ಜಾಲ್ಸೂರು-ಕಾಸರಗೋಡು ರಸ್ತೆ: ಅಪಾಯಕಾರಿ ತಿರುವು


Team Udayavani, Feb 11, 2019, 5:51 AM IST

11-february-5.jpg

ಜಾಲ್ಸೂರು: ಸುಳ್ಯ- ಕಾಸರಗೋಡು ರಸ್ತೆಯಲ್ಲಿ ಜಾಲ್ಸೂರು ಗೇಟ್ನಿಂದ ಮುಂದೆ ದೊಡ್ಡ ತಿರುವಿದ್ದು, ನಿರಂತರ ಅಪಘಾತಗಳು ನಡೆಯುತ್ತಿವೆ. ವಾಹನ ದಟ್ಟನೆ ಇರುವ ರಸ್ತೆಯಲ್ಲಿ ಕಾರು, ಬೈಕ್‌ಗಳು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬೀಳುತ್ತವೆ. ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಜನಪ್ರತಿನಿಧಿಗಳ ಜಾಣ ಮೌನವೂ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಹಲವು ವರ್ಷಗಳಿಂದ ಅಪಘಾತಗಳು ಸತತವಾಗಿ ನಡೆಯುತ್ತಿರುವ ಕುರಿತು ‘ಉದಯವಾಣಿ’ ಸುದಿನದಲ್ಲಿ ವಿಶೇಷ ವರದಿ ಪ್ರಕಟಿಸಲಾಗಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಭಾರೀ ಅನಾಹುತ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಸಂಭಾವ್ಯ ಅಪಾಯ ತಪ್ಪಿಸಲಾದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸುವುದು ಒಳಿತು.

ವ್ಯರ್ಥ ತಡೆಗೋಡೆ
ಲೋಕೋಪಯೋಗಿ ಇಲಾಖೆಯಿಂದ 2003-2004ರಲ್ಲಿ ಜಾಲ್ಸೂರು ತಿರುವಿನಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಪರಿಸ್ಥಿತಿ ಬದಲಾಗಿಲ್ಲ. ಕಾಮಗಾರಿಯ ಅವ್ಯವಸ್ಥಿತ ನಿರ್ವಹಣೆಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅನುದಾನದ ಕೊರತೆ ಕಾರಣ ನೀಡಿ ಕಾಮಗಾ ರಿಯನ್ನು ಅರೆಬರೆ ನಡೆಸಲಾಗಿತ್ತು.

ಸೂಚನ ಫ‌ಲಕವೂ ಇಲ್ಲ
ಇತ್ತೀಚೆಗೆ ಕಾರೊಂದು ಇದೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಅದೃಷ್ಟ ವಶಾತ್‌ ಯಾವುದೇ ಪ್ರಾಣ ಹಾನಿಯಾಗಿ ರಲಿಲ್ಲ. ಪ್ರಯಾಣಿಕರ ಗಮನಕ್ಕಾಗಿ ರಸ್ತೆ ಬದಿ ‘ಅಪಘಾತ ವಲಯ’ ಎನ್ನುವ ಸೂಚನ ಫ‌ಲಕವನ್ನೂ ಅಳವಡಿಸಿಲ್ಲ. ಮಳೆಗಾಲದಲ್ಲಿ ಇಲ್ಲಿ ಮಣ್ಣು ಕುಸಿಯುತ್ತಿದ್ದರೂ ಅಧಿಕಾರಿಗಳು ಭರವಸೆ ಕೊಟ್ಟು ಮತ್ತೆ ಆ ಕಡೆ ತಿರುಗಿ ನೋಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ತವ್ಯಮರೆತ ಜನಪ್ರತಿನಿಧಿಗಳು
ತಿರುವಿನ ಸಮಸ್ಯೆಯ ಕುರಿತು ಜನಪ್ರತಿನಿಧಿಗಳಿಗೆ ಹಲವು ವರ್ಷಗಳಿಂದ ಮನವಿ ಕೊಟ್ಟರೂ, ಯಾವುದೇ ಸ್ಪಂದನೆ ಇಲ್ಲ. ಗ್ರಾಮಸಭೆಯಲ್ಲೂ ವಿಷಯ ಪ್ರಸ್ತಾವಿಸಲಾಗಿದೆ. ಅಭಿವೃದ್ಧಿಯ ಮಾತು ಚುನಾವಣೆಯ ಸಂದರ್ಭದಲ್ಲಿ ಮತಕ್ಕಾಗಿ ಹೇಳುತ್ತಾರೆ. ಆಮೇಲೆ ನಮ್ಮ ಕಡೆ ತಿರುಗಿ ಕೂಡ ನೋಡುವುದಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಚೇರಿ ಗಳಿಗೆ ಅಲೆಯುವುದು ಬಿಟ್ಟು ಯಾವುದೇ ಪ್ರತಿಫ‌ಲವಿಲ್ಲ ಎನ್ನುವುದು ಜನರ ವಿಷಾದ. ತಾತ್ಕಾಲಿಕ ಪರಿಹಾರವಾದರೂ ಮಾಡಲಿ ಎಂದು ಜನರು ಆಗ್ರಹಿಸಿದ್ದಾರೆ.

ಕ್ರಮ ಕೈಗೊಳ್ಳುತ್ತೇವೆ
ತಿರುವಿನಲ್ಲಿ ಅಪಘಾತ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಇದೆ. ತತ್‌ಕ್ಷಣ ತಾತ್ಕಾಲಿಕ ಪರಿಹಾರ ಮಾಡಲಾಗುವುದು. ತಡೆ ಬೇಲಿ ಅಥವಾ ಟ್ಯಾಪ್‌ ಹಾಕಲು ಕ್ರಮ ಕೈಗೊಳ್ಳುತ್ತೇವೆ.
 -ಸಂದೇಶ್‌,
ಅಸಿಸ್ಟೆಂಟ್ ಎಂಜಿನಿಯರ್‌, ಪಿಡಬ್ಲ್ಯೂಡಿ, ಸುಳ್ಯ

ಅಧಿಕಾರಿಗಳ ನಿರ್ಲಕ್ಷ್ಯ 
ತಿರುವಿನಲ್ಲಿ ವಾಹನಗಳು ತೋಟಕ್ಕೆ ಬೀಳುವುದು ಸಾಮಾನ್ಯವಾಗಿವೆ. ಇತ್ತೀಚೆಗೆ ಕಾರೊಂದು ಪಲ್ಟಿಯಾಗಿ ನಜ್ಜುಗುಜ್ಜಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯ  ಅನಾಹುತಗಳಿಗೆ ಕಾರಣವಾಗುತ್ತಿವೆ.
– ಶೇರ್ಕ ಕಾಳಮನೆ,
ಜಾಲ್ಸೂರು

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.