ಮುರಿದು ಬಿದ್ದ ಮರದ ಕೊಂಬೆ: ತಪ್ಪಿದ ಅನಾಹುತ


Team Udayavani, Feb 11, 2019, 7:23 AM IST

muridu.jpg

ಸಂತೆಮರಹಳ್ಳಿ: ಯಳಂದೂರು ಪಟ್ಟಣದ ಸಂತೆಮಾಳದಲ್ಲಿ ಭಾರೀ ಗಾತ್ರದ ಒಣಗಿದ ಅರಳಿ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ಭಾನುವಾರ ಜರುಗಿದೆ. ಇದರಿಂದ ವ್ಯಾಪಾರಿಯೊಬ್ಬರ ಬೈಕ್‌ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ: ಪಟ್ಟಣದಲ್ಲಿ ಪ್ರತಿ ಭಾನುವಾರ ಸಂತೆ ನಡೆಯುತ್ತದೆ. ಸುವರ್ಣಾವತಿ ನದಿದಡದಲ್ಲಿ ಇದಕ್ಕಾಗಿ ಸ್ಥಳವನ್ನು ನಿಗದಿ ಮಾಡಲಾಗಿದೆ. ಇದು ತರಕಾರಿ, ಕಾಯಿಪಲ್ಯಗಳ ಪ್ರಮುಖ ಮಾರುಕಟ್ಟೆಯಾಗಿದೆ. ಪ್ರತಿ ವಾರ ನೂರಾರು ವರ್ತಕರು ಹಾಗೂ ಸಾವಿರಾರು ಗ್ರಾಹಕರು ಇಲ್ಲಿ ವಹಿವಾಟು ನಡೆಸುತ್ತಾರೆ.

ಸಂತೆ ಮೈದಾನದ ಸುತ್ತುಗೋಡೆಗೆ ಹೊಂದಿಕೊಂಡಂತೆ ಬೃಹತ್‌ ಗಾತ್ರದ ಅರಳಿಮರವೂ ಇದೆ. ಆದರೆ ಇದರ ಬಹುತೇಕ ದೊಡ್ಡದೊಡ್ಡ ಕೊಂಬೆಗಳು ಒಣಗಿ ನಿಂತಿವೆ. ಈ ಹಿಂದೆಯೂ ಒಂದು ಕೊಂಬೆ ಬಿದ್ದು ಸುತ್ತುಗೋಡೆಯೇ ಜಖಂಗೊಂಡಿತ್ತು. ಆದರೆ ಆಗ ಸಂತೆ ಇಲ್ಲದ್ದರಿಂದ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಆಗಲೇ ಮರ ತೆರವುಗೊಳಿಸಿಕೊಡಬೇಕು ಎಂದು ಇಲ್ಲಿನ ವರ್ತಕರು ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು ಆದರೂ ಇದರ ತೆರವಿಗೆ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು.

ಭಾನುವಾರ ಸಂತೆಯ ಸಮಯದಲ್ಲೇ ನೀರಿನ ತೊಂಬೆಯ ಬಳಿ ಕೊಂಬೆ ಬಿದ್ದಿದೆ. ಪಕ್ಕದಲ್ಲೇ ಬೈಕ್‌ ಮೇಲೆ ಕುಳಿತಿದ್ದ ವ್ಯಾಪಾರಿ ನಿಂಗರಾಜು ಮೇಲೆ ಬಿದ್ದು ಸಣ್ಣ ಗಾಯಗಳಾಗಿದ್ದು, ಬೈಕ್‌ ಜಖಂಗೊಂಡಿದೆ. ಅಲ್ಲದೆ ಇದರ ಪಕ್ಕದಲ್ಲೇ ವಿದ್ಯುತ್‌ ತಂತಿಯೂ ಹಾದುಹೋಗಿದೆ. ಅದೃಷ್ಟವಶಾತ್‌ ತಂತಿಯ ಮೇಲೆ ಇದು ಬಿದ್ದಿದ್ದರೆ ಭಾರಿ ಪ್ರಮಾಣದ ದುರಂತವೊಂದು ಸಂಭವಿಸುವ ಅಪಾಯವೂ ಇತ್ತು ಎಂದು ವರ್ತಕರಾದ ನಾಗರಾಜು ತಿಳಿಸಿದರು.

ಮೂಲ ಸೌಲಭ್ಯಗಳೇ ಇಲ್ಲ: ಪಟ್ಟಣ ಪಂಚಾಯಿತಿ ವತಿಯಿಂದ ನಡೆಯುವ ಈ ಸಂತೆಯಲ್ಲಿ ಪ್ರತಿ ವಾರವೂ ಸುಂಕವನ್ನು ವಸೂಲಿ ಮಾಡಲಾಗುತ್ತದೆ. ಆದರೆ ಇಲ್ಲಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಸೋತಿದೆ. ಸಂತೆಯ ಮಧ್ಯೆ ಹಾದು ಹೋಗಿರುವ ವಿದ್ಯುತ್‌ ಕಂಬವನ್ನು ತೆರವುಗೊಳಿಸಬೇಕು. ಇದರ ಹಿಂಭಾಗ ಸಾಮೂಹಿಕ ಮಲಮೂತ್ರ ವಿಸರ್ಜನಾ ಸ್ಥಳವಾಗಿ ಮಾರ್ಪಟ್ಟಿದ್ದು ಅನೈರ್ಮಲ್ಯ ತಾಂಡವವಾಡುತ್ತಿದೆ. ಇಲ್ಲಿ ಸ್ವಚ್ಛತೆಗೆ ಆದ್ಯತೆ ನಿಡಬೇಕು. ಕುಡಿಯುವ ನೀರಿನ ತೊಂಬೆ ಇದ್ದರು ಕೆಲವು ಸಂದರ್ಭದಲ್ಲಿ ನೀರೆ ಇರುವುದಿಲ್ಲ.

ಇಲ್ಲಿಗೆ ಸಮರ್ಪಕ ನೀರಿನ ವ್ಯವಸ್ಥೆ ಮಾಡಬೇಕು. ಶನಿವಾರ ರಾತ್ರಿ ವೇಳೆಗೆ ವ್ಯಾಪಾರಿಗಳು ಸಾಮಾನು ಸರಂಜಾಮುಗಳನ್ನು ಇಲ್ಲಿ ಇಳಿಸಿಕೊಳ್ಳುತ್ತಾರೆ. ಆದರೆ ಇರುವ ಹೈಮಾಸ್ಟ್‌ ದೀಪ ಸರಿಯಾಗಿ ಉರಿಯುವುದೇ ಇಲ್ಲ ಹಾಗಾಗಿ ಇದನ್ನು ದುರಸ್ತಿಪಡಿಸಬೇಕು. ವ್ಯಾಪಾರಿಗಳು ಮಳೆ, ಗಾಳಿ, ಬಿಸಿಲಿನಲ್ಲೇ ಪ್ಲಾಸ್ಟಿಕ್‌ ಪರದೆ ಕಟ್ಟಿಕೊಂಡು ವ್ಯಾಪಾರ ಮಾಡುವ ಸ್ಥಿತಿ ಇದ್ದು ಇದಕ್ಕೆ ಸೂಕ್ತ ಛಾವಣಿಯ ವ್ಯವಸ್ಥೆ ಮಾಡಬೇಕು ಎಂಬುದು ಇಲ್ಲಿನ ವ್ಯಾಪಾರಿಗಳಾದ ಮಹಾದೇವಸ್ವಾಮಿ, ನಿಂಗರಾಜು ಸೇರಿದಂತೆ ಹಲವರ ಆಗ್ರಹವಾಗಿದೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.