ನೀರಿನ ಸಮಸ್ಯೆ ನಿವಾರಣೆಗೆ ಕ್ರಮ
Team Udayavani, Feb 10, 2019, 9:03 AM IST
ಆಳಂದ: ಬೇಸಿಗೆಯಲ್ಲಿ ಯಾವುದೇ ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಕಚೇರಿಯಲ್ಲಿ ಕರೆದ ನೀರಿನ ತುರ್ತು ಕಾರ್ಯಪಡೆ ಸಭೆಯಲ್ಲಿ ಭಾಗವಹಿಸಿದ್ದ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಪಾಲ್ಗೊಂಡ ಸಭೆಯಲ್ಲಿ ಅವರು ಮಾತನಾಡಿದರು.
ಬೇಸಿಗೆ ನೀರಿನ ಸಮಸ್ಯೆ ನಿವಾರಣೆ ಅನುದಾನದಲ್ಲಿ ಶಾಶ್ವತ ಕ್ರಮ ಕೈಗೊಳ್ಳಲು ಆಗದು. ಗಂಭೀರ ಸಮಸ್ಯೆ ನಿವಾರಣೆಗೆ ಹಾಗೂ ನೀರಿಲ್ಲದೆ ಇರುವ ಹಳ್ಳಿಗಳಲ್ಲಿ ತುರ್ತು ಅಗತ್ಯ ಕ್ರಮಕ್ಕೆ ಬೇಡಿಕೆಯಿಟ್ಟು ಕೆಲಸ ಮಾಡಬೇಕು. 14ನೇ ಹಣಕಾಸು ಯೋಜನೆ ಅನುದಾನವನ್ನು ಕುಡಿಯುವ ನೀರಿಗೆ ಬಳಸಿಕೊಳ್ಳಬೇಕು. ಮೊದಲ ಕಂತಿನಲ್ಲಿ ಜಿಲ್ಲಾಧಿಕಾರಿಗಳು ನೀಡಿದ 25 ಲಕ್ಷ ರೂ. ಯಾವುದಕ್ಕೂ ಸಾಲದು, 50 ಲಕ್ಷ ರೂ. ಕುಡಿಯುವ ನೀರಿನ ಕೆಲಸಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ತಹಸೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಅವರು, ತುರ್ತು ಸಂದರ್ಭದಲ್ಲಿ ಮನೆ, ಮನೆಗೆ ನೀರು ಕೊಡಲು ಸಾಧ್ಯವಿಲ್ಲ. ಅಲ್ಲಲ್ಲಿ ಸಾಮೂಹಿಕವಾಗಿ ನೀರು ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದರು.
ಜಿಪಂ ಸದಸ್ಯ ಹರ್ಷಾನಂದ ಗುತ್ತೇದಾರ, ಮುಖಂಡ ವೀರಣ್ಣಾ ಮಂಗಾಣೆ, ಮಲ್ಲಣ್ಣಾ ನಾಗೂರೆ, ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಡಾ| ಸಂಜಯ ರೆಡ್ಡಿ, ಜೆಸ್ಕಾಂ ಎಇಇ ಮಾಣಿಕರಾವ್ ಕುಲಕರ್ಣಿ, ಮೊಹ್ಮದ ಸಲೀಂ, ತಾಪಂ ಸದಸ್ಯ ಪ್ರಭು ಸರಸಂಬಿ, ಇಒ ಅನಿತಾ ಕೊಂಡಾಪುರ, ತಡಕಲ್ ಗ್ರಾಪಂ ಅಧ್ಯಕ್ಷ ಶಿವುಪುತ್ರಪ್ಪ ಬೆಳ್ಳೆ, ನಿಂಬರಗಾ ಅಧ್ಯಕ್ಷ ಅಮೃತ ಬಿಬ್ರಾಣಿ, ಕವಲಗಾ ಅಧ್ಯಕ್ಷ ಭೀಮಾಶಂಕರ ಝಳಕಿ, ಮುನ್ನೊಳ್ಳಿ ಅಧ್ಯಕ್ಷ ಸಿದ್ಧರೂಡ ಬುಜುರ್ಕೆ, ಇಂಜಿನಿಯರ್ ಸಂಗಮೇಶ ಹಾಗೂ ಇನ್ನಿತರ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು ಪಾಲ್ಗೊಂಡಿದ್ದರು.
44 ಹಳ್ಳಿಗಳಲ್ಲಿ ನೀರಿನ ಸಮಸ್ಯೆ
143 ಹಳ್ಳಿ ಮತ್ತು 45 ತಾಂಡಾಗಳು ಸೇರಿ ಒಟ್ಟು 188 ಹಳ್ಳಿಯ ಪೈಕಿ ಈಗಾಗಲೇ 44 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ದಿನಗಳಂತೆ ಸಮಸ್ಯೆ ಹೆಚ್ಚತೊಡಗಿದೆ. ಈಗಾಗಲೇ 38 ಕೊಳವೆ ಬಾವಿ ತೋಡಿದ್ದು, ಅವುಗಳಲ್ಲಿ ಆರು ವಿಫಲವಾಗಿದ್ದು, 12 ಕೊಳವೆ ಬಾವಿಗೆ ಮೋಟಾರ್ ಅಳವಡಿಸಿ ನೀರು ಒದಗಿಸಲಾಗುತ್ತಿದೆ. ಇನ್ನುಳಿದವುಗಳಿಗೆ ಗ್ರಾಪಂನಲ್ಲಿನ ವಿಫಲ ಕೊಳವೆ ಬಾವಿ ಪಂಪಸೆಟ್‌ಗಳನ್ನು ಹೊಸ ಕೊಳವೆಗೆ ಅಳವಡಿಸಿ ನೀರು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. •ಮಲ್ಲಿಕಾರ್ಜುನ ಕಾರಬಾರಿ, ಎಇಇ, ಜಿಪಂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.