ಇಸ್ರೇಲ್‌ ಮಾದರಿ ನೀರಾವರಿಯಿಂದ ನೋವರಿ


Team Udayavani, Feb 10, 2019, 10:16 AM IST

10-february-12.jpg

ಬೆಳಗಾವಿ: ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ನೀರಾವರಿ ಯೋಜನೆಗೆ 80 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದು ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿ ತೀರದ ಗ್ರಾಮಗಳ ರೈತ ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ.

ಇದು ಸಮ್ಮಿಶ್ರ ಸರಕಾರದಿಂದ ಜಿಲ್ಲೆಗೆ ಸಿಕ್ಕಿರುವ ಹೊಸ ಯೋಜನೆ. ಮೇಲಾಗಿ ಇಸ್ರೇಲ್‌ ಮಾದರಿಯಲ್ಲಿ ರಾಜ್ಯದಲ್ಲಿ ಮೊದಲ ಬಾರಿ ಹನಿ ನೀರಾವರಿ ಪದ್ಧತಿಯ ಮೂಲಕ ಜಾರಿಯಾಗುತ್ತಿರುವ ಮೊದಲ ಜಿಲ್ಲೆ. ಇದರಿಂದ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಮಲಪ್ರಭಾ ನದಿ ತೀರ ವ್ಯಾಪ್ತಿಯ 39 ಗ್ರಾಮಗಳ ರೈತರು ಲಾಭ ಪಡೆಯಲಿದ್ದಾರೆ.

ಮಲಪ್ರಭಾ ನದಿ ತೀರದ 39 ಗ್ರಾಮಗಳಲ್ಲಿ ದೊಡ್ಡ ಹೊಂಡಗಳನ್ನು ನಿರ್ಮಾಣ ಮಾಡಿ ಅದಕ್ಕೆ ಮಲಪ್ರಭಾ ನದಿಯಿಂದ ನೀರು ತುಂಬಿಸುವುದು. ನಂತರ ಈ ಹೊಂಡದಿಂದ ನೀರು ಎತ್ತಿ ಕಾಲುವೆ ಇಲ್ಲವೇ ಪೈಪ್‌ಲೈನ್‌ಗಳ ಮೂಲಕ ಹೊಲಗಳಿಗೆ ಹನಿ ನೀರಾವರಿ ಮೂಲಕ ನೀರು ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಈ ಯೋಜನೆ ಅನುಷ್ಠಾನಕ್ಕೆ ಬಂದರೆ ರೈತರು ನದಿಯಲ್ಲಿ ಪಂಪ್‌ಸೆಟ್ ಇಟ್ಟು ತಮ್ಮ ಹೊಲಗಳಿಗೆ ನೀರು ಹರಿಸಲು ಪಡುವ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬಹುದು.

ಈಗ ನದಿ ತೀರದಲ್ಲಿ ಬರೀ ಪಂಪ್‌ಸೆಟ್‌ಗಳೇ ಕಾಣುತ್ತವೆ. ನದಿಯಲ್ಲಿ ನೀರು ಸರಿದಂತೆಲ್ಲ ರೈತರು ತಮ್ಮ ಪಂಪ್‌ಸೆಟ್‌ಗಳನ್ನು ಇನ್ನೂ ಆಳಕ್ಕೆ ಸರಿಸುತ್ತಲೇ ಹೋಗುತ್ತಾರೆ. ಆಗ ಇದರಿಂದ ಅನೇಕ ರೀತಿಯ ಸಮಸ್ಯೆಗಳು ಎದುರಾದರೂ ಇದು ಅನಿವಾರ್ಯ ಎಂಬ ಪರಿಸ್ಥಿತಿ ಇದೆ. ಮುಖ್ಯವಾಗಿ ಪ್ರತಿ ವರ್ಷ ಈ ಪಂಪ್‌ಸೆಟ್‌ಗಳಿಂದ ಉಂಟಾಗುವ ವಿದ್ಯುತ್‌ ಅವಘಡಗಳಿಂದ ರೈತರ ಸಾವು ನೋವುಗಳಾಗುತ್ತಿವೆ. ಇದನ್ನು ತಪ್ಪಿಸಲು ಈ ಹೊಸ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಹನಿ ನೀರಾವರಿ ಮೂಲಕ ರೈತರ ಹೊಲಗಳಿಗೆ ನೀರು ಹರಿಯಲಿದೆ. ಇದರಿಂದ ಈ ಯೋಜನೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಸಹ ಹೆಚ್ಚಾಗಲಿದೆ ಎಂಬುದು ಶಾಸಕರ ವಿಶ್ವಾಸ.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಈ ಯೋಜನೆ ಘೋಷಣೆ ಮಾಡಿರುವುದು ಸಂತಸ ತಂದಿದೆ. ಇದಕ್ಕೆ ಅನುಗುಣವಾಗಿ ಶೀಘ್ರದಲ್ಲೇ ತಮ್ಮ ಕ್ಷೇತ್ರ ವ್ಯಾಪ್ತಿಯ 39 ಹಳ್ಳಿಗಳಲ್ಲಿ ರೈತರ ಸಮಿತಿ ರಚನೆ ಮಾಡಿ ಇದರ ಬಗ್ಗೆ ಮಾಹಿತಿ ನೀಡಿ ಅದರ ಬಳಕೆ ಮಾಡಿಕೊಳ್ಳಲು ತಿಳಿವಳಿಕೆ ನೀಡಲಾಗುವುದು. ಒಮ್ಮೆ ಈ ಯೋಜನೆ ಅನುಷ್ಠಾನಕ್ಕೆ ಬಂದರೆ ನದಿ ತೀರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಕಾಣುವುದಿಲ್ಲ. ವಿದ್ಯುತ್‌ ಅವಘಡಗಳಿಂದ ಸಾವು ಸಂಭವಿಸುವುದಿಲ್ಲ ಎನ್ನುತ್ತಾರೆ ಶಾಸಕ ಮಹಾಂತೇಶ ಕೌಜಲಗಿ.

ಯೋಜನೆಯ ಘೋಷಣೆ ಬಗ್ಗೆ ರೈತರಲ್ಲಿ ಸಂತಸ ವ್ಯಕ್ತವಾಗಿದೆ. ಆದರೆ ಅದರ ಅನುಷ್ಠಾನ ಹಾಗೂ ಯಶಸ್ಸಿನ ಬಗ್ಗೆ ಅನುಮಾನ ಕಾಣುತ್ತಿದೆ. ಇದಕ್ಕೆ ಕಾರಣ ಈ ಭಾಗದ ರೈತರಲ್ಲಿ ಹನಿ ನೀರಾವರಿ ವ್ಯವಸ್ಥೆ ಬಗ್ಗೆ ಸರಿಯಾದ ತಿಳಿವಳಿಕೆ ಇಲ್ಲದೇ ಇರುವುದು. ಇದರ ಜೊತೆಗೆ ಇಸ್ರೇಲ್‌ ಮಾದರಿ ಇಲ್ಲಿಯ ರೈತರಿಗೆ ಸಂಪೂರ್ಣ ಹೊಸದು. ಅದಕ್ಕೆ ಹೊಂದಿಕೊಳ್ಳಲು ಸಾಕಷ್ಟು ಸಮಯ ಬೇಕು. ಇಸ್ರೇಲ್‌ ಮಾದರಿಯ ಹನಿ ನೀರಾವರಿ ವ್ಯವಸ್ಥೆಗೆ ಬೇಕಾಗುವ ವಾತಾವರಣ ನಮ್ಮ ಭಾಗದಲ್ಲಿ ಇಲ್ಲ ಎಂಬುದು ರೈತರ ಅಭಿಪ್ರಾಯ.

ಬೆಳಗಾವಿ ಜಿಲ್ಲೆಯಲ್ಲಿ ಈಗಲೂ ಶೇ.10 ರಷ್ಟು ಹನಿ ನೀರಾವರಿ ಪದ್ಧತಿ ಇಲ್ಲ. ಇಸೆ್ರೇಲ್‌ ಮಾದರಿ ಎಂದರೆ ಅದು ಸಂಪೂರ್ಣ ಸೆನ್ಸರ್‌ ವ್ಯವಸ್ಥೆಯ ಹನಿ ನೀರಾವರಿ ಪದ್ಧತಿ. ನಮ್ಮದು ಸಂಪೂರ್ಣ ಒಣಭೂಮಿ. ಇಸ್ರೇಲ್‌ ಹನಿ ನೀರಾವರಿ ಜಗತ್ತಿನಲ್ಲೇ ಅತ್ಯುನ್ನತವಾದ ತಂತ್ರಜ್ಞಾನದಿಂದ ರೂಪಿಸಲಾಗಿರುವಂಥದು. ಆದರೆ ಅಷ್ಟು ಸುಧಾರಣೆ ನಮ್ಮಲ್ಲಿ ಇಲ್ಲ. ಈ ಬಗ್ಗೆ ಸರಕಾರ ಆಲೋಚನೆ ಮಾಡಬೇಕು. ರೈತರಿಗೆ ಹನಿ ನೀರಾವರಿ ಬಗ್ಗೆ ಸಮಗ್ರ ತಿಳಿವಳಿಕೆ ನೀಡಬೇಕು ಎಂಬುದು ಭಾರತೀಯ ಕೃಷಿಕ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕಮತ್‌ ಅಭಿಪ್ರಾಯ.

ಸಿಎಂ ರಾಜ್ಯದಲ್ಲೇ ಮೊದಲ ಬಾರಿಗೆ ಇಸ್ರೇಲ್‌ ಮಾದರಿಯ ಹನಿ ನೀರಾವರಿ ಪದ್ಧತಿಯ ನೀರಾವರಿ ಯೋಜನೆಯನ್ನು ಜಿಲ್ಲೆಯಿಂದ ಆರಂಭಿಸುತ್ತಿದ್ದಾರೆ. ಅದೂ ಸಹ ಬೈಲಹೊಂಗಲದಿಂದ ಕಾರ್ಯರೂಪಕ್ಕೆ ತರುತ್ತಿರುವುದು ಹೆಮ್ಮೆಯ ಸಂಗತಿ. ಮಲಪ್ರಭಾ ನದಿಯಿಂದ ದೊಡ್ಡ ಕೆರೆಗಳಲ್ಲಿ ನೀರು ತುಂಬಿಸಿ ಅದರಿಂದ ಸಣ್ಣ ಸಣ್ಣ ಹೊಂಡಗಳಿಗೆ ನೀರು ಎತ್ತಲಾಗುತ್ತದೆ. ಆಲ್ಲಿಂದ ಹೊಲಗಳಿಗೆ ಹನಿ ನೀರಾವರಿ ಮೂಲಕ ನೀರು ಒದಗಿಸುವುದು ಯೋಜನೆಯ ಮುಖ್ಯ ಅಂಶ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ನೀರು ಉಳಿತಾಯವಾಗಲಿದೆ. ಸಾವು ನೋವುಗಳು ಸಹ ತಪ್ಪಲಿವೆ ಎನ್ನುತ್ತಾರೆ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಶಂಕರ ಮಾಡಲಗಿ.

ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ 80 ಕೋಟಿ ನೀರಾವರಿ ಯೋಜನೆ ಬೈಲಹೊಂಗಲ ಕ್ಷೇತ್ರದ ರೈತರ ಹಲವಾರು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಿದೆ. ಬಜೆಟ್ದಲ್ಲಿ ಹೇಳಿರುವಂತೆ ವಿಳಂಬ ಮಾಡದೇ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕೆ ರೈತರಿಗೆ ಎಲ್ಲ ಮಾಹಿತಿ ನೀಡಿ ಅವರ ಸಹಕಾರ ಪಡೆಯಲಾಗುವುದು.
•ಮಹಾಂತೇಶ ಕೌಜಲಗಿ, ಶಾಸಕರು

ಕೇಶವ ಆದಿ

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.