ಸ್ನೇಹಿತರಿಬ್ಬರ ನಡುವಣ ಜಗಳ ಕೊಲೆಯಲ್ಲಿ ಅಂತ್ಯ


Team Udayavani, Feb 12, 2019, 6:37 AM IST

obbana.jpg

ಬೆಂಗಳೂರು: ಕುಡಿತದ ಅಮಲಿನಲ್ಲಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕೆಂಗೇರಿ ಸ್ಯಾಟಲೈಟ್‌ ಟೌನ್‌ ನಿವಾಸಿ ವರುಣ್‌ (25) ಕೊಲೆಯಾಗಿದ್ದು, ಆತನಿಗೆ ಚಾಕುವಿನಿಂದ ಇರಿದು ಕೊಲೆಮಾಡಿದ ಆರೋಪಿ ರವಿ  ತಲೆಮರೆಸಿಕೊಂಡಿದ್ದಾನೆ.

ಟ್ರ್ಯಾಕ್ಟರ್‌ ಚಾಲಕನಾಗಿರುವ ವರುಣ್‌ ಹಾಗೂ ಆಟೋಚಾಲಕನಾಗಿರುವ ರವಿ ಹಲವು ವರ್ಷಗಳ ಸ್ನೇಹಿತರಾಗಿದ್ದು ಇತ್ತೀಚೆಗೆ ಇಬ್ಬರ ನಡುವೆ ಬೈಕ್‌ ಅಡವಿಟ್ಟುಕೊಳ್ಳುವ ವಿಚಾರಕ್ಕೆ ಜಗಳ ನಡೆದಿದ್ದು ಮಾತುಬಿಟ್ಟಿದ್ದರು. ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ಮುಂದುವರಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ರವಿ ಬಂಧನಕ್ಕೆ ಕೆಂಗೇರಿ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಭಾನುವಾರ ರಾತ್ರಿ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿರುವ ಬಾರ್‌ವೊಂದಕ್ಕೆ ಇಬ್ಬರು ಪ್ರತ್ಯೇಕವಾಗಿ ಬಂದು ಮದ್ಯ ಸೇವಿಸಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ವರುಣ್‌ ಪಾರ್ಕಿಂಗ್‌ ಜಾಗದಲ್ಲಿ ತನ್ನ ಬೈಕ್‌ ತೆಗೆಯುವಾಗ ರವಿ ಆಟೋಗೆ ತಗುಲಿದೆ.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಬಂದಿದ್ದು. ರವಿ ತನ್ನ ಬಳಿಯಿದ್ದ ಚಾಕುವಿನಿಂದ ವರುಣ್‌ ಎದೆಭಾಗಕ್ಕೆ ಎರಡು ಮೂರು ಬಾರಿ ಇರಿದು ಪರಾರಿಯಾಗಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ವರುಣ್‌ನನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು. 

ವರುಣ್‌ ಹಾಗೂ ರವಿ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ಖಚಿತ ಪಟ್ಟಿಲ್ಲ.ಬೈಕ್‌ ಅಡಮಾನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿತ್ತು ಎಂಬ ವಿಚಾರ ಗೊತ್ತಾಗಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದ್ದು, ಆರೋಪಿ ರವಿ ಬಂಧನಕ್ಕೆ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚೆನ್ನಣ್ಣನವರ್‌ ತಿಳಿಸಿದರು.

ಟಾಪ್ ನ್ಯೂಸ್

bhairathi ranagal review

Bhairathi Ranagal Review:  ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

bhairathi ranagal review

Bhairathi Ranagal Review:  ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.