ಶಾಲೆ-ಅಂಗನವಾಡಿ ಸ್ಥಿತಿ ಕಂಡು ಬೇಸರಗೊಂಡ ನ್ಯಾ| ಸಂಜೀವಕುಮಾರ


Team Udayavani, Feb 11, 2019, 8:42 AM IST

bell-3.jpg

ಬೀದರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ನ್ಯಾ|ಹಂಚಾಟೆ ಸಂಜೀವಕುಮಾರ ಅವರು ರವಿವಾರ ತಾಲೂಕಿನ ಖಾಶೆಂಪೂರ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಸ್ಥಿತಿ ಪರಿಶೀಲಿಸಿದರು.

ಬಾಗಿಲು ಮತ್ತು ಕಿಟಕಿಗಳಿಲ್ಲದೆ, ಅನೈತಿಕ ಚಟುವಟಿಕೆಗಳ ತಾಣದಂತಾಗಿದ್ದ ಶಾಲೆಯ ಕೆಲವು ಕೋಣೆಗಳು, ಅವುಗಳ ದುರಾವಸ್ಥೆ, ಅಡುಗೆ ಕೋಣೆಯಲ್ಲಿ ಕಸ ಹಾಕಿರುವುದು, ಅದರ ಹಿಂಭಾಗದಲ್ಲಿಯೇ ಮೂತ್ರ ಮಾಡುತ್ತಿರುವುದನ್ನು ಕಂಡು ನ್ಯಾಯಾಧೀಶರು ತೀವ್ರ ಬೇಸರ ವ್ಯಕ್ತಪಡಿಸಿದರು.

ಸ್ಥಳಕ್ಕೆ ಶಿಕ್ಷಣಾಧಿಕಾರಿಗಳು ಆಗಮಿಸಿದಾಗ, ಈ ಶಾಲೆ ಸುಧಾರಿಸಲು ತಾವೇನು ಪ್ರಯತ್ನ ಮಾಡಿದ್ದೀರಿ? ಯಾರಿಗಾದರೂ ಮನವಿ ಕೊಟ್ಟಿದ್ದೀರಾ? ಜಿಲ್ಲಾಧಿಕಾರಿಗಳು ಇಲ್ಲವೇ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರ ಗಮನಕ್ಕೆ ತಂದಿದ್ದೀರಾ? ಇದರ ಬಗ್ಗೆ ತಾವೇನು ಕ್ರಮ ಕೈಗೊಂಡಿದ್ದೀರಿ? ನಿಮ್ಮಲ್ಲಿ ಸೂಕ್ಷ್ಮತೆ ಇಲ್ಲವೆ? ಸಂವೇಧನಾಶೀಲತೆ ಇಲ್ಲವೇ? ಎಂದು ಶಿಕ್ಷಣ ಅಧಿಕಾರಿಗಳಿಗೆ ಪ್ರಶ್ನಿಸಿದ ನ್ಯಾಯಾಧೀಶರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಧೋರಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಶಾಲಾ ಕೋಣೆಗಳಲ್ಲಿ ತರಗತಿಗಳು ನಡೆಯುವುದಿಲ್ಲ. ಇವು ಶಿಥಿಲಾವಸ್ಥೆಯಲ್ಲಿರುವ ಕಾರಣ ಕಿಟಕಿ, ಬಾಗಿಲುಗಳು ಮುರಿದಿವೆ. ಈ ಕೋಣೆಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಿಕ್ಷಣಾಧಿಕಾರಿಗಳು ಪ್ರತಿಕ್ರಿಯಿಸಿದರು.

ಈ ವೇಳೆ, ನ್ಯಾಯಾಧೀಶರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ತಿಳಿಸಿದರು. ಇಂತಹ ದುಸ್ಥಿತಿ ಬಹುತೇಕ ಎಲ್ಲ ಹಳ್ಳಿಗಳಲ್ಲೂ ಇದೆ. ಎಲ್ಲ ಶಿಕ್ಷಕರನ್ನು ಒಂದೆಡೆ ಸೇರಿಸಿ ಅವರಿಗೆ ಎಚ್ಚರಿಕೆ ನೀಡಿರಿ. ನಿಮ್ಮಲ್ಲಿ ಪ್ರಾಧಿಕಾರದ ವಿನಂತಿ ಇದೆ ಎಂದು ಸಿಇಒ ಅವರಿಗೆ ಹೇಳಿದರು.

ಹಾಳು ಹೊಡೆಯುವಂತಿದ್ದ ಶಾಲಾ ಕೋಣೆಗಳು, ಆಟದ ಮೈದಾನ ಸರಿಯಾಗಿಲ್ಲದಿರುವುದು, ಸಸಿ ನೆಡದೇ ಇರುವುದನ್ನು ಗಮನಿಸಿದ ನ್ಯಾಯಾಧೀಶರು, ಇಂತಹ ಪರಿಸರದಲ್ಲಿ ಮಕ್ಕಳಿಗೆ ಕಲಿಸುವುದು ತುಂಬಾ ಕಷ್ಟ. ಇದು ನಾಗರಿಕ ಸಮಾಜ ಅನ್ನಿಸಿಕೊಳ್ಳುವುದಿಲ್ಲ. ಇದು ಸ್ಪಷ್ಟವಾಗಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಇಂತಹ ಪರಿಸರದಲ್ಲಿ ಮಕ್ಕಳು ಕಲಿಯಲು ಹೇಗೆ ಸಾಧ್ಯ? ನಿಮ್ಮ ಧೋರಣೆ ಸರಿಯಲ್ಲ. ಇದು ಬಡತನವನ್ನು ಅಣಕಿಸಿದಂತಿದೆ. ಶಿಕ್ಷಣ ಇಲಾಖೆಯು ಇತ್ತ ಕಡೆ ಗಮನ ಕೊಡಬೇಕು ಎಂದು ತಿಳಿಸಿದರು.

ಶಿಕ್ಷಕಿಯರ ವಿರುದ್ಧ ದೂರು: ನಮ್ಮೂರಿಗೆ ಶಿಕ್ಷಕಿಯರು ಬಂದ ಮೇಲೆಯೇ ಈ ದುಸ್ಥಿತಿ ಬಂದಿದೆ. ಅವರಿಂದ ಊರಿಗೆ ಕೆಟ್ಟ ಹೆಸರು ಬರುತ್ತಿದೆ. ಅವರಲ್ಲಿ ಹೊಂದಾಣಿಕೆ ಇಲ್ಲ. ಸರಿಯಾಗಿ ಪಾಠ ಮಾಡುವುದಿಲ್ಲ. ನೊಟೀಸ್‌ ನೀಡಿದರೆ ಹರಿದು ಹಾಕುತ್ತಾರೆ. ಬೇರೆಡೆ ವರ್ಗಾವಣೆ ಮಾಡಿದರೆ ಸಂಘಗಳಿಂದ ಒತ್ತಡ ಹೇರಿ ಮತ್ತೆ ಇಲ್ಲಿಗೆ ಬರುತ್ತಾರೆ. ಮುಖ್ಯ ಶಿಕ್ಷಕರಾದ ಹೂಗಾರ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಅವರ ಮಾತುಗಳನ್ನು ಯಾರೂ ಕೂಡ ಕೇಳುವುದಿಲ್ಲ. ಎಂಟನೇ ತರಗತಿ ಓದುವ ಮಕ್ಕಳಿಗೆ ಎಬಿಸಿಡಿ ಬರುವುದಿಲ್ಲ. ಮಕ್ಕಳು ಹೊರಗಡೆ ಆಟವಾಡುತ್ತಿದ್ದರೆ ತಮಗೇನೂ ಸಂಬಂಧವಿಲ್ಲ ಎನ್ನುವಂತೆ ಶಿಕ್ಷಕಿಯರು ಒಳಗಿರುತ್ತಾರೆ ಎಂದು ಸ್ಥಳದಲ್ಲಿದ್ದ ಎಲ್ಲರೂ ಶಾಲಾ ಶಿಕ್ಷಕಿಯರ ವಿರುದ್ಧ ದೂರಿದರು. ಈ ಬಗ್ಗೆ ಕೂಡಲೇ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ವರದಿ ಮಾಡಿರಿ ಎಂದು, ನ್ಯಾಯಾಧೀಶರು ಬಿಆರ್‌ಸಿ ಅವರಿಗೆ ನಿರ್ದೇಶನ ನೀಡಿದರು.

ಏಕತೆಯಿಂದ ಬದಲಾವಣೆ: ಬೇರೆ ಬೇರೆ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಇದ್ದಾಗ ಇಂತಹ ದುಸ್ಥಿತಿ ಎದುರಾಗುತ್ತದೆ. ಎಲ್ಲರೂ ಒಟ್ಟು ಗೂಡಿ ಕೆಲಸ ಮಾಡಿದಾಗ ಬದಲಾವಣೆ ತರಲು ಸಾಧ್ಯವಾಗುತ್ತದೆ. ತಾವು ಕೂಡ ಶಿಕ್ಷಕರಿಗೆ ಅರಿವು ಮೂಡಿಸಿರಿ. ಕಾನೂನಿನ ಬಗ್ಗೆ ತಿಳಿವಳಿಕೆ ಮೂಡಿಸಿರಿ ಎಂದು ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಮನಗೂಳಿ ಪ್ರೇಮಾವತಿ, ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ಆರ್‌.ರಾಘವೇಂದ್ರ ಹಾಗೂ ಇನ್ನಿತರ ನ್ಯಾಯಾಧೀಶರಿಗೆ ಸಲಹೆ ನೀಡಿದರು.

ಗ್ರಾಮಸಭೆಗಳಲ್ಲಿ ಮಾತನಾಡಿ: ಗ್ರಾಮಸಭೆ ಎಂದರೆ ಅದು ಗ್ರಾಮದ ಸಂಸತ್ತು ಇದ್ದ ಹಾಗೆ. ತಾವು ನಡೆಸುವ ಗ್ರಾಮಸಭೆಗಳಲ್ಲಿ ಶಾಲೆಯ ಸ್ಥಿತಿಗತಿ ಬಗ್ಗೆ ಚರ್ಚಿಸಿಲ್ಲವೇ ಎಂದು ನ್ಯಾಯಾಧೀಶರು, ಗ್ರಾಪಂ ಸದಸ್ಯರಿಗೆ ಕೇಳಿದರು. ಗ್ರಾಮಸಭೆಗಳಲ್ಲಿ ಶಾಲೆಯ ಬಗ್ಗೆ ಒಬ್ಬರೂ ಮಾತನಾಡುವುದಿಲ್ಲ ಎಂದು ಕೆಲವರು ಹೇಳಿದರು. ದಯವಿಟ್ಟು ತಾವು ಇನ್ನುಮುಂದೆ ಗ್ರಾಮಸಭೆಗಳಲ್ಲಿ ಶಾಲೆಯ ಸ್ಥಿತಿಗತಿಯ ಬಗ್ಗೆ ಚರ್ಚಿಸಿರಿ. ನಿಮ್ಮ ಅಭಿವೃದ್ಧಿ ನಿಮ್ಮ ಕೈಯಲ್ಲಿಯೇ ಇದೆ ಎಂದು ನ್ಯಾಯಾಧೀಶರು ಗ್ರಾಮಸ್ಥರಿಗೆ ಸಲಹೆ ನೀಡಿದರು. ಇನ್ನುಮುಂದೆ ಸ್ವಚ್ಛತೆಗೆ ಒತ್ತು ಕೊಡುತ್ತೇವೆ ಎಂದು ನಿಮ್ಮ ಮುಂದೆ ಶಪಥ ಮಾಡುತ್ತೇವೆ. ಆದರೆ, ಇಲ್ಲಿನ ಎಲ್ಲ ಶಿಕ್ಷಕಿಯರನ್ನು ಬೇರೆ ಕಡೆ ವರ್ಗಾವಣೆ ಮಾಡಿ, ಗ್ರಾಮದ ಅಭಿವೃದ್ಧಿಗೆ ಸಹಕರಿಸಿರಿ ಎಂದು ಗ್ರಾಮಸ್ಥರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.

ಅಂಗನವಾಡಿಗಳಿಗೆ ಭೇಟಿ: ಗ್ರಾಮದ 2ನೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ನ್ಯಾಯಾಧೀಶರು, ಇಲ್ಲಿ ತಾವು ಅಡುಗೆಗೆ ಬಳಸುವ ಎಣ್ಣೆ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದನ್ನು ಪರೀಕ್ಷಿಸಿ, ಬಳಸಿರಿ ಎಂದು ಅಂಗನವಾಡಿ ಸಹಾಯಕಿಯರಿಗೆ ಸೂಚಿಸಿದರು. ಅಂಗನವಾಡಿ ಕೇಂದ್ರ-1ರಲ್ಲಿ ಕಿಟಕಿಗಳು ಇಲ್ಲದಿರುವುದನ್ನು ನೋಡಿದರು. ವಿದ್ಯುತ್‌ ಬಿಲ್‌ ಕಟ್ಟದೇ ಇರುವುದಕ್ಕೆ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಅಂಗನವಾಡಿ ಸಹಾಯಕಿಯರು ತಿಳಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಶ್ರೇಯಾಂಶ ದೊಡ್ಡಮನಿ ಇದ್ದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.