಹಾರ ದಾಸರಹಳ್ಳಿ, ರಾಜಮಹಲ್‌ ಗುಟ್ಟಹಳ್ಳಿ, ದಯಾನಂದ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆ ಬಿದ್ದಿದೆ.

ಮಳೆ ಮುಂಜಾಗ್ರತೆಗೆ ಡಿಸಿಎಂ ಸೂಚನೆ: ನಗರದಲ್ಲಿ ಅಕಾಲಿಕ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಸೂಚಿಸಿದ್ದಾರೆ. ಶನಿವಾರ ಸಂಜೆ ದಿಢೀರ್‌ ಮಳೆ ಆರಂಭವಾದ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ದಟ್ಟಣೆ ಉಂಟಾಗಿತ್ತು.

ಜತೆಗೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿದರಿಂದ ಜನರು ತೊಂದರೆ ಅನುಭವಿಸುವಂತಾಗಿತ್ತು. ನಗರದಲ್ಲಿ ಇನ್ನೂ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದರೊಂದಿಗೆ ಪಾಲಿಕೆಯ ನಿಯಂತ್ರಣ ಕೊಠಡಿಗಳು 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಹಾಗೂ ಸಮಸ್ಯೆಗಳಿಗೆ ಪರಿಹಾರ ತಂಡಗಳು ಶೀಘ್ರ ತೆರಳಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.