ಕಲಬುರಗಿ ಸ್ಮಾರ್ಟ್‌ ಸಿಟಿಯಾಗಿಸಿ: ಸಂಸದ ಡಾ| ಖರ್ಗೆ


Team Udayavani, Feb 10, 2019, 8:56 AM IST

gul-3.jpg

ಕಲಬುರಗಿ: ನಗರಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ಒಳಚರಂಡಿ ಹಾಗೂ ಸ್ವಚ್ಛತೆ ವ್ಯವಸ್ಥೆ ಚೆನ್ನಾಗಿದ್ದು, ನಾಗರಿಕರೆಲ್ಲ ಸ್ವಚ್ಛತೆಗೆ ಮಹತ್ವ ನೀಡಿ ಮಹಾನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿಸಿ ಎಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪಾಲಿಕೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಯೋಗದಲ್ಲಿ ನಗರದ ಕಾಕಡೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಪುರಸ್ಕೃತ ಅಮೃತ ಯೋಜನೆ ಹೆಚ್ಚಿನ ಅನುದಾನದಲ್ಲಿನ ನೀರು ಸರಬರಾಜು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನಗರಕ್ಕೆ ಮಂಜುರಾದ ಅಮೃತ ಯೋಜನೆ ಉಳಿತಾಯದಲ್ಲಿ ಕುಡಿಯುವ ನೀರು ಸರಬರಾಜಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಸಲಾಂಟೇಕಡಿಯಿಂದ ಹಳೆ ನೀರು ಶುದ್ಧೀಕರಣ ಘಟಕದ ವರೆಗೆ ಬೆಣ್ಣೆತೋರಾದಿಂದ ನೀರು ಪೂರೈಸುವ ಕುಡಿಯುವ ನೀರು ಕೊಳವೆ ಮಾರ್ಗ ಬದಲಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಹಕಾರ ನೀಡಿದ ಶಾಸಕಿ ಖನೀಜ್‌ ಫಾತಿಮಾ ಅವರಿಗೆ ಅಭಿನಂದನೆ. ಈ ಕಾಮಗಾರಿ ಅಧಿಕಾರಿಗಳು, ನಗರ ಪಾಲಿಕೆ ಸದಸ್ಯರ ನೆರವಿನೊಂದಿಗೆ ಪ್ರಾರಂಭಗೊಂಡಿದೆ ಎಂದರು.

ಶಾಸಕಿ ಖನೀಜ್‌ ಫಾತೀಮಾ ಮಾತನಾಡಿ, ಬೆಣ್ಣೆತೋರಾದಿಂದ ನಗರಕ್ಕೆ ಸರಬರಾಜಾಗುವ ಕೊಳವೆ ಮಾರ್ಗದಲ್ಲಿ ಸೋರಿಕೆ ಇರುವುದರಿಂದ ನಗರಕ್ಕೆ ಸಮರ್ಪಕ ನೀರು ಸರಬರಾಜಾಗುತ್ತಿರಲಿಲ್ಲ. ಈ ಕುರಿತು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸೋರಿಕೆ ಇರುವ ಕೊಳವೆಗಳನ್ನು ಬದಲಿಸಲಾಗುತ್ತಿದೆ. ನಗರಕ್ಕೆ ನೀರಿನ ತೊಂದರೆ ಆಗದಂತೆ ಭೀಮಾಗೆ ಕಾಳನೂರು ಬ್ಯಾರೇಜಿನಿಂದ, ಬೆಣ್ಣೆತೋರಾಕ್ಕೆ ಗಂಡೋರಿನಾಲಾದಿಂದ ನೀರು ಬಿಡಲಾಗುತ್ತಿದೆ ಎಂದರು.

ಶಾಸಕ ಡಾ| ಬಿ.ಜಿ. ಪಾಟೀಲ, ಮೇಯರ್‌ ಮಲ್ಲಮ್ಮ ವಳಕೇರಿ, ಮುಖಂಡರಾದ ಭಾಗಣ್ಣಗೌಡ ಸಂಕನೂರ, ಮಾರುತಿರಾವ್‌ ಡಿ. ಮಾಲೆ, ತಿಪ್ಪಣ್ಣ ಕಮಕನೂರು, ಉಪ ಮೇಯರ್‌ ಅಲಿಯಾ ಸಿರಿನ್‌, ಶರಣಕುಮಾರ ಮೋದಿ, ರಾಜು ಕಪನೂರ, ಸಲಿಂ ಬೇಗ, ಶರಣಮ್ಮ ಯಲ್ಲಪ್ಪ ನಾಯಿಕೋಡಿ, ಪುತಲಿ ಬೇಗಂ, ರಮೇಶ ಕಮಕನೂರ, ಜಿ.ಪಂ. ಸಿಇಒ ಡಾ| ರಾಜಾ ಪಿ., ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್‌, ಶಿವನಗೌಡ ಪಾಟೀಲ ಪಾಲ್ಗೊಂಡಿದ್ದರು.

ದೂರ ಉಳಿದ ವಾರ್ಡ್‌ ಸದಸ್ಯರು: ವಾರ್ಡ್‌ ನಂ.1 ಹಾಗೂ ನಂ.7ರ ಸದಸ್ಯರಾದ ಶಿವಾನಂದ ಪಾಟೀಲ ಅಷ್ಟಗಿ, ವಿಠ್ಠಲ ಜಾಧವ್‌ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ದೂರ ಉಳಿದರು.

ಅಮೃತ ಯೋಜನೆಯ ಉಳಿತಾಯದಲ್ಲಿನ ಸುಮಾರು 12.36 ಕೋಟಿ ರೂ.ಗಳಲ್ಲಿ 9.7 ಕಿ.ಮೀ. ಉದ್ದದ ಪೈಪುಗಳನ್ನು ಬದಲಿಸಲಾಗುತ್ತಿದೆ. ಬೆಣ್ಣೆತೋರಾದಿಂದ ಈ ಮಾರ್ಗವಾಗಿ ದಿನಾಲು ಸುಮಾರು 20.ಎಂ.ಎಲ್‌.ಡಿ. ನೀರು ಪೂರೈಕೆ ಆಗಬೇಕಿತ್ತು. ಆದರೆ ಸೋರಿಕೆಯಿಂದ ಕೇವಲ ಆರೇಳು ಎಂ.ಎಲ್‌.ಡಿ. ನೀರು ಮಾತ್ರ ದೊರೆಯುತ್ತಿತ್ತು. ಇದರಿಂದ ನಗರದ 21 ವಾರ್ಡುಗಳಲ್ಲಿ ಕುಡಿಯುವ ನೀರಿನ ತೊಂದರೆ ಇತ್ತು. ಕಾಮಗಾರಿಯು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ನಂತರದಲ್ಲಿ ನಗರದ ಎಲ್ಲ ವಾರ್ಡುಗಳಿಗೆ 2 ದಿನಕ್ಕೊಂದು ಬಾರಿ ನೀರು ಸರಬರಾಜು ಮಾಡಲಾಗುವುದು.
• ಆರ್‌. ವೆಂಕಟೇಶಕುಮಾರ,ಜಿಲ್ಲಾಧಿಕಾರಿ

ಟಾಪ್ ನ್ಯೂಸ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.