ಹೊಸ ನಿಲ್ದಾಣ ಕಾಮಗಾರಿ ಶೀಘ್ರ


Team Udayavani, Feb 10, 2019, 10:29 AM IST

10-february-13.jpg

ರಾಣಿಬೆನ್ನೂರ: ಗ್ರಾಮಾಂತರ ಪ್ರದೇಶದ ಹಳ್ಳಿಗಳ ಜನರು ನಿರ್ಭಯವಾಗಿ ಸಂಚರಿಸಲು ರೈಲು ಕ್ರಾಸಿಂಗ್‌ ಗೇಟ್‌ಗೆ, ರಸ್ತೆ ಕೆಳ ಸೇತುವೆಗಳ ನಿರ್ಮಾಣಕ್ಕೆ ಅನುದಾನ ನೀಡಿರುವ ಏಕೈಕ ಕೇಂದ್ರ ಸರ್ಕಾರ ಅಂದರೆ ಅದು ನರೇಂದ್ರ ಮೋದಿ ಸರ್ಕಾರ ಪ್ರಥಮವಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಶನಿವಾರ ತಾಲೂಕಿನ ಚಳಗೇರಿ ರೈಲು ನಿಲ್ದಾಣದ ಹತ್ತಿರ ಕರೂರ ಗೇಟ್‌ನ ಲೆವೆಲ್‌ ಕ್ರಾಸಿಂಗ್‌ ಗೇಟ್ ಸಂಖ್ಯೆ 213ರ ಬದಲಿಗೆ ನೂತನವಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆ ಮತ್ತು ಲೆವೆಲ್‌ ಕ್ರಾಸಿಂಗ್‌ ಗೇಟ್ ಬದಲಿಗೆ ನಿರ್ಮಿಸಲಾದ ರಸ್ತೆ ಮೇಲ್ಸೇತುವೆಗಳ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

145 ಕೋಟಿ ಅನುದಾನದಲ್ಲಿ ಕರೂರ ಗೇಟ್‌ನ ಲೆವೆಲ್‌ ಕ್ರಾಸಿಂಗ್‌ ಗೇಟ್ ಸಂಖ್ಯೆ 213 ರ ಬದಲಿಗೆ ನೂತನವಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆ ಮತ್ತು ಲೆವೆಲ್‌ ಕ್ರಾಸಿಂಗ್‌ ಗೇಟ್ ಸಂಖ್ಯೆ 250,252,256 ರ ಬದಲಿಗೆ ನಿರ್ಮಿಸಲಾದ ರಸ್ತೆ ಕೆಳ ಸೇತುವೆಗಳ ನಿರ್ಮಾಣ, ಯಲವಿಗಿಯ ಹೊಸ ರೈಲು ನಿಲ್ದಾಣ ನಿರ್ಮಾಣದ ಅಡಿಗಲ್ಲು ಸಮಾರಂಭ, ಕರಜಗಿ ಮತ್ತು ಬ್ಯಾಡಗಿ ನಿಲ್ದಾಣಗಳ ಹೊಸ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಲಾಗುವುದು ಎಂದರು.

ಈ ಭಾಗದ ಬಹುಜನರ ಕನಸಾದ ರಾಣಿಬೆನ್ನೂರಿಂದ ಶಿಕಾರಿಪುರ ಮಾರ್ಗವಾಗಿ ಶಿವಮೊಗ್ಗಕ್ಕೆ ಹೊಸ ರೈಲು ಮಾರ್ಗ ರಸ್ತೆ ಕಾಮಗಾರಿಗೆ ಸದ್ಯ ಚಾಲನೆ ನೀಡಲಾಗುವುದು. ಈ ಕುರಿತು ಮೋದಿಯವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಕೋಟ್ಯಂತರ ಜನರು ರೈಲಿನಲ್ಲಿಯೇ ಪ್ರಯಾಣಿಸುತ್ತಿದ್ದು, ಇದು ಸಾರ್ವಜನರಿಗೆ ಅನುಕೂಲವಾಗಿದೆ. ಅಲ್ಲದೆ ಬಡವರಿಗಂತೂ ವರದಾನವಾಗಿದೆ ಎಂದರು.

ಶಾಸಕ ನೆಹರು ಓಲೇಕಾರ, ಮಾಜಿ ಶಾಸಕ ಶಿವರಾಜ ಸಜ್ಜನ, ನೈರುತ್ಯ ರೈಲ್ವೆ ಮೈಸೂರು ವಿಭಾಗದ ವ್ಯವಸ್ಥಾಪಕಿ ಅಪರ್ಣ ಗರಗ ಮಾತನಾಡಿದರು. ಕರೂರ ಗ್ರಾಪಂ ಅಧ್ಯಕ್ಷ ಚೋಳಪ್ಪ ಕಚ್ಚರಬಿ ಅಧ್ಯಕ್ಷತೆ ವಹಿಸಿದ್ದರು. ಚಳಗೇರಿ ಗ್ರಾಪಂ ಅಧ್ಯಕ್ಷ ಕರೇಗೌಡ ದೂಳೆಹೊಳಿ, ಜಿಪಂ ಸದಸ್ಯರಾದ ಮಂಗಳಗೌರಿ ಪೂಜಾರ, ಶಿವಾನಂದಪ್ಪ ಕನ್ನಪ್ಪಳವರ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ ಸದಸ್ಯ ರಾಮಣ್ಣ ಬೆನ್ನೂರ, ರತ್ನವ್ವ ಇಟಗಿ, ಹೊನ್ನಪ್ಪ ಮುಡದ್ಯಾವಣ್ಣನವರ. ಡಾ| ನಾಗೇಶ ಗೌಡರ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.