ಏತ ನೀರಾವರಿಗೆ ಆದ್ಯತೆ: ಸಂಭ್ರಮ
Team Udayavani, Feb 11, 2019, 9:09 AM IST
ಶಿರಾಳಕೊಪ್ಪ: ನೀರಾವರಿ ಹೋರಾಟದ ಫಲವಾಗಿ ಈ ಬಾರಿಯ ಬಜೆಟ್‌ನಲ್ಲಿ ಶಿಕಾರಿಪುರ ತಾಲೂಕಿಗೆ ಆದ್ಯತೆ ಸಿಕ್ಕಿದೆ ಎಂದು ಮಾಜಿ ಶಾಸಕ ಬಿ.ಎನ್. ಮಹಾಲಿಂಗಪ್ಪ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ವೃತ್ತದಲ್ಲಿ ಶನಿವಾರ ತಾಲೂಕಿನ ಏತ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ಸರ್ಕಾರ ರೂ. 200 ಕೋಟಿ ನೀಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರು ನಡೆಸಿದ ಸಂಭ್ರಮಾಚರಣೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಇಷ್ಟು ವರ್ಷ ಜನಪ್ರತಿನಿಧಿಯಾಗಿ ಅಧಿಕಾರ ಅನುಭವಿಸಿದ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ರಾಘವೇಂದ್ರ ನೀರಾವರಿ ಯೋಜನೆ ಅನುಷ್ಠಾನ ಸಾಧ್ಯವಿಲ್ಲ ಎಂದಿದ್ದರು. ಪ್ರತಿಪಕ್ಷಗಳು ಹೋರಾಟ ಕೈಗೆತ್ತಿಕೊಂಡ ನಂತರ ತರಾತುರಿಯಲ್ಲಿ ನೀರಾವರಿ ಹೋರಾಟ ಮಾಡುವ ನಾಟಕ ಮಾಡಿದ್ದರು. ಈಗ ಕುಮಾರಸ್ವಾಮಿ ಸರ್ಕಾರದ ಕೆಲಸವನ್ನು ಶ್ಲಾಘಿಸುವ ಬದಲು ಸರ್ಕಾರ ಬೀಳಿಸುವ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಬಿಳಿಕಿ ನಾಗರಾಜ ಗೌಡ ಮಾತನಾಡಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹಾಗೂ ಎಚ್.ಟಿ. ಬಳಿಗಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ ಪ್ರತಿಫಲವಾಗಿ ತಾಲೂಕಿನ ರೈತರಿಗೆ ನೀರಾವರಿ ಯೋಜನೆ ಮಂಜೂರಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ. ಪಕ್ಕೀರಪ್ಪ ಮಾತನಾಡಿ, ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ನೀರಾವರಿ ಯೋಜನೆ ಜಾರಿಗೆ ಮನವಿ ಮಾಡಲಾಗಿತ್ತು. ಆಗ ಕುಮಾರಸ್ವಾಮಿ ನೀರಾವರಿ ಯೋಜನೆ ಜಾರಿಗೆ ತಂದು ಇಲ್ಲಿಗೆ ಮತ್ತೆ ಬರುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಈಗ ಕೊಟ್ಟ ಮಾತನ್ನು ಈಡೇರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಕ್ಬೂಲ್ ಸಾಬ್, ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿಲಾಲ್, ಟೌನ್ ಜೆಡಿಎಸ್ ಅಧ್ಯಕ್ಷ ಬೆಲವಂತನಕೊಪ್ಪ ರಾಘವೇಂದ್ರ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಯಾಜ್ ಅಹ್ಮದ್, ಪಪಂ ಸದಸ್ಯರಾದ ಪಿ.ಜಾಫರ್, ಎಂ.ಆರ್. ರಾಘವೇಂದ್ರ , ತಡಗಣಿ ರಾಜಣ್ಣ, ಮುದಾಸಿರ್, ಕೆಡಿಪಿ ಸದಸ್ಯ ಕೋಡಿಹಳ್ಳಿ ಉಮೇಶ್, ಹಿರೇಜಂಬೂರು ಚಂದ್ರಪ್ಪ, ಹಿರೇಜಂಬೂರು ಬಸವರಾಜಪ್ಪ ಇದ್ದರು.
ಯಡಿಯೂರಪ್ಪರಿಂದ ಜನರ ದಿಕ್ಕು ತಪ್ಪಿಸುವ ಕೆಲಸ
ಶಿರಾಳಕೊಪ್ಪ: ಯಡಿಯೂರಪ್ಪ ಮತ್ತು ಅವರ ಮಗ ರಾಘವೇಂದ್ರ ತಾಲೂಕಿನ ನೀರಾವರಿ ಯೋಜನೆಗೆ ಹಣ ಮಂಜೂರು ನಾವು ಮಾಡಿಸಿಕೊಂಡು ಬಂದಿದ್ದೇವೆ ಎಂದು ತಾಲೂಕಿನ ಜನತೆಯ ಮುಂದೆ ಸುಳ್ಳು ಹೇಳಿ ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತಿದ್ದಾರೆ. ಧೈರ್ಯವಿದ್ದರೆ ಜನತೆಯ ಮುಂದೆ ಸತ್ಯ ಹೇಳಲಿ ಎಂದು ಜೆಡಿಎಸ್ ಮುಖಂಡ ಎಚ್.ಟಿ. ಬಳಿಗಾರ್ ಸವಾಲು ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಳಗುಂದ, ಉಡುಗಣಿ ಹೋಬಳಿ ರೈತರಿಗೆ ನೀರಾವರಿ ಯೋಜನೆ ಮಾಡುತ್ತೇನೆ ಎಂದು ಭರವಸೆ ನೀಡುತ್ತಾ ಬಂದ ಇವರು 40 ವರ್ಷದ ಹಿಂದೆ ಶಾಸಕರಾದಾಗ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ರೈಲ್ವೆ ಯೋಜನೆಗೆ ರೂ. 950 ಕೋಟಿ ವೆಚ್ಚಕ್ಕೆ ಕೇವಲ 10 ಲಕ್ಷ ಮಂಜೂರು ಮಾಡಿಸಿರುವ ಸಂಸದರು, ರೂ. 850 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ರೂ. 200 ಕೋಟಿ ಮಂಜೂರು ಮಾಡಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಟೀಕೆ ಮಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು. ಏತ ನೀರಾವರಿ ಯೋಜನೆಯ ಹೋರಾಟ ಹಿರೇಜಂಬೂರು ಗ್ರಾಮಸ್ಥರು, ರೈತ ಸಂಘ ಹಾಗೂ ಹಸಿರು ಸೇನೆ, ಸುವರ್ಣ ಕರ್ನಾಟಕ ಸಂಘದ ನೇತೃತ್ವದಲ್ಲಿ ಉಗ್ರರೂಪ ಪಡೆಯಿತು. ಬಿ.ಎಸ್.ಯಡಿಯೂರಪ್ಪ ಅವರಿಗೆ ಕಳೆದ 8 ತಿಂಗಳಿನಿಂದ ಶಿಕಾರಿಪುರ ತಾಲೂಕು ಎಲ್ಲಿದೆ ಎನ್ನುವುದೇ ಮರೆತು ಹೋಗಿದೆ. ಅವರು ಸಂಪೂರ್ಣ ಆಪರೇಶನ್ ಕಮಲದಲ್ಲಿಯೇ ಮುಳುಗಿ ಹೋಗಿದ್ದಾರೆ. ಇನ್ನು ನೀರಾವರಿ ಯೋಜನೆ ಬಗ್ಗೆ ಯೋಚನೆ ಮಾಡಲು ಸಮಯ ಇರಬೇಕಲ್ಲ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.